ಕೃಷ್ಣಾ, ಭೀಮಾ ನದಿಗೆ ನೀರು ಹರಿಸುವಂತೆ ಮಹಾರಾಷ್ಟ್ರ ಸಿಎಂಗೆ ಸಿದ್ದರಾಮಯ್ಯ ಪತ್ರ
ಉತ್ತರ ಕರ್ನಾಟಕದ ಜಿಲ್ಲೆಗಳು ಕುಡಿಯುವ ನೀರಿನ ತೀವ್ರ ಕೊರತೆಯನ್ನು ಎದುರಿಸುತ್ತಿವೆ. ಈ ಸಮಸ್ಯೆಗೆ ಪರಿಹಾರವಾಗಿ, ಮುಖ್ಯಮಂತ್ರಿಗಳು ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಕೊಯ್ನಾ ಮತ್ತು ಉಜ್ಜಯನಿ ಜಲಾಶಯಗಳಿಂದ ಕೃಷ್ಣಾ ಮತ್ತು ಭೀಮಾ ನದಿಗಳಿಗೆ ನೀರು ಬಿಡುಗಡೆ ಮಾಡುವಂತೆ ವಿನಂತಿಸಿದ್ದಾರೆ. ಇದರಿಂದ ಜನರು ಮತ್ತು ಜಾನುವಾರುಗಳಿಗೆ ನೀರಿನ ಅಗತ್ಯವನ್ನು ಪೂರೈಸಲು ಸಹಾಯವಾಗುತ್ತೆ ಎಂದಿದ್ದಾರೆ.

ಬೆಂಗಳೂರು, ಏಪ್ರಿಲ್ 01: ಕರ್ನಾಟಕದ (Karnataka) ಕುಡಿಯುವ ನೀರಿನ ಅಗತ್ಯಗಳಿಗಾಗಿ ಕೊಯ್ನಾ (Koyna) ಜಲಾಶಯದಿಂದ ಕೃಷ್ಣಾ ನದಿಗೆ (Krishna River) ಮತ್ತು ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ (Bhima River) ನೀರು ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪತ್ರ ಬರೆದಿದ್ದಾರೆ.
ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳು ಮಾರ್ಚ್ 2025 ರ ಆರಂಭದಿಂದಲೂ ಕುಡಿಯುವ ನೀರಿನ ತೀವ್ರ ಕೊರತೆಯನ್ನು ಎದುರಿಸುತ್ತಿವೆ. ಹಿಂದಿನ ಸಂದರ್ಭಗಳಲ್ಲಿ, ಬೇಸಿಗೆ ಕಾಲದಲ್ಲಿ, ಜನ-ಜಾನುವಾರುಗಳ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ಕೃಷ್ಣಾ ನದಿಯಿಂದ ನೀರನ್ನು ಬಿಡುಗಡೆ ಮಾಡಲು ಮಹಾರಾಷ್ಟ್ರ ಸರ್ಕಾರ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿತ್ತು. ಕರ್ನಾಟಕ ಸರ್ಕಾರವು ಈ ಮೂಲಕ ಮಹಾರಾಷ್ಟ್ರ ರಾಜ್ಯಕ್ಕೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತದೆ ಎಂದು ಪತ್ರದಲ್ಲಿ ಬರೆದಿದ್ದಾರೆ.
ಟ್ವಿಟರ್ ಪೋಸ್ಟ್
The people of Belagavi, Vijayapura, Bagalkot, Kalaburagi, Yadgiri & Raichur are facing an alarming drinking water crisis due to rising temperatures and depleted reservoirs.
I have requested Shri @Dev_Fadnavis to release water from Warna/Koyna & Ujjini reservoirs to alleviate the… pic.twitter.com/ICksjSoeuy
— Siddaramaiah (@siddaramaiah) April 1, 2025
ಪ್ರಸ್ತುತ, ಹೆಚ್ಚುತ್ತಿರುವ ತಾಪಮಾನ ಮತ್ತು ಹಿಪ್ಪರಗಿ ಬ್ಯಾರೇಜ್ ಮತ್ತು ಇತರ ಸ್ಥಳೀಯ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರು ಮುಂಗಾರು ಆರಂಭವಾಗುವವರೆಗೆ ಕೃಷ್ಣಾ ಜಲಾನಯನ ಪ್ರದೇಶದ ಉತ್ತರ ಕರ್ನಾಟಕ ಜಿಲ್ಲೆಗಳ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ಸಾಕಾಗುವುದಿಲ್ಲ. ಹೀಗಾಗಿ, ಪರಿಸ್ಥಿತಿ ಹೆಚ್ಚು ಗಂಭೀರವಾಗುತ್ತಿದೆ.
ಇದನ್ನೂ ಓದಿ: ಕಿತ್ತೂರು ರಾಣಿ ಚೆನ್ನಮ್ಮ ಸಮಾಧಿ ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಿ: ಮೋದಿಗೆ ಸಿದ್ದರಾಮಯ್ಯ ಪತ್ರ
ಈ ಹಿನ್ನೆಲೆಯಲ್ಲಿ, ಕರ್ನಾಟಕದ ಉತ್ತರ ಜಿಲ್ಲೆಗಳ ಜನ-ಜಾನುವಾರುಗಳ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು, ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಕನಿಷ್ಠ 2.00 ಟಿಎಂಸಿ ಮತ್ತು ಉಜ್ಜಯನಿ ಜಲಾಶಯದಿಂದ ಭೀಮಾ ನದಿಗೆ 1.00 ಟಿಎಂಸಿ ನೀರನ್ನು ಬಿಡುಗಡೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಎಂದು ಪತ್ರದ ಮೂಲಕ ವಿನಂತಿಸಿದ್ದಾರೆ.
Published On - 7:26 pm, Tue, 1 April 25