ಮಂಡಿನೋವಿನ ಕಾರಣ ಸಿಎಂ ಸಿದ್ದರಾಮಯ್ಯ ಹಂಪಿ ಉತ್ಸವ 2025 ಉದ್ಘಾಟನೆಗೆ ಬರುತ್ತಿಲ್ಲ: ಜಮೀರ್ ಅಹ್ಮದ್

ಅರುಣ್​ ಕುಮಾರ್​ ಬೆಳ್ಳಿ

Updated on: Feb 28, 2025 | 2:42 PM

ವಿಶ್ವ ವಿಖ್ಯಾತ ಹಂಪಿ ಉತ್ಸವ ಕಳೆದ ಬಾರಿಯಂತೆ ಈ ಸಲವೂ ಮೂರು ದಿನಗಳ ಕಾಲ ನಡೆಯಲಿದೆ. 2025 ರ ಉತ್ಸವವನ್ನು ಬಹಳ ವಿಜೃಂಭಣೆಯಿಂದ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಸಚಿವ ಜಮೀರ್ ಅಹ್ಮದ್ ಖುದ್ದು ಹೇಳುವಂತೆ ಈ ವರ್ಷದ ಉತ್ಸವ ಭಿನ್ನವಾಗಿದೆ, ಸೊಗಸಾಗಿದೆ ಮತ್ತು ಅದ್ದೂರಿಯಾಗಿದೆ.

ವಿಜಯನಗರ, ಫೆ. 28: ಹಂಪಿ ಉತ್ಸವಕ್ಕೆ (Hampi Utsav) ಕ್ಷಣಗಣನೆ ಶುರುವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್ ಕಾರ್ಯಕ್ರಮಕ್ಕೆ ಸಂಬಂಧಿಸಿದ ಅಪ್ಡೇಟ್​ಗಳನ್ನು ಹೊಸಪೇಟೆಯಲ್ಲಿ ಮಾಧ್ಯಮಗಳಿಗೆ ನೀಡಿದರು. ಹಂಪಿ ಉತ್ಸವದ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬರಬೇಕಿತ್ತು,ಆದರೆ ಮಂಡಿನೋವಿಂದ ಬಳಲುತ್ತಿರುವ ಅವರು ಬರಲಾಗಲ್ಲ ಅಂತ ಹೇಳಿದ್ದಾರೆ ಮತ್ತು ತಮ್ಮ ಪರವಾಗಿ ಹಂಪಿ ಜನರ ಕ್ಷಮೆ ಕೇಳಬೇಕು ಅಂತ ಹೇಳಿರುವರೆಂದು ಜಮೀರ್ ಅಹ್ಮದ್ ಹೇಳಿದರು. ಹಾಗೆಯೇ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಕಾನೂನು ಸಚಿವ ಹೆಚ್ ಕೆ ಪಾಟೀಲ್ ಬೇರೆ ಕಾರ್ಯಕ್ರಮದಲ್ಲಿ ಬ್ಯೂಸಿಯಾಗಿರುವ ಕಾರಣ ಬರಲಾಗಲ್ಲ ಎಂದಿದ್ದಾರಂತೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: 2025ರ ಹಂಪಿ ಉತ್ಸವದ ಲಾಂಛನ ಅನಾವರಣ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.