ನ.27 ರಂದು ಸಿಎಂ ಸಿದ್ದರಾಮಯ್ಯ ಜನತಾ ದರ್ಶನ: ಈ ದಾಖಲೆಗಳನ್ನು ಒಯ್ಯುವುದು ಅಗತ್ಯ
Siddaramaiah Janata Darshan: ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಗೃಹ ಕಚೇರಿ ಕೃಷ್ಣಾದಲ್ಲಿ ನವೆಂಬರ್ 27ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕರ ಕುಂದುಕೊರತೆ ಆಲಿಸಲಿದ್ದಾರೆ. ಜನತಾ ದರ್ಶನದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ ಗುರುತಿನ ಪತ್ರಗಳಾದ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿ ತರಲು ಕೋರಲಾಗಿದೆ.
ಬೆಂಗಳೂರು, ನವೆಂಬರ್ 25: ಈಗಾಗಲೇ ಕೆಲವು ಬಾರಿ ಜನತಾ ದರ್ಶನ (Janata Darshan) ನಡೆಸಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇದೀಗ ಲೋಕಸಭೆ ಚುನಾವಣೆಗೂ ಮುನ್ನ ಮತ್ತೊಮ್ಮೆ ಜನರನ್ನು ತಲುಪಲು ಮುಂದಾಗಿದ್ದಾರೆ. ನವೆಂಬರ್ 27ರಂದು ಸೋಮವಾರ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಒಂದು ದಿನದ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಈ ವಿಚಾರವಾಗಿ ಕರ್ನಾಟಕ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿಯೂ ಮಾಹಿತಿ ನೀಡಿದೆ. ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಗೃಹ ಕಚೇರಿ ಕೃಷ್ಣಾದಲ್ಲಿ ನವೆಂಬರ್ 27ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕರ ಕುಂದುಕೊರತೆ ಆಲಿಸಲಿದ್ದಾರೆ. ಜನತಾ ದರ್ಶನದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ ಗುರುತಿನ ಪತ್ರಗಳಾದ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿ ತರಲು ಕೋರಲಾಗಿದೆ ಎಂದು ಎಕ್ಸ್ ಸಂದೇಶದಲ್ಲಿ ಸಚಿವಾಲಯ ಉಲ್ಲೇಖಿಸಿದೆ.
ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ರಾಜ್ಯದಾದ್ಯಂತ ನಡೆದ ಜನತಾ ದರ್ಶನಕ್ಕೆ ಸಿಕ್ತು ಉತ್ತಮ ಸ್ಪಂದನೆ
ಜನತಾ ದರ್ಶನದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ ಗುರುತಿನ ಪತ್ರಗಳಾದ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿ ತರಲು ಕೋರಲಾಗಿದೆ.#PublicMeeting @CMofKarnataka @siddaramaiah pic.twitter.com/CTLOCJQdiy
— DIPR Karnataka (@KarnatakaVarthe) November 25, 2023
ಜನತಾ ದರ್ಶನದ ಬಗ್ಗೆ ಮುಖ್ಯಮಂತ್ರಿಗಳ ಹೆಚ್ಚುವರಿ ಕಾರ್ಯದರ್ಶಿಗಳು ಈಗಾಗಲೇ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ಪತ್ರ ಬರೆದಿದ್ದಾರೆ. ಜನತಾ ದರ್ಶನದ ವೇಳೆಯೇ ಸಿಎಂ ಜಿಲ್ಲಾ, ತಾಲೂಕು ಪಂಚಾಯಿತಿ ಅಧಿಕಾರಿಗಳಿಗೆ ಸಮಸ್ಯೆ ನಿವಾರಣೆಗೆ ಸೂಚನೆ ನೀಡುವ ಸಾಧ್ಯತೆ ಇದೆ. ಹೀಗಾಗಿ ನವೆಂಬರ್ 27ರಂದು ಎಲ್ಲ ಅಧಿಕಾರಿಗಳು ಕಚೇರಿಗಳಲ್ಲಿ ಕಡ್ಡಾಯವಾಗಿ ಇರಬೇಕು ಎಂದು ಪತ್ರದಲ್ಲಿ ಸೂಚನೆ ನೀಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ