Mekedatu Project: ನಾಳೆ ದೆಹಲಿ ವಿಮಾನ ಏರಲಿರುವ ಸಿಎಂ ಯಡಿಯೂರಪ್ಪ; ಪ್ರಧಾನಿ ಮೋದಿ ಜತೆ ಮೇಕೆದಾಟು ಯೋಜನೆ ಕುರಿತು ಚರ್ಚೆ ಸಾಧ್ಯತೆ

ಈಗಾಗಲೇ ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳು ದೆಹಲಿಗೆ ತೆರಳಿದ್ದು, ನಾಳೆ ಕೇಂದ್ರ ಜಲಶಕ್ತಿ ಇಲಾಖೆ ಸಚಿವರು, ಅಧಿಕಾರಿಗಳನ್ನು ರಾಜ್ಯದ ಅಧಿಕಾರಿಗಳು ಭೇಟಿಯಾಗಲಿದ್ದಾರೆ ಎಂಬ ಮಾಹಿತಿ ದೊರೆತಿದೆ. ನಾಳೆ ಸಿಎಂ ಯಡಿಯೂರಪ್ಪ ಜತೆ ಡಿಸಿಎಂ ಗೋವಿಂದ ಕಾರಜೋಳ ಮತ್ತು ಗೃಹಸಚಿವ ಬಸವರಾಜ ಬೊಮ್ಮಾಯಿ‌ ಕೂಡಾ ತೆರಳುವ ಸಾಧ್ಯತೆಯಿದೆ.

Mekedatu Project: ನಾಳೆ ದೆಹಲಿ ವಿಮಾನ ಏರಲಿರುವ ಸಿಎಂ ಯಡಿಯೂರಪ್ಪ; ಪ್ರಧಾನಿ ಮೋದಿ ಜತೆ ಮೇಕೆದಾಟು ಯೋಜನೆ ಕುರಿತು ಚರ್ಚೆ ಸಾಧ್ಯತೆ
ಸಿಎಂ ಯಡಿಯೂರಪ್ಪ ಮತ್ತು ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: guruganesh bhat

Updated on: Jul 15, 2021 | 4:58 PM

ಬೆಂಗಳೂರು: ನಾಳೆ ಮಧ್ಯಾಹ್ನ ಸಿಎಂ ಯಡಿಯೂರಪ್ಪ ದೆಹಲಿಗೆ ಪ್ರಯಾಣ ಬೆಳೆಸುವುದು ನಿಶ್ಚಯವಾಗಿದೆ. ವಿಶೇಷ ವಿಮಾನದ ಮೂಲಕ ರಾಷ್ಟ್ರ ರಾಜಧಾನಿಗೆ ತೆರಳಲಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಾಳೆ ಸಂಜೆ 6.30ರಿಂದ 8 ಗಂಟೆಯ ಒಳಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಮೇಕೆದಾಟು ಡ್ಯಾಂ (Mekedatu Project) ವಿಚಾರವಾಗಿ ಪ್ರಧಾನಿ ಜತೆ ಸಿಎಂ ಯಡಿಯೂರಪ್ಪ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ಈಗಾಗಲೇ ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳು ದೆಹಲಿಗೆ ತೆರಳಿದ್ದು, ನಾಳೆ ಕೇಂದ್ರ ಜಲಶಕ್ತಿ ಇಲಾಖೆ ಸಚಿವರು, ಅಧಿಕಾರಿಗಳನ್ನು ರಾಜ್ಯದ ಅಧಿಕಾರಿಗಳು ಭೇಟಿಯಾಗಲಿದ್ದಾರೆ ಎಂಬ ಮಾಹಿತಿ ದೊರೆತಿದೆ. ನಾಳೆ ಸಿಎಂ ಯಡಿಯೂರಪ್ಪ ಜತೆ ಡಿಸಿಎಂ ಗೋವಿಂದ ಕಾರಜೋಳ ಮತ್ತು ಗೃಹಸಚಿವ ಬಸವರಾಜ ಬೊಮ್ಮಾಯಿ‌ ಕೂಡಾ ತೆರಳುವ ಸಾಧ್ಯತೆಯಿದೆ.

ಮೇಕೆದಾಟು ಯೋಜನೆಗೆ ಆಗ್ರಹಿಸಿ ಮೇಕೆದಾಟುವಿನಿಂದ ವಿಧಾನಸೌಧದವರೆಗೆ ಪಾದಯಾತ್ರೆ ಮೇಕೆದಾಟು ಡ್ಯಾಂ ಯೋಜನೆಗಾಗಿ ಮೇಕೆದಾಟುನಿಂದ ಬೆಂಗಳೂರಿನ ವಿಧಾನಸೌಧದವರೆಗೆ ಅಗಸ್ಟ್ 3ರಿಂದ 7ರವರೆಗೆ ಪಾದಯಾತ್ರೆ ನಡೆಸುವುದಾಗಿ ರಾಜ್ಯ ಮೇಕೆದಾಟು ಹೋರಾಟ ಸಮಿತಿ ಘೋಷಿಸಿದೆ. ಐದು ದಿನಗಳ ಪಾದಯಾತ್ರೆಯಲ್ಲಿ ಸಾವಿರಾರು ರೈತರು ಪಾದಯಾತ್ರೆಯಲ್ಲಿ ಭಾಗಿಯಾಗಲಿದ್ದು, ಹೋರಾಟ ಸಮಿತಿ ಪಾದಯಾತ್ರೆಯನ್ನು ಆಯೋಜಿಸಲಿದೆ. ಕರ್ನಾಟಕ ರಾಜ್ಯ ಮೇಕೆದಾಟು ಹೋರಾಟ ಸಂಘದ ಪ್ರಮುಖರಾದ ಸಂಪತ್ ಕುಮಾರ್, ಜಿ ಜಿ ಹಳ್ಳಿ ನಾರಾಯಣಸ್ವಾಮಿ ಸುದ್ದಿಗೋಷ್ಠಿ ನಡೆಸಿ ಈ ಮಾಹಿತಿ ನೀಡಿದ್ದಾರೆ.

ಈ ಎಲ್ಲದರ ಬೆನ್ನಲ್ಲೇ ಮೇಕೆದಾಟು ಯೋಜನೆಗೆ ಈಗಾಗಲೇ ತಮಿಳುನಾಡು ವಿರೋಧ ನಾಳೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್​ರನ್ನು ಭೇಟಿಯಾಗಲಿರುವ ತಮಿಳುನಾಡು ನಿಯೋಗ ನಿರ್ಧರಿಸಿದೆ.

ಇದನ್ನೂ ಓದಿ: 

ಐದು ವರ್ಷಗಳಲ್ಲಿ 10 ಮಿಲಿಯನ್ ಉದ್ಯೋಗ ಸೃಷ್ಟಿ ಮಾಡುತ್ತೇವೆ; ಬಿ.ಎಸ್.ಯಡಿಯೂರಪ್ಪ

ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ ಮತ್ತೊಂದು ವಿಘ್ನ; ಈ ಬಾರಿ ಪುದುಚೇರಿಯಿಂದ ಅಡ್ಡಗಾಲು! ಯಾಕಂತೆ?

(CM Yeddyurappa to fly to Delhi tomorrow Possibility to discuss govt plan with PM Narendra Modi)

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ