AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರದ ಜನಗಣತಿ ಜೊತೆಗೆ ಜಾತಿಗಣತಿ ನಿರ್ಧಾರ ಸ್ವಾಗತಿಸುವೆ: ಸಿದ್ದರಾಮಯ್ಯ

ಸಿದ್ದರಾಮಯ್ಯನವರು ಕೇಂದ್ರ ಸರ್ಕಾರದ ಜಾತಿ ಗಣತಿ ನಿರ್ಧಾರವನ್ನು ಸ್ವಾಗತಿಸಿದ್ದು, ರಾಹುಲ್ ಗಾಂಧಿಯವರನ್ನು ಶ್ಲಾಘಿಸಿದ್ದಾರೆ. ಬಿಜೆಪಿಯನ್ನು ತೀವ್ರವಾಗಿ ಟೀಕಿಸಿದ ಅವರು, ಜಾತಿ ಗಣತಿ ಜೊತೆಗೆ ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆ ನಡೆಸುವಂತೆ ಒತ್ತಾಯಿಸಿದ್ದಾರೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳದ ಅಗತ್ಯವನ್ನು ಅವರು ಪ್ರಸ್ತಾಪಿಸಿದ್ದಾರೆ.

ಕೇಂದ್ರ ಸರ್ಕಾರದ ಜನಗಣತಿ ಜೊತೆಗೆ ಜಾತಿಗಣತಿ ನಿರ್ಧಾರ ಸ್ವಾಗತಿಸುವೆ: ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Follow us
ವಿವೇಕ ಬಿರಾದಾರ
|

Updated on: May 01, 2025 | 4:04 PM

ಬೆಂಗಳೂರು, ಮೇ 01: ಕೇಂದ್ರ ಸರ್ಕಾರ (Central Government) ಜನಗಣತಿ ಜೊತೆಗೆ ಜಾತಿ ಗಣತಿ (Caste census) ಮಾಡುಲು ಕೈಗೊಂಡಿರುವ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಈ ವಿಚಾರದಲ್ಲಿ ಸಂಸದ ರಾಹುಲ್ ಗಾಂಧಿ ಹಾಗೂ ಕೇಂದ್ರ ಸರ್ಕಾರವನ್ನು ನಾನು ಅಭಿನಂದಿಸುವೆ. ಪ್ರಧಾನಿ ಮೋದಿ ಅವರಿಗಿಂತ ರಾಹುಲ್ ಗಾಂಧಿಯವರನ್ನು ನಾನು ಅಭಿನಂದಿಸುತ್ತೇನೆ. ಕಳೆದ ಎರಡೂವರೆ ವರ್ಷಗಳಿಂದ ಜಾತಿಗಣತಿಗೆ ರಾಹುಲ್​ ಗಾಂಧಿಯವರು ಒತ್ತಾಯಿಸಿದ್ದರು. ನಾಯಕ ರಾಹುಲ್ ಗಾಂಧಿಯವರನ್ನು ಅಭಿನಂದಿಸುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು.

ಕಾವೇರಿ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು. ಇದನ್ನೇ ನಾವು ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದೆವು. ರಾಹುಲ್‌ ಗಾಂಧಿಯವರು ಪದೇಪದೆ ಒತ್ತಡ ಹಾಕಿದ್ದರಿಂದ ನಿರ್ಧಾರ ಕೈಗೊಂಡಿದ್ದಾರೆ. ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಆತುರವಾಗಿ ನಿರ್ಧಾರ ಕೈಗೊಂಡಿದ್ದಾರೆ. ಕೇವಲ ಜನಗಣತಿ ಜೊತೆಗೆ ಜಾತಿಗಣತಿ ನಡೆಸಿದರೆ ಸಾಲದು, ಕೇಂದ್ರ ಸರ್ಕಾರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಲಿ ಎಂದು ಒತ್ತಾಯಿಸಿದರು.

2015ರಲ್ಲೇ 192 ಕೋಟಿ ರೂ. ಖರ್ಚು ಮಾಡಿ ಸಮೀಕ್ಷೆ ನಡೆಸಿದ್ದೇವೆ. ಜಾತಿಗಣತಿ ವರದಿಯನ್ನು ಸ್ವೀಕರಿಸಿ ಸಂಪುಟದಲ್ಲಿ ಮಂಡಿಸಲಾಗಿದೆ. ಸಚಿವರ ಅಭಿಪ್ರಾಯವನ್ನು ಪಡೆದು ಮುಂದೆ ನಿರ್ಧಾರ ಕೈಗೊಳ್ಳುತ್ತೇವೆ. ಬಿಜೆಪಿಯವರು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿರುವವರು. ಎಲ್ಲ ಆಯೋಗಗಳ ವರದಿಯನ್ನೂ ಬಿಜೆಪಿಯವರು ವಿರೋಧಿಸಿದ್ದಾರೆ. ಇತಿಹಾಸ ನೋಡಿದರೆ ಎಂದೂ ಸಾಮಾಜಿಕ ನ್ಯಾಯದ ಪರವಾಗಿ ಬಿಜೆಪಿಯವರು ಇಲ್ಲ ಎಂದು ವಾಗ್ದಾಳಿ ಮಾಡಿದರು.

ಇದನ್ನೂ ಓದಿ
Image
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
Image
ದಿಢೀರ್ ನಿರ್ಧಾರವಲ್ಲ; ಜಾತಿ ಗಣತಿ ಬಗ್ಗೆ ಸಚಿವ ಕಿಶನ್ ರೆಡ್ಡಿ ಸ್ಪಷ್ಟನೆ
Image
ಕೇಂದ್ರ ಸರ್ಕಾರದ ಜಾತಿ ಗಣತಿಯ ನಿರ್ಧಾರಕ್ಕೆ ರಾಹುಲ್ ಗಾಂಧಿ ಸ್ವಾಗತ
Image
ಜನಗಣತಿಯಲ್ಲಿ ಜಾತಿಗಣತಿ; ಕೇಂದ್ರದ ನಿರ್ಧಾರಕ್ಕೆ ಕಾಂಗ್ರೆಸ್ ಹೇಳಿದ್ದೇನು?

ನಿರ್ದಿಷ್ಟ ಸಮಯದೊಳಗೆ ಕೇಂದ್ರ ಸರ್ಕಾರ ಜಾತಿಗಣತಿ ಮುಗಿಸಲಿ. ಕೇಂದ್ರ ಸರ್ಕಾರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಲಿ. ತಮಿಳುನಾಡಿನಲ್ಲಿ ಶೇ 63 ರಷ್ಟು ಮೀಸಲಾತಿ ಇದೆ, ಜಾರ್ಖಂಡ್​ನಲ್ಲಿ ಶೇ 77 ರಷ್ಟು ಮೀಸಲಾತಿ ಇದೆ.ಅನೇಕ ರಾಜ್ಯಗಳಲ್ಲಿ ಮೀಸಲಾತಿ 50% ಮೀರಿ ಹೋಗಿದೆ ಎಂದು ತಿಳಿಸಿದರು.

ಇದನ್ನೂ ನೋಡಿ: ಜಾತಿ ಗಣತಿ: ಕೇಂದ್ರ ಸರ್ಕಾರದ ನಿರ್ಧಾರವನ್ನು ನಮ್ಮ ಸರ್ಕಾರ ಸ್ವಾಗತಿಸುತ್ತದೆ ಎಂದ ಡಿಕೆ ಶಿವಕುಮಾರ್

ಹೀಗಾಗಿ, ಜನಸಂಖ್ಯೆಗೆ ಅನುಗುಣವಾಗಿ ಬಡತನ ಸಾಮಾಜಿಕ ಪರಿಸ್ಥಿತಿ‌ ನೋಡಬೇಕು, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದವರು ಮೀಸಲಾತಿಗೆ ಅರ್ಹರು. ಕೇಂದ್ರ ಸರ್ಕಾರ ಇದನ್ನು ಆರ್ಥಿಕವಾಗಿ ಹಿಂದುಳಿದವರು ಅಂತಾ ಹೇಳಬೇಕು. ಜಾತಿಗಣತಿ ಸರ್ವೆ ಆಗಲೇಬೇಕು, ಇದು ಪಕ್ಷ ಮತ್ತು ಮಲ್ಲಿಕಾರ್ಜುನ ಖರ್ಗೆಯವರ ನಿಲುವಾಗಿದೆ ಎಂದರು.

ವರದಿ: ಈರಣ್ಣ ಬಸವ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್