ಅಕ್ರಮ ಗಣಿಗಾರಿಕೆ ಕೇಸ್​ಗಳ​ ತನಿಖೆ ಸೇರಿ ಹಲವು ನಿರ್ಧಾರಗಳಿಗೆ ಕ್ಯಾಬಿನೆಟ್​ ಅಸ್ತು: ಇಲ್ಲಿದೆ ಸಂಪೂರ್ಣ ಮಾಹಿತಿ

ಇಂದು ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ಹಲವಾರು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ರೈತ ಸುರಕ್ಷಾ ಯೋಜನೆ, ಸಾವಯವ ಮತ್ತು ಸಿರಿಧಾನ್ಯ ಹಬ್ ಸ್ಥಾಪನೆ, ಹೊಸ ಆಸ್ಪತ್ರೆ ಸೌಲಭ್ಯಗಳು ಮತ್ತು ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಅಕ್ರಮ ಗಣಿಗಾರಿಕೆ ಪ್ರಕರಣಗಳ ತನಿಖೆಗೂ ಆದೇಶಿಸಲಾಗಿದೆ.

ಅಕ್ರಮ ಗಣಿಗಾರಿಕೆ ಕೇಸ್​ಗಳ​ ತನಿಖೆ ಸೇರಿ ಹಲವು ನಿರ್ಧಾರಗಳಿಗೆ ಕ್ಯಾಬಿನೆಟ್​ ಅಸ್ತು: ಇಲ್ಲಿದೆ ಸಂಪೂರ್ಣ ಮಾಹಿತಿ
ಅಕ್ರಮ ಗಣಿಗಾರಿಕೆ ಕೇಸ್​ಗಳ​ ತನಿಖೆ ಸೇರಿ ಹಲವು ನಿರ್ಧಾರಗಳಿಗೆ ಕ್ಯಾಬಿನೆಟ್​ ಅಸ್ತು: ಇಲ್ಲಿದೆ ಸಂಪೂರ್ಣ ಮಾಹಿತಿ
Follow us
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ

Updated on:Nov 14, 2024 | 4:39 PM

ಬೆಂಗಳೂರು, ನವೆಂಬರ್​ 14: ವಿಧಾನಸೌಧದಲ್ಲಿ ಇಂದು ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಮಾಡಲಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್​, ಕೆ.ಜೆ.ಜಾರ್ಜ್, ಚಲುವರಾಯಸ್ವಾಮಿ, ಜಮೀರ್ ಅಹ್ಮದ್​, ಪರಮೇಶ್ವರ್, ಬೋಸರಾಜು ಸೇರಿದಂತೆ ಹಲವರು ಭಾಗಿಯಾಗಿದ್ದು, ಮಹತ್ವದ ವಿಷಯಗಳನ್ನು ಚರ್ಚೆ ಮಾಡಲಾಗಿದೆ.

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳು ಹೀಗಿವೆ

ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕಾನೂನು ಸಚಿವ ಹೆಚ್​ಕೆ ಪಾಟೀಲ್, ನಾಮ ನಿರ್ದೇಶನ ಮಾಡಲು ರಾಜ್ಯಪಾಲರಿಗೆ ಶಿಫಾರಸು ಮಾಡಲು ಸಿಎಂ ಸಿದ್ದರಾಮಯ್ಯಗೆ ಕ್ಯಾಬಿನೆಟ್ ಅಧಿಕಾರ ನೀಡಿದೆ. 2024-25, 2025-26 ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಕಪ್​ ಆ್ಯಂಡ್​ ಕಪ್​ (Cup and Cap) ಮಾದರಿಯಲ್ಲಿ ಅನುಷ್ಠಾನಗೊಳಿಸಲು ಸೂಚಿಸಲಾಗಿದೆ.

ಇದನ್ನೂ ಓದಿ: Covid Scam: ಕೊವಿಡ್​ ಹಗರಣದ ತನಿಖೆಗೆ SIT ರಚನೆ ಮಾಡಲು ಸಂಪುಟ ಅಸ್ತು

ಈಗಾಗಲೇ ಹೊರಡಿಸಿರುವ ಆದೇಶಕ್ಕೆ ಹಾಗೂ ಯೋಜನೆಯನ್ನು ಜಾರಿಗೊಳಿಸಲು ಕ್ಲಸ್ಟರ್‌ವಾರು ವಿಮಾ ಸಂಸ್ಥೆಗಳಿಗೆ ಕಾರ್ಯಹಂಚಿಕೆ ಮಾಡಿರುವ ಕ್ರಮಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ. ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಬೆಂಗಳೂರಿನ ಹೆಬ್ಬಾಳದಲ್ಲಿ “ಸಾವಯವ ಮತ್ತು ಸಿರಿಧಾನ್ಯ ಹಬ್’ನ್ನು 20 ಕೋಟಿ ರೂ. ಮೊತ್ತದಲ್ಲೆ (ಕೇಂದ್ರ – ರೂ. 12.00 ಕೋಟಿಗಳು, ರಾಜ್ಯ – ರೂ. 8.00 ಕೋಟಿಗಳು) ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಅಕ್ರಮ ಗಣಿಗಾರಿಕೆ, ಹತ್ತು ಕಂಪನಿಗಳ ವಿರುದ್ಧ ಲೋಕಾಯುಕ್ತ ಎಸ್​ಐಟಿ ತನಿಖೆಗೆ ಸಂಪುಟ ತೀರ್ಮಾನ

ಅಕ್ರಮ ಗಣಿಗಾರಿಕೆ ಕುರಿತಾಗಿ ಹತ್ತು ಕಂಪನಿಗಳಿಗೆ ಸಿ ಪ್ರವರ್ಗ ಗಣಿ ಗುತ್ತಿಗೆ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಲೋಕಾಯುಕ್ತ ಎಸ್ ಐ ಟಿ ಗೆ ವಹಿಸಲು ಸಂಪುಟ ನಿರ್ಧಾರ ಮಾಡಿದೆ. ಮೈಸೂರು ಮ್ಯಾಂಗನೀಸ್ ಕಂಪನಿ, ಎಂ.ದಶರಥ ರಾಮರೆಡ್ಡಿ ಕಂಪನಿ, ಅಲ್ಲಂ ವೀರಭದ್ರಪ್ಪ ಗಣಿ ಕಂಪನಿ, ಕರ್ನಾಟಕ ಲಿಂಪೋ ಗಣಿ ಕಂಪನಿ, ಅಂಜನಾ ಮಿನರಲ್ಸ್​​, ರಝಯ್ಯಾ ಖಾನಂ ಗಣಿ, ಮಿಲನಾ ಮಿನರಲ್ಸ್, ಎಂ.ಶ್ರೀನಿವಾಸುಲು ಕಂಪನಿ, ಜಿ.ರಾಜಶೇಖರ್ ಕಂಪನಿ, ಚನ್ನಕೇಶವ ರೆಡ್ಡಿ ಲಕ್ಷ್ಮೀ ನರಸಿಂಹ ಮೈನಿಂಗ್ ಕಂಪನಿ ವಿರುದ್ಧ ತನಿಖೆಗೆ ನಿರ್ಧರಿಸಲಾಗಿದೆ.

50 ಹಾಸಿಗೆಗಳ ತೀವ್ರ ನಿಗಾ ಆರೈಕೆ ಘಟಕಗಳ ನಿರ್ಮಾಣ

ರಾಷ್ಟ್ರೀಯ ಆರೋಗ್ಯ ಅಭಿಯಾನದ ಪಿಎಂ ಯೋಜನೆಯಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಡುಪಿ ಮತ್ತು ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಲ್ಲಿ 50 ಹಾಸಿಗೆಗಳ ತೀವ್ರ ನಿಗಾ ಆರೈಕೆ ಘಟಕಗಳ ನಿರ್ಮಾಣ ಹಾಗೂ ಉಡುಪಿ, ದಾವಣಗೆರೆ ಮತ್ತು ವಿಜಯಪುರ ಜಿಲ್ಲಾ ಆಸ್ಪತ್ರೆಗಳ ತೀವ್ರ ನಿಗಾ ಆರೈಕೆ ಘಟಕಗಳಿಗೆ ಅಗತ್ಯವಿರುವ ಉಪಕರಣಗಳನ್ನು ಖರೀದಿಸಲು ಒಟ್ಟು ಅಂದಾಜು ಮೊತ 39.37 ಕೋಟಿ ರೂ. ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ. 55 ಕೈದಿಗಳ ಬಿಡುಗಡೆಗೆ ಒಪ್ಪಿಗೆ ನೀಡಲಾಗಿದೆ.

ರಾಮನಗರ ಜಿಲ್ಲೆ, ಚನ್ನಪಟ್ಟಣ ಸರ್ಕಾರಿ ರೇಷ್ಮೆ ತರಬೇತಿ ಸಂಸ್ಥೆಯ ಆವರಣದಲ್ಲಿ ಹೈ-ಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ ನಿರ್ಮಾಣ ಹಂತ-2 ರ ಕಾಮಗಾರಿಯನ್ನು 125 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ಕ್ಯಾಬಿನೆಟ್​​ ಒಪ್ಪಿಗೆ ಸೂಚಿಸಿದೆ.

ಇದನ್ನೂ ಓದಿ: ಉಪಚುನಾವಣೆ ಅಂತ್ಯ: ಸಂಡೂರು, ಶಿಗ್ಗಾಂವಿ-ಚನ್ನಪಟ್ಟಣದಲ್ಲಿ ಎಷ್ಟು ಮತದಾನ?

ಇನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದ ಭೀಮ್ ಯೋಜನೆಯಡಿ ರಾಜ್ಯದ 07 ವೈದ್ಯಕೀಯ ಕಾಲೇಜುಗಳಲ್ಲಿ (ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಹುಬ್ಬಳ್ಳಿ, ಹಾಸನ, ಬಳ್ಳಾರಿ) 50 ಹಾಸಿಗೆಗಳ ಸಾಮರ್ಥ್ಯದ ಒಟ್ಟು Block 07 Critical Care ನಿರ್ಮಾಣದ ರೂ. 148.20 ಕೋಟಿ ಅಂದಾಜು ಮೊತ್ತಕ್ಕೆ ಅಸ್ತು ಎನ್ನಲಾಗಿದೆ.

ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಅಡಿ ಅಂಗನವಾಡಿಗಳಿಗೆ 3000 ಘಟಕ ವೆಚ್ಚದಂತೆ ಶಾಲಾ ಪೂರ್ವ ಶಿಕ್ಷಣ ಕಿಟ್ ಖರೀದಿಸಲು 20 ಕೋಟಿ ರೂ. ಮೊತ್ತ ಮತ್ತು ಡಾ. ವಿಷ್ಣುವರ್ಧನ್ ಸ್ಮಾರಕ ಭವನ ನಿರ್ಮಾಣಕ್ಕೆ ರೂ. 13.94 ಕೋಟಿ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:27 pm, Thu, 14 November 24

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು