14 ಸೈಟ್​ ಹಿಂದಿರುಗಿಸಲು ನಿರ್ಧಾರ: ಮುಡಾಗೆ ಸಿಎಂ ಪತ್ನಿ ಬರೆದ ಪತ್ರದಲ್ಲೇನಿದೆ?

ಮುಡಾ ಹಗರಣ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಲೋಕಾಯುಕ್ತ, ಇಡಿ ದೂರು ದಾಖಲಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರು 14 ಸೈಟ್​ಗಳ ಕ್ರಯ ಪತ್ರ ಹಿಂದಿರುಗಿಸುವುದಾಗಿ ಮುಡಾಗೆ ಪತ್ರ ಬರೆದಿದ್ದಾರೆ. ಹಾಗಾದ್ರೆ, ಸಿಎಂ ಪತ್ನಿ ಬರೆದ ಸುದೀರ್ಘ ಪತ್ರದಲ್ಲೇನಿದೆ? ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

14 ಸೈಟ್​ ಹಿಂದಿರುಗಿಸಲು ನಿರ್ಧಾರ: ಮುಡಾಗೆ ಸಿಎಂ ಪತ್ನಿ ಬರೆದ ಪತ್ರದಲ್ಲೇನಿದೆ?
ಮುಡಾಗೆ ಸಿಎಂ ಪತ್ನಿ ಪತ್ರ
Follow us
ರಮೇಶ್ ಬಿ. ಜವಳಗೇರಾ
|

Updated on:Sep 30, 2024 | 10:48 PM

ಬೆಂಗಳೂರು/ಮೈಸೂರು, (ಸೆಪ್ಟೆಂಬರ್ 30): ಮುಡಾ ಹಗರಣ ಪ್ರಕರಣ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತೀವ್ರ ಸಂಕಷ್ಟ ತಂದೊಡ್ಡಿರುವ ಬೆನ್ನಲ್ಲೇ ಪತ್ನಿ ಪಾರ್ವತಿ ಅವರು ಮುಡಾಗೆ ಸೈಟ್​ಗಳನ್ನು ಹಿಂದಿರುಗಿಸಲು ಮುಂದಾಗಿದ್ದಾರೆ. ಹೌದು…ಮೈಸೂರಿನ ವಿಜಯನಗರದ 3 ಮತ್ತು 4ನೇ ಹಂತದಲ್ಲಿ ಪಡೆದ 14 ನಿವೇಶನಗಳನ್ನು ಹಿಂದಿರುಗಿಸುವುದಾಗಿ ಸಿಎಂ ಪತ್ನಿ ಪಾರ್ವತಿ ಅವರು ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಸಿದ್ದರಾಮಯ್ಯನವರಿಗೆ ರಾಜಜಕೀಯವಾಗಿ ಆಗುತ್ತಿರುವ ಸಂಕಷ್ಟವನ್ನು ನೋಡಲಾಗದೇ ಪತ್ನಿ ಈ ನಿರ್ಧಾರಕ್ಕೆ ಬಂದಿದ್ದಾರೆ. ಈ ಬಗ್ಗೆ ಖುದ್ದು ಮುಡಾಗೆ ಬರೆದ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಈ ಮೂಲಕ ಈ ಮುಡಾ ಹಗರಣ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಆದ್ರೆ, ಗಮನಿಸಿದ ಬೇಕಾದ ಅಂಶ ಅಂದ್ರೆ, ಸಾರ್ವತಿ ಅವರು ಬರೆದ ಪತ್ರದಲ್ಲಿ ದಿನಾಂಕ ಇಲ್ಲದಿರುವುದು ನಾನಾ ಚರ್ಚೆಗೆ ಗ್ರಾಸವಾಗಿದೆ. ಇನ್ನು ಸಿಎಂ ಪತ್ನಿ ಮುಡಾಗೆ ಬರೆದ ಪತ್ರದಲ್ಲೇನಿದೆ ಎನ್ನುವುದು ಈ ಕೆಳಗಿನಂತಿದೆ ನೋಡಿ.

ಮುಡಾಕ್ಕೆ ಬರೆದಿರುವ ಪತ್ರದಲ್ಲೇನಿದೆ?

ವಿಷಯ: ಮೈಸೂರಿನ ಕೆಸರೆ ಗ್ರಾಮದ ಸರ್ವೇ ನಂ 464 ರಲ್ಲಿ 3 ಎಕರೆ 16 ಗುಂಟೆ ಜಮೀನನ್ನು ಪ್ರಾಧಿಕಾರವು ಭೂಸ್ವಾಧೀನವಿಲ್ಲದೆ ಉಪಯೋಗಿಸಿಕೊಂಡಿದ್ದಕ್ಕಾಗಿ ಪರಿಹಾರದ ಬದಲಾಗಿ ವಿಜಯನಗರ 3 ಮತ್ತು 4 ನೇ ಹಂತದಲ್ಲಿ ನನಗೆ ಮಂಜೂರು ಮಾಡಲಾದ 14 ನಿವೇಶನಗಳನ್ನು ಹಿಂದಿರುಗಿಸುವ ಕುರಿತು.

ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ECIR ದಾಖಲು, ಏನಿದು ECIR? ಇಡಿ ಏನೇನು ಮಾಡಬಹುದು?

ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಮೈಸೂರು ತಾಲ್ಲೂಕು, ಕಸಬಾ ಹೋಬಳಿ, ಕೆಸರೆ ಗ್ರಾಮದ ಸರ್ವೇ ನಂ 464 ರಲ್ಲಿ 3 ಎಕರೆ 16 ಗುಂಟೆ ವಿಸ್ತೀರ್ಣದ ನನ್ನ ಜಮೀನನ್ನು ಪ್ರಾಧಿಕಾರವು ಭೂಸ್ವಾಧೀನವಿಲ್ಲದೆ ಉಪಯೋಗಿಸಿಕೊಂಡಿದ್ದಕ್ಕಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪರಿಹಾರವಾಗಿ ವಿಜಯನಗರ 3 ಮತ್ತು 4 ನೇ ಹಂತದಲ್ಲಿ ವಿವಿಧ ಅಳತೆಯ 14 ನಿವೇಶನಗಳನ್ನು ಮಂಜೂರು ಮಾಡಿರುವುದು ನಿಮಗೆ ತಿಳಿದಿದೆ.

ಮುಂದುವರಿದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನನ್ನ ಪರವಾಗಿ ಕಾರ್ಯಗತಗೊಳಿಸಿದ 14 ನಿವೇಶನಗಳ ಕ್ರಯಪತ್ರಗಳನ್ನು ರದ್ದುಗೊಳಿಸುವ ಮೂಲಕ ನಾನು ಪರಿಹಾರದ ನಿವೇಶನಗಳನ್ನು ಒಪ್ಪಿಸಲು ಮತ್ತು ಹಿಂತಿರುಗಿಸಲು ಬಯಸುತ್ತೇನೆ. ನಿವೇಶನಗಳ ಸ್ವಾಧೀನವನ್ನು ಸಹ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಮರಳಿ ಹಸ್ತಾಂತರಿಸುತ್ತಿದ್ದೇನೆ. ದಯವಿಟ್ಟು ಈ ನಿಟ್ಟಿನಲ್ಲಿ ಆದಷ್ಟು ಬೇಗ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಪತ್ರ ಬರೆದಿದ್ದಾರೆ.

ಪಾರ್ವತಿ ನೀಡಿರುವ ಪತ್ರಿಕಾ ಪ್ರಕಟಣೆ

ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು. ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದು ಎಂಬ ನಿರ್ಧಾರಕ್ಕೆ ಬದ್ಧಳಾಗಿ ಬದುಕಿದವಳು. ನಾನೆಂದೂ ಮನೆ, ಆಸ್ತಿ, ಚಿನ್ನ, ಸಂಪತ್ತನ್ನು ಬಯಸಿದವಳಲ್ಲ. ಯಾವುದೇ ಕಾರಣಕ್ಕೂ ನನ್ನಿಂದ ಅವರ ರಾಜಕೀಯ ಜೀವನಕ್ಕೆ ಒಂದು ಸಣ್ಣ ಹನಿಯಷ್ಟೂ ಕಳಂಕ ತಟ್ಟಬಾರದೆಂದು ಎಚ್ಚರಿಕೆಯಿಂದ ನಡೆದುಕೊಂಡವಳು. ನನ್ನ ಪತಿಗೆ ರಾಜ್ಯದ ಜನತೆ ಹರಿಸುತ್ತಾ ಬಂದ ಪ್ರೀತಿ ಅಭಿಮಾನಗಳನ್ನು ದೂರದಿಂದಲೇ ಕಂಡು ಸಂತೋಷ ಮತ್ತು ಹೆಮ್ಮೆ ಪಟ್ಟವಳು.

ಹೀಗಿದ್ದರೂ ಮೈಸೂರಿನ ಮುಡಾ ನಿವೇಶನಕ್ಕೆ ಸಂಬಂಧಿಸಿದಂತೆ ಕೇಳಿಬಂದ ಆರೋಪಗಳಿಂದ ನಾನು ಘಾಸಿಗೊಂಡಿದ್ದೇನೆ. ನನ್ನ ಸ್ವಂತ ಸೋದರ ಅರಿಶಿನ – ಕುಂಕುಮದ ಭಾಗವಾಗಿ ಕೊಟ್ಟ ಜಮೀನಿನ ಬಾಬು ಪಡೆದ ನಿವೇಶನಗಳು ಇಷ್ಟೊಂದು ರಾದ್ಧಾಂತವಾಗುತ್ತದೆ. ಇದರಿಂದ ನನ್ನ ಪತಿಯವರು ಅನ್ಯಾಯವಾಗಿ ಆರೋಪಗಳನ್ನು ಎದುರಿಸುವಂತಾಗಬಹುದು ಎನ್ನುವುದನ್ನು ನಾನು ಊಹಿಸಿದವಳೂ ಅಲ್ಲ. ನನಗೆ ಈ ನಿವೇಶನ, ಮನೆ, ಆಸ್ತಿ, ಸಂಪತ್ತು ಯಾವುದೂ ಕೂಡ ನನ್ನ ಪತಿಯ ಗೌರವ, ಘನತೆ, ಮರ್ಯಾದೆ ಮತ್ತು ಅವರ ನೆಮ್ಮದಿಗಿಂತ ದೊಡ್ಡದಲ್ಲ. ಇಷ್ಟು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಅವರಿಂದ ಏನನ್ನೂ ನನಗಾಗಲೀ, ನನ್ನ ಕುಟುಂಬಕ್ಕಾಗಲೀ ಬಯಸದೇ ಇದ್ದ ನನಗೆ ಈ ನಿವೇಶನಗಳು ತೃಣಕ್ಕೆ ಸಮ. ಈ ಹಿನ್ನೆಲೆಯಲ್ಲಿ ವಿವಾದಕ್ಕೆ ಕಾರಣವಾಗಿರುವ ಮುಡಾದ 14 ನಿವೇಶನಗಳನ್ನು ವಾಪಸ್ ಮಾಡಲು ನಿರ್ಧರಿಸಿದ್ದೇನೆ.

ಈ ಬಗ್ಗೆ ನನ್ನ ಪತಿಯವರ ಅಭಿಪ್ರಾಯ ಏನಿದೆ ಎನ್ನುವುದು ನನಗೆ ತಿಳಿದಿಲ್ಲ. ನನ್ನ ಮಗನ ಬಳಿಯಾಗಲಿ, ನನ್ನ ಕುಟುಂಬದ ಇತರ ಸದಸ್ಯರ ಬಳಿಯಾಗಲಿ ಇದರ ಬಗ್ಗೆ ನಾನು ಚರ್ಚಿಸಿಲ್ಲ. ಇದು ನಾನು ನನ್ನ ಆತ್ಮ ಸಾಕ್ಷಿಯ ಕರೆಗೆ ಓಗೊಟ್ಟು ಪ್ರಜ್ಞಾಪೂರ್ವಕವಾಗಿ ಕೈಗೊಂಡಿರುವ ತೀರ್ಮಾನ. ಈ ಹಂತದಲ್ಲಿ ಇಂತಹ ನಿರ್ಧಾರಕ್ಕೆ ಏಕೆ ಬಂದಿರಿ? ಎಂದು ಯಾರಾದರೂ ಕೇಳಬಹುದು. ಆರೋಪ ಕೇಳಿ ಬಂದ ದಿನವೇ ನಾನು ಈ ನಿರ್ಧಾರ ಮಾಡಿದ್ದೆ. ಆದರೆ, ಈ ಮುಡಾ ನಿವೇಶನ ಹಂಚಿಕೆಯ ಆರೋಪವನ್ನು ರಾಜಕೀಯ ದುರುದ್ದೇಶದಿಂದ ಮಾಡಲಾಗಿದ್ದು, ಈ ಅನ್ಯಾಯದ ವಿರುದ್ಧ ಹೋರಾಡಬೇಕು. ಅವರ ಸಂಚಿಗೆ ನಾವು ಬಲಿಯಾಗಬಾರದು ಎಂದು ಕೆಲವು ಹಿತೈಷಿಗಳು ಹೇಳಿದ ಕಾರಣಕ್ಕೆ ನಿವೇಶನ ವಾಪಸು ಮಾಡಬೇಕೆಂಬ ನಿರ್ಧಾರವನ್ನು ಕೈ ಬಿಟ್ಟಿದ್ದೆ.

ನನ್ನ ಈ ನಿರ್ಧಾರ ಅಚಲವಾಗಿದ್ದು, ಈ ನಿವೇಶನಗಳನ್ನು ವಾಪಸು ನೀಡುವುದರ ಜೊತೆಗೆ ಮುಡಾಕ್ಕೆ ಸಂಬಂಧಿಸಿದ ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ. ಕೊನೆಯದಾಗಿ, ಎಲ್ಲಾ ರಾಜಕೀಯ ಪಕ್ಷದ ನಾಯಕರು ಮತ್ತು ಮಾಧ್ಯಮ ಕ್ಷೇತ್ರದ ಬಂಧುಗಳಲ್ಲಿ ನನ್ನ ವಿನಮ್ರ ವಿನಂತಿ. ದಯವಿಟ್ಟು ರಾಜಕೀಯ ಕ್ಷೇತ್ರದಿಂದ ದೂರವಿದ್ದು, ತಮ್ಮ ಪಾಡಿಗೆ ತಾವಿರುವ ರಾಜಕೀಯ ಕುಟುಂಬದ ಹೆಣ್ಣು ಮಕ್ಕಳನ್ನು ರಾಜಕೀಯ ದ್ವೇಷ ಸಾಧನೆಗಾಗಿ ವಿವಾದದ ಕಣಕ್ಕೆ ಎಳೆದು ತಂದು ಅವರ ಘನತೆ, ಗೌರವಗಳಿಗೆ ಹಾನಿ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:32 pm, Mon, 30 September 24

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ