AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಮಕಾತಿ ವ್ಯವಸ್ಥೆ ಸುಧಾರಣೆಗೆ ಸಿಎಂ ದಿಟ್ಟ ಹೆಜ್ಜೆ: 34,863 ಖಾಲಿ ಹುದ್ದೆಗಳ ಭರ್ತಿಗೆ ಸಿದ್ದರಾಮಯ್ಯ ಸೂಚನೆ

ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಅಗತ್ಯ ಸೇವೆಗಳ ಇಲಾಖೆಗಳಲ್ಲಿ ನೇಮಕಾತಿಗೆ ಆದ್ಯತೆ ನೀಡಬೇಕು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆ ಮೂಲಕ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆಗೆ ಸೂಚನೆ ನೀಡಿದ್ದಾರೆ.

ನೇಮಕಾತಿ ವ್ಯವಸ್ಥೆ ಸುಧಾರಣೆಗೆ ಸಿಎಂ ದಿಟ್ಟ ಹೆಜ್ಜೆ: 34,863 ಖಾಲಿ ಹುದ್ದೆಗಳ ಭರ್ತಿಗೆ ಸಿದ್ದರಾಮಯ್ಯ ಸೂಚನೆ
ನೇಮಕಾತಿ ವ್ಯವಸ್ಥೆ ಸುಧಾರಣೆಗೆ ಸಿಎಂ ದಿಟ್ಟ ಹೆಜ್ಜೆ: 34,863 ಖಾಲಿ ಹುದ್ದೆಗಳ ಭರ್ತಿಗೆ ಸಿದ್ದರಾಮಯ್ಯ ಸೂಚನೆ
Anil Kalkere
| Edited By: |

Updated on:Oct 07, 2024 | 7:02 PM

Share

ಬೆಂಗಳೂರು, ಅಕ್ಟೋಬರ್​ 07: ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ನಿಟ್ಟಿನಲ್ಲಿ 34,863 ಖಾಲಿ ಹುದ್ದೆಗಳನ್ನು ಕಾಲ ಮಿತಿಯಲ್ಲಿ ಭರ್ತಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಸೂಚನೆ ನೀಡಿದ್ದಾರೆ. ವಿವಿಧ ಇಲಾಖೆಗಳ ನೇಮಕಾತಿ ಬಗ್ಗೆ ಪ್ರಗತಿ ಪರಿಶೀಲನಾ ಸಭೆ ಮಾತನಾಡಿದ ಅವರು, 371ಜೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳ ಭರ್ತಿ ಕುರಿತು ಸೂಚನೆ ನೀಡಿದ್ದಾರೆ. 2023ರಲ್ಲಿ ಹೊರಡಿಸಿರುವ ಸುತ್ತೋಲೆ ಅನುಸರಿಸುವ ಕುರಿತು ಕ್ರಮಕ್ಕೆ ಆದೇಶಿಸಿದ್ದಾರೆ.

ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್‌ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಬೇಕು. ನೇಮಕಾತಿ ಪ್ರಕ್ರಿಯೆಯಲ್ಲಿ ಸುಧಾರಣೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ಕಳೆದ ವಾರ ಎಲ್ಲಾ ನೇಮಕಾತಿ ಪ್ರಾಧಿಕಾರಗಳ ಸಭೆಯನ್ನು ನಡೆಸಲಾಗಿದೆ. ಸಭೆಯಲ್ಲಿ ಕೈಗೊಂಡಿರುವ ಶಿಫಾರಸುಗಳನ್ನು ಪರಿಶೀಲಿಸಿ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್​

ಯುಪಿಎಸ್‌ಸಿಯಲ್ಲಿ ಕೇವಲ ಗ್ರೂಪ್‌ ಎ ಮತ್ತು ಗ್ರೂಪ್‌ ಬಿ ಹುದ್ದೆಗಳನ್ನು ಮಾಡಲು ನೇಮಕಾತಿ ಮಾಡಲಾಗುತ್ತಿದೆ. ಇದೇ ರೀತಿ ಕೆಪಿಎಸ್‌ಸಿ ಕೇವಲ ಗ್ರೂಪ್‌ ಎ ಮತ್ತು ಬಿ ಮಾತ್ರ ನೇಮಕಾತಿ ಪ್ರಕ್ರಿಯೆ ನಡೆಸಿ, ಗ್ರೂಪ್‌ ಸಿ ಯಂತಹ ಬೇರೆ ನೇಮಕಾತಿಗಳನ್ನು ಕೆಇಎ ಮೂಲಕ ಮಾಡುವ ಕುರಿತು ಚರ್ಚೆ ನಡೆಸಲಾಗಿದೆ. ಕೇರಳ ಮಾದರಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸುವ ಕುರಿತು ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಯುಪಿಎಸ್‌ಸಿ ಮಾದರಿಯಲ್ಲಿ ಕೆಪಿಎಸ್‌ಸಿ ಕಾರ್ಯನಿರ್ವಹಣೆಗೆ ಸಿಎಂ ಖಡಕ್​ ಸೂಚನೆ

ನೇಮಕಾತಿ ಕುರಿತಾಗಿ ವಾರ್ಷಿಕ ಕ್ಯಾಲೆಂಡರ್‌ ಸಿದ್ಧಪಡಿಸಲು ಇರುವ ತೊಡಕುಗಳನ್ನು ನಿವಾರಿಸಬೇಕು. ಆರ್ಥಿಕ ವರ್ಷದ ಆರಂಭದಲ್ಲಿ ಆಯಾ ಇಲಾಖೆಗಳು ನೇಮಕಾತಿಗೆ ಖಾಲಿಯಿರುವ ಹುದ್ದೆಗಳ ಕುರಿತು ಹಣಕಾಸು ಇಲಾಖೆಗೆ ಪ್ರಸ್ತಾವನೆ ಕಳುಹಿಸಬೇಕು. ಕಾಲಮಿತಿಯೊಳಗಾಗಿ ಹಣಕಾಸು ಇಲಾಖೆಯಿಂದ ಅನುಮೋದನೆ ಪಡೆದುಕೊಂಡು ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವ ಕುರಿತಾಗಿ ಏಕರೀತಿಯ ಕ್ಯಾಲೆಂಡರ್‌ ಸಿದ್ಧಪಡಿಸಬೇಕು ಎಂದಿದ್ದಾರೆ.

ಪಿಎಸ್‌ಐ ನೇಮಕಾತಿಯಲ್ಲಿ ದೈಹಿಕ ಪರೀಕ್ಷೆಯನ್ನು ಮೊದಲು ನಡೆಸಲಾಗುತ್ತಿದ್ದು, ಅಬಕಾರಿ ಇಲಾಖೆ ನೇಮಕಾತಿಯಲ್ಲಿ ಲಿಖಿತ ಪರೀಕ್ಷೆಯನ್ನು ಮೊದಲು ಮಾಡಲಾಗುತ್ತದೆ. ಅಬಕಾರಿ ಇಲಾಖೆ ಮಾದರಿಯನ್ನು ಪಿಎಸ್‌ಐ ನೇಮಕಾತಿಯಲ್ಲೂ ಅನುಸರಿಸುವ ಕುರಿತು ಪರಿಶೀಲನೆ ನಡೆಸಬೇಕು.

ಇದನ್ನೂ ಓದಿ: ಅ. 3ರಂದು PSI ಪರೀಕ್ಷೆ: ಅಕ್ರಮ ತಡೆಯಲು ಕಠಿಣ ರೂಲ್ಸ್

ರಾಜ್ಯದಲ್ಲಿ 41 ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿಯಾಗದ ಕಾರಣ ನೇಮಕಾತಿ ವಿಳಂಬವಾಗುತ್ತಿದೆ. ಕೆಲವು ಇಲಾಖೆಗಳಲ್ಲಿ ಹಲವು ದಶಕಗಳಿಂದ ಸಿ ಅಂಡ್‌ ಆರ್‌ ತಿದ್ದುಪಡಿಯಾಗಲಿಲ್ಲ. ಈ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳಿಗೆ ಅನುಕೂಲವಾಗುವಂತೆ ಮಾದರಿ ಸಿ ಅಂಡ್‌ ಆರ್‌ ಸಿದ್ಧಪಡಿಸಬೇಕು ಎಂದು ಸಭೆಯಲ್ಲಿ ಸೂಚನೆ ನೀಡಿದ್ದಾರೆ.

ಮತ್ತಷ್ಟು ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:55 pm, Mon, 7 October 24

ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ