AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದ ಶ್ರೀ ಭೋಗನಂದೀಶ್ವರ ದೇವಸ್ಥಾನಕ್ಕೆ ಇಂದು ಸಿಎಂ ಭೇಟಿ; ಶಿವೋತ್ಸವ ಕಾರ್ಯಕ್ರಮದಲ್ಲಿ ಭಾಗಿ

ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ (Maha Shivratri) ಸಂಭ್ರಮ ಜೋರಾಗಿದೆ. ಮಹಾಬಲೇಶ್ವರ ದರ್ಶನ ಪಡೆಯಲು ಸಹಸ್ರಾರು ಭಕ್ತರು ಆಗಮಿಸುತ್ತಿದ್ದಾರೆ.

ಚಿಕ್ಕಬಳ್ಳಾಪುರದ ಶ್ರೀ ಭೋಗನಂದೀಶ್ವರ ದೇವಸ್ಥಾನಕ್ಕೆ ಇಂದು ಸಿಎಂ ಭೇಟಿ; ಶಿವೋತ್ಸವ ಕಾರ್ಯಕ್ರಮದಲ್ಲಿ ಭಾಗಿ
ಮುಂಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on: Mar 01, 2022 | 9:31 AM

Share

ಚಿಕ್ಕಬಳ್ಳಾಪುರ: ಮಹಾ ಶಿವರಾತ್ರಿ (Maha Shivratri) ಹಿನ್ನೆಲೆ ಜಿಲ್ಲೆಗೆ ಇಂದು ಮುಖ್ಯಮಂತ್ರಿ ಹಾಗೂ ರಾಜ್ಯಪಾಲರು ತಾಲೂಕಿನ ಶ್ರೀ ಭೋಗನಂದೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ ದೇವಸ್ಥಾನ ಆವರಣದಲ್ಲಿ ಆಯೋಜಿಸಿರುವ ಶಿವೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಶಿವೋತ್ಸವ ಕಾರ್ಯಕ್ರಮ ಆಯೋಜಿಸಿದ್ದಾರೆ. ಮುಂಖ್ಯಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ರಾಜ್ಯಪಾಲ ಥಾವರ್ ಚಂದ್ ಗೆಲ್ಲೋಟ್ ಸಂಜೆ 6 ಗಂಟೆಯಿಂದ 8 ಗಂಟೆವರೆಗೂ ಕಾರ್ಯಕ್ರಮದಲ್ಲಿ ಗಣ್ಯರು ಭಾಗಿಯಾಗಲಿದ್ದಾರೆ.

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ  ಸಂಭ್ರಮ ಜೋರಾಗಿದೆ. ಮಹಾಬಲೇಶ್ವರ ದರ್ಶನ ಪಡೆಯಲು ಸಹಸ್ರಾರು ಭಕ್ತರು ಆಗಮಿಸುತ್ತಿದ್ದಾರೆ. ಅಚ್ಚುಕಟ್ಟಾಗಿ ಸರತಿ ಸಾಲಿನಲ್ಲಿ ಬಂದು ಶಿವನ ಆತ್ಮಲಿಂಗ ದರ್ಶನ ಪಡೆದ ಭಕ್ತರು ಪುನೀತ್‌ರಾದರು. ಗೋವಾ, ಮಹಾರಾಷ್ಟ್ರ ಹೀಗೆ ಬೇರೆ ಬೇರೆ ರಾಜ್ಯಗಳಿಂದ ಭಕ್ತರ ದಂಡು ಹರಿದು ಬರುತ್ತಿದೆ. ಅಹಿತಕರ ಘಟನೆಗಳು ನಡೆಯದಂತೆ ದೇವಸ್ಥಾನದ ಸುತ್ತ ಪೊಲೀಸ್ ಸರ್ಪಗಾವಲು ವಹಿಸಲಾಗಿದೆ. ಇದೇ ರೀತಿಯಾಗಿ ಮಹಾಶಿವರಾತ್ರಿ ಹಿನ್ನೆಲೆ ಹುಬ್ಬಳ್ಳಿಯ ಪ್ರಸಿದ್ಧ ಶ್ರೀ ಸಿದ್ದಾರೂಢರ ಜಾತ್ರೆ ಕೂಡ ಜರುಗಿತು. ಪ್ರತಿ ಶಿವರಾತ್ರಿಗೆ ಅದ್ದೂರಿಯಾಗಿ ನೆರವೇರೋ ಜಾತ್ರೆಗೆ ಬೆಳಿಗ್ಗೆಯೇ ಸಿದ್ದಾರೂಢರ ಗದ್ದುಗೆ ದರ್ಶನ ಪಡೆಯಲು ಭಕ್ತರು ಆಗಮಿಸುತ್ತಿದ್ದಾರೆ. ಇಂದು ಸಿದ್ದಾರೂಢರಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದ್ದು, ದೂರದ ಊರುಗಳಿಂದ ಸಾವಿರಾರು ಜನರು ಆಗಮಿಸುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ಜಾತ್ರೆ ರದ್ದಾಗಿತ್ತು. ಹುಬ್ಬಳ್ಳಿಯ ಪ್ರಸಿದ್ಧ ಮಠ ಈ ವರ್ಷ ಅದ್ದೂರಿಯಾಗಿ ಜಾತ್ರೆಗೆ ಸಜ್ಜಾಗಿದೆ.

ಮಾರ್ಚ್ ತಿಂಗಳಿನಲ್ಲಿ ಶಿವರಾತ್ರಿ ಹಬ್ಬ ಬರುತ್ತದೆ. ಇಡೀ ದಿನ ಉಪವಾಸ, ಜಾಗರಣೆಗಳನ್ನು ಮಾಡಿ, 4 ಯಾಮಗಳಲ್ಲೂ ಶಿವ ಪೂಜೆಯನ್ನು ಮಾಡುವ ಮೂಲಕ ಆಚರಿಸಲಾಗುತ್ತದೆ.ಇದರ ಮುಂದಿನ ದಿನ ವಿವಿಧ ರೀತಿಯ ಸಿಹಿ ತಿನಿಸುಗಳನ್ನು ತಯಾರಿಸುವರು. ತಂಬಿಟ್ಟು ಈ ಹಬ್ಬದ ಪ್ರಮುಖ ತಿನಿಸು. ಶಿವರಾತ್ರಿ, ಈ ದಿನದಂದು ಕೈಲಾಸ ವಾಸ ಪರಶಿವನನ್ನು ಕೋಟಿ ಕೋಟಿ ಜನರು ಭಜಿಸಿ ಪೂಜಿಸುತ್ತಾರೆ. ಶಿಶಿರ ಋತುವಿನ ಮಾಘ ಮಾಸದ ಕೃಷ್ಣ ಪಕ್ಷ ಬಹುಳ ಚತುರ್ದಶಿ ಯಂದು ಬರುವ ಶಿವರಾತ್ರಿಯ ದಿನ ಭಕ್ತಾದಿಗಳು ಶಂಭೋ ಶಂಕರನನ್ನು ನೆನೆದು, ಪುನೀತರಾಗುತ್ತಾರೆ. ತನ್ನ ನಂಬಿ ಬಂದ ಭಕ್ತರ ಇಷ್ಟಾರ್ಥಗಳಿಗೆ ಎಂದಿಗೂ ನಿರಾಸೆ ಮಾಡದ ದಯಾಮಯಿ ಶಿವನಿಗೆ ಶಿವರಾತ್ರಿಯಂದು ದೇಶಾದ್ಯಂತ ವಿಶೇಷ ಪೂಜೆಗಳು ನೆರವೇರುತ್ತವೆ. ಇಡೀ ಭಾರತದಾದ್ಯಂತ ಬಹುತೇಕ ಎಲ್ಲಾ ಭಾಗಗಳಲ್ಲೂ ಆಚರಿಸುವ ಹಬ್ಬ ಇದು. ಈ ಹಬ್ಬದಂದು ದಿನವಿಡೀ ಪೂಜೆ, ಉಪವಾಸ ಮಾಡಿ, ರಾತ್ರಿಯಿಡೀ ಜಾಗರಣೆ ಮಾಡಿ ಶಿವನನ್ನು ಆರಾಧಿಸುವ ಸಂಪ್ರದಾಯವಿದೆ.

ಇದನ್ನೂ ಓದಿ:

ಕೊಪ್ಪಳ: ಜನರಿಗೆ ವಿವಿಧ ರೀತಿ ವಂಚನೆ ಮಾಡುತ್ತಿದ್ದ ಕಪಟ ಸ್ವಾಮೀಜಿ ಪೊಲೀಸರ ಬಲೆಗೆ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್