Shakti Yojana: ಇಂದು ರಾಜ್ಯಾದ್ಯಂತ ಏಕಕಾಲದಲ್ಲಿ ಶಕ್ತಿ ಯೋಜನೆಗೆ ಚಾಲನೆ

ಇಂದು (ಜೂ.11) ರಾಜ್ಯಾದ್ಯಂತ ಏಕಕಾಲದಲ್ಲಿ ಶಕ್ತಿ ಯೋಜನೆಗೆ ಚಾಲನೆ ದೊರೆಯಲಿದೆ. ವಿಧಾನಸೌಧದಲ್ಲಿ ಶಕ್ತಿ ಯೋಜನೆಗೆ ಚಾಲನೆ ದೊರೆಯುತ್ತಿದ್ದಂತೆ ರಾಜ್ಯದ ಎಲ್ಲಾ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಆಯಾ ಜಿಲ್ಲೆಯ ಸಚಿವರು, ಶಾಸಕರು ಯೋಜನೆಗೆ ಚಾಲನೆ ನೀಡಲಿದ್ದಾರೆ.

Shakti Yojana: ಇಂದು ರಾಜ್ಯಾದ್ಯಂತ ಏಕಕಾಲದಲ್ಲಿ ಶಕ್ತಿ ಯೋಜನೆಗೆ ಚಾಲನೆ
ಶಕ್ತಿ ಯೋಜನೆಯಿಂದ ಮಹಿಳೆಯರು ಫ್ರೀ ಬಸ್ ಟಿಕೆಟ್​ನಿಂದ ರೌಂಡ್ಸ್​​ ಹಾಕ್ತಿದ್ದಾರೆ. ಇತ್ತ ದೇವಸ್ಥಾನಗಳಿಗೆ ನಿರೀಕ್ಷೆಗೂ ಮೀರಿದ ಆದಾಯ ಬರ್ತಿದೆ. ಮುಂದಿನ ದಿನಗಳಲ್ಲಿ ಈ ಆದಾಯ ದುಪ್ಪಾಟ್ಟಾಗುವ ಸಾಧ್ಯತೆ ಇದೆ.
Follow us
ವಿವೇಕ ಬಿರಾದಾರ
|

Updated on:Jun 11, 2023 | 7:02 AM

ಬೆಂಗಳೂರು: ಇಂದು (ಜೂ.11) ರಾಜ್ಯಾದ್ಯಂತ ಏಕಕಾಲದಲ್ಲಿ ಶಕ್ತಿ ಯೋಜನೆಗೆ (Shakti Yojana) ಚಾಲನೆ ದೊರೆಯಲಿದೆ. ಬೆಳಗ್ಗೆ 11 ಗಂಟೆಗೆ ವಿಧಾನಸೌಧದ (Vidhana Soudha) ಗ್ರ್ಯಾಂಡ್ ಸ್ಟೇಪ್ಸ್ ಮುಂಭಾಗದಲ್ಲಿ ಚಾಲನೆ ನೀಡಲಾಗುತ್ತದೆ. ವಿಧಾನಸೌಧದಲ್ಲಿ ಶಕ್ತಿ ಯೋಜನೆಗೆ ಚಾಲನೆ ದೊರೆಯುತ್ತಿದ್ದಂತೆ ರಾಜ್ಯದ ಎಲ್ಲಾ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಆಯಾ ಜಿಲ್ಲೆಯ ಸಚಿವರು, ಶಾಸಕರು ಯೋಜನೆಗೆ ಚಾಲನೆ ನೀಡಲಿದ್ದಾರೆ.

ವಿಧಾನಸೌಧದ ಮುಂಭಾಗ 4 ನಿಗಮದ (BMTC, KSRTC, NWKRTC, KKRTC) ಸಾಮಾನ್ಯ ಬಸ್ ನಿಲ್ಲಿಸಲು ಫ್ಲಾನ್ ಮಾಡಲಾಗಿದೆ. ನಾಡಗೀತೆ ಹಾಡುವ ಮೂಲಕ ಚಾಲನೆಗೊಳ್ಳುವ ಈ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ಶಕ್ತಿ ಯೋಜನೆ ಲೋಗೋ ಅನಾವರಣಗೊಳಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಜತೆಗಿರುವರು. ನಂತರ ಸಿದ್ದರಾಮಯ್ಯ ಅವರು ಬಸ್​ನಲ್ಲೇ ಸಿಟಿ ರೌಂಡ್ಸ್ ಹಾಕಲಿದ್ದಾರೆ. ವಿಧಾನ ಸೌಧ ಒಂದು ರೌಂಡ್, ಮೆಜೆಸ್ಟಿಕ್ ಅಥವಾ ಮೈಸೂರು ಬ್ಯಾಂಕ್ ಸರ್ಕಲ್ ವರೆಗೆ ಬಿಎಂಟಿಸಿಯಲ್ಲಿ ಒಂದು ರೌಂಡ್ ಹೋಗಲಿದ್ದಾರೆ.

ಇದನ್ನೂ ಓದಿ: ಇಂದು ಬೆಂಗಳೂರಿನಲ್ಲಿ ಶಕ್ತಿ ಯೋಜನೆಗೆ ಚಾಲನೆ: ಸಂಚಾರ ಮಾರ್ಗದಲ್ಲಿ ಬದಲಾವಣೆ

ಇನ್ನು ಈ ಕಾರ್ಯಕ್ರಮಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಅವರಿಗೂ ಆಹ್ವಾನ ನೀಡಲಾಗಿದೆ. ಆದರೆ ಕಾರ್ಯಕ್ರಮಕ್ಕೆ ಆಗಮಿಸುವುದು ಬಹುತೇಕ ಅನುಮಾನವಾಗಿದೆ.

ಮಧ್ಯಾಹ್ನ 1 ಗಂಟೆಯ ನಂತ್ರ ಬಿಎಂಟಿಸಿ, ಕೆಎಸ್ಆರ್ಟಿಸಿ, ಎನ್ ಡಬ್ಲ್ಯೂಆರ್ಟಿಸಿ, ಕೆಕೆಆರ್ಟಿಸಿ ಬಸ್​ಗಳಲ್ಲಿ‌ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತದೆ. ತಮಿಳುನಾಡು, ದೆಹಲಿ ಸೇರಿ ವಿವಿಧ ರಾಜ್ಯಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಅವಕಾಶ ನೀಡುವ ಯೋಜನೆ ಜಾರಿಯಲ್ಲಿದ್ದು, ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಜಾರಿಗೆ ಬರುತ್ತಿದೆ.

ಪ್ರಯಾಣಿಕರ ಗಮನಕ್ಕೆ

  1. ಐಷಾರಾಮಿ ಬಸ್‌ಗಳಾದ ರಾಜಹಂಸ, ನಾನ್ ಎಸಿ ಸ್ಲಿಪರ್‌, ಎಸಿ ಸ್ಲಿಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್, ಅಂಬಾರಿ, ಅಂಬಾರಿ ಡೀಮ್ ಕ್ಲಾಸ್, ಅಂಬಾರಿ ಉತ್ಸವ್, ಫೈ ಬಸ್, ಇವಿ ಪ್ಲಸ್ ಸಾರಿಗೆಗಳಲ್ಲಿ ಉಚಿತ ಪ್ರಯಾಣ ಅನ್ವಯಿಸುವುದಿಲ್ಲ.
  2. ಮಹಿಳಾ ಪ್ರಯಾಣಿಕರಿಗೆ ಪ್ರಯಾಣದ ದೂರದ ಯಾವುದೇ ಮಿತಿ ಇರುವುದಿಲ್ಲ. ಈ ಪ್ರಯಾಣ ಸೌಲಭ್ಯ ರಾಜ್ಯದ ಒಳಗೆ ಪ್ರಯಾಣಿಸಲು ಮಾತ್ರ ಅನ್ವಯಿಸುತ್ತದೆ.
  3. ಆಯ್ದ ಅಂತಾರಾಜ್ಯ ಸಾರಿಗೆಗಳಲ್ಲಷ್ಟೇ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಅವಕಾಶ.
  4. ಶಕ್ತಿ ಯೋಜನೆಯು ದೈನಿಕ ಪಾಸ್, ಮಾಸಿಕ ಪಾಸ್, ಸಾಂದರ್ಭಿಕ ಒಪ್ಪಂದ ಹಾಗೂ ಕಾಯಂ ಗುತ್ತಿಗೆ ಪ್ಯಾಕೇಜ್ ಸೇವೆಗಳಿಗೆ ಅನ್ವಯಿಸುವುದಿಲ್ಲ.
  5. ರಾಜ್ಯದೊಳಗೆ ವೇಗದೂತ ಸಾರಿಗೆಗಳಲ್ಲಿ ಮುಂಗಡ ಆಸನ ಕಾಯ್ದಿರಿಸಲು ನಿಗಮದ ಬುಕಿಂಗ್ ಕೌಂಟರ್‌ಗಳಲ್ಲಿ ವ್ಯವಸ್ಥೆ ಇರಲಿದೆ. ಶೇ.50ರ ಆಸನಗಳನ್ನು ಮೀರದಂತೆ ನಿಗದಿತ ಕನಿಷ್ಠ ಸೇವಾ ಶುಲ್ಕ ಪಡೆದು ಬುಕಿಂಗ್ ಮಾಡಿಕೊಳ್ಳಲಾಗುತ್ತದೆ.
  6. ಮುಂಗಡ ಆಸನ ಕಾಯ್ದಿರಿಸಲು ಬುಕಿಂಗ್ ಕೌಂಟರ್‌ಗೆ ಆಗಮಿಸಿದಾಗ ಗುರುತಿನ ಚೀಟಿ ತೋರಿಸಿದರೆ ಸಾಕು. ಸ್ಮಾರ್ಟ್ ಕಾರ್ಡ್ ವಿತರಿಸಿದ ನಂತರ ಅದನ್ನು ತೋರಿಸಬೇಕು.
  7. ಪ್ರಯಾಣ ಸಮಯದಲ್ಲಿ ಗುರುತಿನ ಚೀಟಿ (ವಿತರಣೆ ಬಳಿಕ ಸ್ಮಾರ್ಟ್ ಕಾರ್ಡ್) ಮತ್ತು ಕಾಯ್ದಿರಿಸಿದ ಟಿಕೆಟ್ ತೋರಿಸಬೇಕಾಗುತ್ತದೆ.

ಸ್ಮಾರ್ಟ್ ಕಾರ್ಡ್ ಮಾಡಿಸಿಕೊಳ್ಳೋದು ಹೇಗೆ

– ಯಾವುದಾದರೂ ಹತ್ತಿರದ ಬೆಂಗಳೂರು ಒನ್, ಸೈಬರ್ ಸೆಂಟರ್ ಗೆ ಭೇಟಿ ನೀಡಿ

– ಸೇವಾ ಸಿಂಧೂ ಪೋರ್ಟಲ್ ಮೂಲಕ ನೋಂದಣಿಗೆ ಅವಕಾಶವಿದೆ

– ಆಧಾರ್ ಕಾರ್ಡ್ ಅಥವಾ ಅಡ್ರೆಸ್ ಫ್ರೂಪ್ ನೀಡಿದರೇ ಸ್ಮಾರ್ಟ್ ಕಾರ್ಡ್ ಮಾಡಿಕೊಡಲಾಗುವುದು

– ಸ್ಮಾರ್ಟ್ ಕಾರ್ಡಿಗೆ ಆಗುವ ಖರ್ಚನ್ನು ಸರ್ಕಾರವೇ ಭರಿಸಲಿದೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:53 am, Sun, 11 June 23

ನಿಲ್ಲಿಸಿದ್ದ ಸ್ಕೂಟಿಯಿಂದ ಬುಸ್​ಗುಟ್ಟುತ್ತಾ ಹೊರಬಂದ ವಿಷಕಾರಿ ಹಾವು
ನಿಲ್ಲಿಸಿದ್ದ ಸ್ಕೂಟಿಯಿಂದ ಬುಸ್​ಗುಟ್ಟುತ್ತಾ ಹೊರಬಂದ ವಿಷಕಾರಿ ಹಾವು
ಮನೆಗೆ ನುಗ್ಗಿದ ಚಿರತೆಯಿಂದ ನಾಯಿಯ ಮೇಲೆ ಅಟ್ಯಾಕ್; ಶಾಕಿಂಗ್ ವಿಡಿಯೋ ವೈರಲ್
ಮನೆಗೆ ನುಗ್ಗಿದ ಚಿರತೆಯಿಂದ ನಾಯಿಯ ಮೇಲೆ ಅಟ್ಯಾಕ್; ಶಾಕಿಂಗ್ ವಿಡಿಯೋ ವೈರಲ್
ಮದುವೆ ಹಿಂದಿನ ರಾತ್ರಿ ಡ್ಯಾನ್ಸ್​ ಮಾಡುವಾಗ ಹೃದಯಾಘಾತದಿಂದ ಮದುಮಗ ಸಾವು!
ಮದುವೆ ಹಿಂದಿನ ರಾತ್ರಿ ಡ್ಯಾನ್ಸ್​ ಮಾಡುವಾಗ ಹೃದಯಾಘಾತದಿಂದ ಮದುಮಗ ಸಾವು!
ಶಿವಣ್ಣನ ರೀತಿ ಡೈಲಾಗ್ ಹೇಳಲು ಯಾರಿಗೆ ಸಾಧ್ಯ? ವೇದಿಕೆಯಲ್ಲಿ ಎಲ್ಲರೂ ಸುಸ್ತ್
ಶಿವಣ್ಣನ ರೀತಿ ಡೈಲಾಗ್ ಹೇಳಲು ಯಾರಿಗೆ ಸಾಧ್ಯ? ವೇದಿಕೆಯಲ್ಲಿ ಎಲ್ಲರೂ ಸುಸ್ತ್
‘ಭೈರತಿ ರಣಗಲ್ ಸೀಕ್ವೆಲ್ ಬರಲಿದೆ’: ಸಕ್ಸಸ್ ಮೀಟ್​ನಲ್ಲಿ ಶಿವಣ್ಣ ಮಾಹಿತಿ
‘ಭೈರತಿ ರಣಗಲ್ ಸೀಕ್ವೆಲ್ ಬರಲಿದೆ’: ಸಕ್ಸಸ್ ಮೀಟ್​ನಲ್ಲಿ ಶಿವಣ್ಣ ಮಾಹಿತಿ
ತೆಲಂಗಾಣದಲ್ಲಿ ಬಿಆರ್​ಎಸ್​ ನಾಯಕಿಯ ಗಂಡನಿಗೆ ಸುತ್ತಿಗೆಯಿಂದ ಹೊಡೆದ ಯುವಕ
ತೆಲಂಗಾಣದಲ್ಲಿ ಬಿಆರ್​ಎಸ್​ ನಾಯಕಿಯ ಗಂಡನಿಗೆ ಸುತ್ತಿಗೆಯಿಂದ ಹೊಡೆದ ಯುವಕ
ಒಟ್ಟಿಗೆ ಸ್ನಾನಕ್ಕೆ ಹೋದ ಹನುಮ, ಧನರಾಜ್; ಕಣ್ಣು ಮುಚ್ಚಿಕೊಂಡ ಮನೆ ಮಂದಿ
ಒಟ್ಟಿಗೆ ಸ್ನಾನಕ್ಕೆ ಹೋದ ಹನುಮ, ಧನರಾಜ್; ಕಣ್ಣು ಮುಚ್ಚಿಕೊಂಡ ಮನೆ ಮಂದಿ
ವಿಕ್ರಂಗೌಡ ಮೊದಲು ವಿಮೋಚನಾರಂಗದೊಂದಿಗೆ ಗುರುತಿಸಿಕೊಂಡಿದ್ದ: ಗ್ರಾಮಸ್ಥ
ವಿಕ್ರಂಗೌಡ ಮೊದಲು ವಿಮೋಚನಾರಂಗದೊಂದಿಗೆ ಗುರುತಿಸಿಕೊಂಡಿದ್ದ: ಗ್ರಾಮಸ್ಥ
ಕುಕ್ಕರ್ ಬ್ರ್ಯಾಂಡ್ ಜನರನ್ನು ಸಿದ್ದರಾಮಯ್ಯ ಬ್ರದರ್ಸ್ ಅನ್ನುತ್ತಾರೆ: ಅಶೋಕ
ಕುಕ್ಕರ್ ಬ್ರ್ಯಾಂಡ್ ಜನರನ್ನು ಸಿದ್ದರಾಮಯ್ಯ ಬ್ರದರ್ಸ್ ಅನ್ನುತ್ತಾರೆ: ಅಶೋಕ
ಐದಾರು ನಕ್ಸಲರಿಗೆ ಶೋಧ: ಶರಣಾಗತಿಗೆ ಆದ್ಯತೆ..ಇಲ್ಲದಿದ್ರೆ ಎನ್‌ಕೌಂಟರ್​?
ಐದಾರು ನಕ್ಸಲರಿಗೆ ಶೋಧ: ಶರಣಾಗತಿಗೆ ಆದ್ಯತೆ..ಇಲ್ಲದಿದ್ರೆ ಎನ್‌ಕೌಂಟರ್​?