ಬೆಂಗಳೂರು: ಇಂದು (ಜೂ.11) ರಾಜ್ಯಾದ್ಯಂತ ಏಕಕಾಲದಲ್ಲಿ ಶಕ್ತಿ ಯೋಜನೆಗೆ (Shakti Yojana) ಚಾಲನೆ ದೊರೆಯಲಿದೆ. ಬೆಳಗ್ಗೆ 11 ಗಂಟೆಗೆ ವಿಧಾನಸೌಧದ (Vidhana Soudha) ಗ್ರ್ಯಾಂಡ್ ಸ್ಟೇಪ್ಸ್ ಮುಂಭಾಗದಲ್ಲಿ ಚಾಲನೆ ನೀಡಲಾಗುತ್ತದೆ. ವಿಧಾನಸೌಧದಲ್ಲಿ ಶಕ್ತಿ ಯೋಜನೆಗೆ ಚಾಲನೆ ದೊರೆಯುತ್ತಿದ್ದಂತೆ ರಾಜ್ಯದ ಎಲ್ಲಾ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಆಯಾ ಜಿಲ್ಲೆಯ ಸಚಿವರು, ಶಾಸಕರು ಯೋಜನೆಗೆ ಚಾಲನೆ ನೀಡಲಿದ್ದಾರೆ.
ವಿಧಾನಸೌಧದ ಮುಂಭಾಗ 4 ನಿಗಮದ (BMTC, KSRTC, NWKRTC, KKRTC) ಸಾಮಾನ್ಯ ಬಸ್ ನಿಲ್ಲಿಸಲು ಫ್ಲಾನ್ ಮಾಡಲಾಗಿದೆ. ನಾಡಗೀತೆ ಹಾಡುವ ಮೂಲಕ ಚಾಲನೆಗೊಳ್ಳುವ ಈ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ಶಕ್ತಿ ಯೋಜನೆ ಲೋಗೋ ಅನಾವರಣಗೊಳಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಜತೆಗಿರುವರು. ನಂತರ ಸಿದ್ದರಾಮಯ್ಯ ಅವರು ಬಸ್ನಲ್ಲೇ ಸಿಟಿ ರೌಂಡ್ಸ್ ಹಾಕಲಿದ್ದಾರೆ. ವಿಧಾನ ಸೌಧ ಒಂದು ರೌಂಡ್, ಮೆಜೆಸ್ಟಿಕ್ ಅಥವಾ ಮೈಸೂರು ಬ್ಯಾಂಕ್ ಸರ್ಕಲ್ ವರೆಗೆ ಬಿಎಂಟಿಸಿಯಲ್ಲಿ ಒಂದು ರೌಂಡ್ ಹೋಗಲಿದ್ದಾರೆ.
ಇದನ್ನೂ ಓದಿ: ಇಂದು ಬೆಂಗಳೂರಿನಲ್ಲಿ ಶಕ್ತಿ ಯೋಜನೆಗೆ ಚಾಲನೆ: ಸಂಚಾರ ಮಾರ್ಗದಲ್ಲಿ ಬದಲಾವಣೆ
ಇನ್ನು ಈ ಕಾರ್ಯಕ್ರಮಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಅವರಿಗೂ ಆಹ್ವಾನ ನೀಡಲಾಗಿದೆ. ಆದರೆ ಕಾರ್ಯಕ್ರಮಕ್ಕೆ ಆಗಮಿಸುವುದು ಬಹುತೇಕ ಅನುಮಾನವಾಗಿದೆ.
ಮಧ್ಯಾಹ್ನ 1 ಗಂಟೆಯ ನಂತ್ರ ಬಿಎಂಟಿಸಿ, ಕೆಎಸ್ಆರ್ಟಿಸಿ, ಎನ್ ಡಬ್ಲ್ಯೂಆರ್ಟಿಸಿ, ಕೆಕೆಆರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತದೆ. ತಮಿಳುನಾಡು, ದೆಹಲಿ ಸೇರಿ ವಿವಿಧ ರಾಜ್ಯಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಅವಕಾಶ ನೀಡುವ ಯೋಜನೆ ಜಾರಿಯಲ್ಲಿದ್ದು, ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಜಾರಿಗೆ ಬರುತ್ತಿದೆ.
– ಯಾವುದಾದರೂ ಹತ್ತಿರದ ಬೆಂಗಳೂರು ಒನ್, ಸೈಬರ್ ಸೆಂಟರ್ ಗೆ ಭೇಟಿ ನೀಡಿ
– ಸೇವಾ ಸಿಂಧೂ ಪೋರ್ಟಲ್ ಮೂಲಕ ನೋಂದಣಿಗೆ ಅವಕಾಶವಿದೆ
– ಆಧಾರ್ ಕಾರ್ಡ್ ಅಥವಾ ಅಡ್ರೆಸ್ ಫ್ರೂಪ್ ನೀಡಿದರೇ ಸ್ಮಾರ್ಟ್ ಕಾರ್ಡ್ ಮಾಡಿಕೊಡಲಾಗುವುದು
– ಸ್ಮಾರ್ಟ್ ಕಾರ್ಡಿಗೆ ಆಗುವ ಖರ್ಚನ್ನು ಸರ್ಕಾರವೇ ಭರಿಸಲಿದೆ
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:53 am, Sun, 11 June 23