ಇಂದು ಸಿದ್ದರಾಮಯ್ಯ ವಿಜಯನಗರ ಪ್ರವಾಸ: ಹಂಪಿಯಲ್ಲಿ ಕರ್ನಾಟಕ ಸಂಭ್ರಮ-50 ಜ್ಯೋತಿ ರಥ ಯಾತ್ರೆಗೆ ಚಾಲನೆ
ಹಂಪಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ, ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಗಂಗಾ ಜಲಾಭಿಷೇಕ ನೆರವೇರಿಸಿ, ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ದೇವಾಲಯದ ಪ್ರಾಂಗಣದಲ್ಲಿರುವ ಭುವನೇಶ್ವರಿ ದೇಗುಲದಲ್ಲಿ ಪಂಚಾಮೃತ ಅಭಿಷೇಕ ಸಹಿತ ಪೂಜೆ ನೆರವೇರಿಸುವರು. ನಂತರ, ವಿರೂಪಾಕ್ಷೇಶ್ವರ ರಥಬೀದಿಯಲ್ಲಿ ಜನಪದ ಕಲಾತಂಡಗಳೊಂದಿಗೆ ಕಾಲ್ನಡಿಗೆಯಲ್ಲೇ ಬಸವಣ್ಣ ಮಂಟಪ ವೇದಿಕೆಯವರೆಗೆ ಸಾಗಲಿದ್ದಾರೆ. ಈ ವೇಳೆ, ರಥ ಬೀದಿಯಲ್ಲಿ ಜಾನಪದ ಕಲಾ ತಂಡಗಳ ಮೆರವಣಿಗೆ, ಹೆಲಿಕಾಪ್ಟರ್‌ನಿಂದ ಪುಷ್ಪವೃಷ್ಟಿ ನಡೆಯಲಿದೆ. ಬಳಿಕ, ಬಸವಣ್ಣ ಮಂಟಪ ವೇದಿಕೆಯಲ್ಲಿ ಜ್ಯೋತಿ ರಥಯಾತ್ರೆಗೆ ಚಾಲನೆ ನೀಡಲಿದ್ದಾರೆ.
ಬೆಂಗಳೂರು ನ.02: ಮೈಸೂರು (Mysore) ರಾಜ್ಯಕ್ಕೆ ಕರ್ನಾಟಕವೆಂದು (Karnataka) ನಾಮಕರಣ ಮಾಡಿ 50 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ‘ಕರ್ನಾಟಕ ಸಂಭ್ರಮ-50’ (Karnataka Sambrama-50) ಹೆಸರಿನಲ್ಲಿ ವರ್ಷಪೂರ್ತಿ ಕನ್ನಡ ರಾಜ್ಯೋತ್ಸವ (Kannada Rajyotsava) ಆಚರಣೆಗೆ ಸರ್ಕಾರ ಮುಂದಾಗಿದೆ. ಇದರ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸಂಜೆ 5 ಗಂಟೆಗೆ ವಿಶ್ವವಿಖ್ಯಾತ ಹಂಪಿಯಲ್ಲಿ ಕರುನಾಡಿನ ಜ್ಯೋತಿ ರಥಯಾತ್ರೆಗೆ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ವಿಶೇಷ ವಿಮಾನದ ಮೂಲಕ ಬೆಳಗ್ಗೆ 10.50ಕ್ಕೆ ಕೊಪ್ಪಳದ ಗಿಣಿಗೇರಾ ಏರ್ಸ್ಟ್ರಿಪ್ಗೆ ತೆರಳಲಿದ್ದಾರೆ.
10.55ಕ್ಕೆ ರಸ್ತೆ ಮಾರ್ಗವಾಗಿ ಹೊಸಪೇಟೆಗೆ ತೆರಳುತ್ತಾರೆ. 11.15ಕ್ಕೆ ಹೊಸಪೇಟೆ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 5 ಗಂಟೆಗೆ ಹಂಪಿಗೆ ತೆರಳಿ 5.30ಕ್ಕೆ ಹಂಪಿಯ ಶ್ರೀ ವಿರುಪಾಕ್ಷ ದೇವಸ್ಥಾನದ ಆವರಣದಲ್ಲಿ ದೀಪ ಬೆಳಗಿಸುವ ಮೂಲಕ ಕರ್ನಾಟಕ ಸಂಭ್ರಮ-50 ಜ್ಯೋತಿ ರಥ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಸಂಜೆ 5.50ಕ್ಕೆ ಅದೇ ಸ್ಥಳದಲ್ಲಿ ಕನ್ನಡಾಂಬೆಗೆ ನುಡಿನಮನ, ಧರ್ಮಗಳ ಸಂದೇಶ ಹಾಗೂ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಹಂಪಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ಹಂಪಿಗೆ ತೆರಳಲಿರುವ ಸಿಎಂ, ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಗಂಗಾ ಜಲಾಭಿಷೇಕ ನೆರವೇರಿಸಿ, ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ದೇವಾಲಯದ ಪ್ರಾಂಗಣದಲ್ಲಿರುವ ಭುವನೇಶ್ವರಿ ದೇಗುಲದಲ್ಲಿ ಪಂಚಾಮೃತ ಅಭಿಷೇಕ ಸಹಿತ ಪೂಜೆ ನೆರವೇರಿಸುವರು. ನಂತರ, ವಿರೂಪಾಕ್ಷೇಶ್ವರ ರಥಬೀದಿಯಲ್ಲಿ ಜನಪದ ಕಲಾತಂಡಗಳೊಂದಿಗೆ ಕಾಲ್ನಡಿಗೆಯಲ್ಲೇ ಬಸವಣ್ಣ ಮಂಟಪ ವೇದಿಕೆಯವರೆಗೆ ಸಾಗಲಿದ್ದಾರೆ. ಈ ವೇಳೆ, ರಥ ಬೀದಿಯಲ್ಲಿ ಜಾನಪದ ಕಲಾ ತಂಡಗಳ ಮೆರವಣಿಗೆ, ಹೆಲಿಕಾಪ್ಟರ್‌ನಿಂದ ಪುಷ್ಪವೃಷ್ಟಿ ನಡೆಯಲಿದೆ. ಬಳಿಕ, ಬಸವಣ್ಣ ಮಂಟಪ ವೇದಿಕೆಯಲ್ಲಿ ಜ್ಯೋತಿ ರಥಯಾತ್ರೆಗೆ ಚಾಲನೆ ನೀಡಲಿದ್ದಾರೆ.
ಇದನ್ನೂ ಓದಿ: ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ ಸೇರಿ ವಿವಿಧ ಕ್ಷೇತ್ರಗಳ 68 ಗಣ್ಯರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
ಹಂಪಿಯಿಂದ ಹೊಸಪೇಟೆ, ಕೊಪ್ಪಳ ಮಾರ್ಗವಾಗಿ ಜ್ಯೋತಿ ರಥಯಾತ್ರೆ ಗದಗಕ್ಕೆ ತೆರಳಲಿದ್ದು ಶುಕ್ರವಾರ ಅಲ್ಲಿ ಕಾರ್ಯಕ್ರಮ ನಡೆಯಲಿದೆ. ಸುವರ್ಣ ಸಂಭ್ರಮ ನೆನಪಿನಲ್ಲಿ 50 ಕನ್ನಡ ಪುಸ್ತಕಗಳ ಬಿಡುಗಡೆ, 50 ಮಹಿಳೆಯರಿಗೆ ಸನ್ಮಾನ ಸಮಾರಂಭ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಅಲ್ಲಿಂದ ನಾಡಿನಾದ್ಯಂತ ಈ ಜ್ಯೋತಿ ರಥಯಾತ್ರೆ ಸಂಚರಿಸಿ, 2024ರ ಅಕ್ಟೋಬರ್ 31ರ ವೇಳೆಗೆ ಬೆಂಗಳೂರು ತಲುಪಲಿದೆ.
ಕಾರ್ಯಕ್ರಮದಲ್ಲಿ ಕನ್ನಡ ಗೀತೆಗಳ ಗಾಯನ ನಡೆಯಲಿದೆ. ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡಗೀತ ಮೊಳಗಲಿದೆ. ಬಳಿಕ ಸರ್ವ ಧರ್ಮಗಳ ಸಂದೇಶ ನಡೆಯಲಿದ್ದು, ಸಿದ್ದರಾಮಯ್ಯನ ಹುಂಡಿಯ ಕಲಾವಿದರಿಂದ ವೀರ ಮಕ್ಕಳ ಕುಣಿತ ನಡೆಯಲಿದೆ. ಸಾಧುಕೋಕಿಲ ಮತ್ತು ತಂಡದವರಿಂದ ರಸಮಂಜರಿ ಕೂಡ ನಡೆಯಲಿವೆ. ಶಾಲಾ-ಕಾಲೇಜುಗಳ 5000ಕ್ಕೂ ಅಧಿಕ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ವೇದಿಕೆ ಮುಂಭಾಗ 5000ಕ್ಕೂ ಅಧಿಕ ಆಹಾರ ಮಳಿಗೆ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಹಂಪಿಯಲ್ಲಿ ಕನ್ನಡ ಸಂಭ್ರಮ ಮನೆ ಮಾಡಿದ್ದು, ಕನ್ನಡ ಧ್ವಜದ ಮಂಟಪಗಳನ್ನು ಶೃಂಗರಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ