ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಮನವಿ; ಎರಡನೇ ಬಾರಿ ಕೇಂದ್ರಕ್ಕೆ ಪತ್ರ

ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್, ಎನ್ಎಸ್ ಬೋಸರಾಜು, ಕೇಂದ್ರ ಸಚಿವ ಭಗವಂತ ಖೂಬಾ ನೇತೃತ್ವದ ನಿಯೋಗವು ಈ ಭಾಗದ ಶಾಸಕರು ಮತ್ತು ಸಂಸದರೊಂದಿಗೆ ಮಾಂಡವೀಯರನ್ನು ಭೇಟಿ ಮಾಡಿ ಯೋಜನೆಗೆ ಅನುಮೋದನೆ ನೀಡುವಂತೆ ಈಗಾಗಲೇ ಮನವಿ ಮಾಡಿದೆ.

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಮನವಿ; ಎರಡನೇ ಬಾರಿ ಕೇಂದ್ರಕ್ಕೆ ಪತ್ರ

Updated on: Sep 08, 2023 | 7:00 PM

ಬೆಂಗಳೂರು, ಸೆಪ್ಟೆಂಬರ್ 8: ರಾಯಚೂರಿನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಸ್ಥಾಪಿಸುವಂತೆ ಮನವಿ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಏಮ್ಸ್ ಸ್ಥಾಪನೆ ವಿಚಾರವಾಗಿ ಸಿದ್ದರಾಮಯ್ಯ ಬರೆದಿರುವ ಎರಡನೇ ಪತ್ರ ಇದಾಗಿದೆ. ಈ ಹಿಂದೆ ಜೂನ್‌ನಲ್ಲಿ ಪತ್ರ ಬರೆದಿದ್ದರು. ಏಮ್ಸ್ ಸ್ಥಾಪನೆ ವಿಚಾರವಾಗಿ ಕಲ್ಯಾಣ ಕರ್ನಾಟಕ ಪ್ರದೇಶದ ಶಾಸಕರ ನಿಯೋಗವು ಕಳೆದ ತಿಂಗಳು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರನ್ನು ಭೇಟಿ ಮಾಡಿತ್ತು.

ಸಿದ್ದರಾಮಯ್ಯ ಅವರು ಪತ್ರ ಬರೆದ ವಿಚಾರವಾಗಿ ಮುಖ್ಯಮಂತ್ರಿಗಳ ಕಚೇರಿ ಸಾಮಾಜಿಕ ಮಾಧ್ಯಮ ಎಕ್ಸ್​ ಮೂಲಕಮ ಮಾಹಿತಿ ಹಂಚಿಕೊಂಡಿದೆ. ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಯಿಂದ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಆರೋಗ್ಯ ವ್ಯವಸ್ಥೆ ಬಲಗೊಳ್ಳಲಿದೆ ಎಂದು ಅದು ಉಲ್ಲೇಖಿಸಿದೆ.

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಎಐಐಎಂಎಸ್ ಸ್ಥಾಪನೆಗೆ 2015 ರಿಂದಲೇ ಬೇಡಿಕೆ ಇದೆ ಆದರೆ ಈ ವಿಷಯದಲ್ಲಿ ಯಾವುದೇ ಪ್ರಗತಿಯಾಗಿಲ್ಲ.

ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್, ಎನ್ಎಸ್ ಬೋಸರಾಜು, ಕೇಂದ್ರ ಸಚಿವ ಭಗವಂತ ಖೂಬಾ ನೇತೃತ್ವದ ನಿಯೋಗವು ಈ ಭಾಗದ ಶಾಸಕರು ಮತ್ತು ಸಂಸದರೊಂದಿಗೆ ಮಾಂಡವೀಯರನ್ನು ಭೇಟಿ ಮಾಡಿ ಯೋಜನೆಗೆ ಅನುಮೋದನೆ ನೀಡುವಂತೆ ಈಗಾಗಲೇ ಮನವಿ ಮಾಡಿದೆ.


ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಲು ಕರ್ನಾಟಕ ಸರ್ಕಾರ ಒಪ್ಪಿಗೆ ನೀಡಿದೆ.

ಇದನ್ನೂ ಓದಿ: ಆದೇಶಕ್ಕಿಂತಲೂ ತಮಿಳುನಾಡಿಗೆ ಅಧಿಕ ನೀರು ಬಿಡುಗಡೆ; ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಕಿಡಿ

ಇತರ ಪ್ರದೇಶಗಳಿಗೆ ಹೋಲಿಸಿದರೆ ರಾಯಚೂರಿನಲ್ಲಿ ಆರೋಗ್ಯ, ಶಿಕ್ಷಣ ಮಟ್ಟ ಮತ್ತು ತಲಾ ಆದಾಯ ಕಡಿಮೆ ಇದೆ ಎಂದು ಸಿಎಂ ಹಿಂದಿನ ಪತ್ರದಲ್ಲಿ ತಿಳಿಸಿದ್ದರು. ಜಿಲ್ಲೆಯು ತನ್ನ ಭೌಗೋಳಿಕತೆಯ ಕಾರಣದಿಂದಾಗಿ ವಿಪರೀತ ಹವಾಮಾನ ಪರಿಸ್ಥಿತಿಗಳಿಗೂ ಸಾಕ್ಷಿಯಾಗಿದೆ.

ರಾಯಚೂರಿನಲ್ಲಿ ಏಮ್ಸ್​​ ಸ್ಥಾಪನೆಗೆ ಆಗ್ರಹಿಸಿ ಈ ಹಿಂದೆ ಅನೇಕ ಹೋರಾಟ, ಪ್ರತಿಭಟನೆ, ಧರಣಿಗಳೂ ನಡೆದಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us