CM Udasi Death: ಸಿ.ಎಂ. ಉದಾಸಿ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಪ್ರಧಾನಿ ದೇವೇಗೌಡ ಕಂಬನಿ

| Updated By: guruganesh bhat

Updated on: Jun 08, 2021 | 4:35 PM

ಹಾವೇರಿ ಜಿಲ್ಲೆ ಹಾನಗಲ್​ಗೆ ಇಂದು ಬೆಳಗ್ಗೆ ಭೇಟಿ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಿಎಂ ಉದಾಸಿ  ಅವರ ಅನಾರೋಗ್ಯ ನೆನೆದು  ಭಾವುಕರಾಗಿ ಕಣ್ಣೀರು ಹಾಕಿದ್ದರು.

CM Udasi Death: ಸಿ.ಎಂ. ಉದಾಸಿ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಪ್ರಧಾನಿ ದೇವೇಗೌಡ ಕಂಬನಿ
ಸಿ.ಎಂ. ಉದಾಸಿ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಕಂಬನಿ
Follow us on

ಬೆಂಗಳೂರು: ಮಾಜಿ ಸಚಿವ, ಶಾಸಕ, ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾದ ಸಿ.ಎಂ.ಉದಾಸಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ. ಉದಾಸಿಯವರು ಸಜ್ಜನ ಹಾಗೂ ಕ್ರಿಯಾಶೀಲ ರಾಜಕಾರಣಿಯಾಗಿದ್ದರು. ಸಚಿವರಾಗಿ ಅತ್ಯಂತ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದರು. ಅಭಿವೃದ್ಧಿ ಪರ ಚಿಂತಕ, ಅತ್ಯಂತ ಜನಪ್ರಿಯ ನಾಯಕರಾಗಿದ್ದರು. ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದರು. ಅಪರೂಪದ ನೇತಾರರೊಬ್ಬರನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ. ಭಗವಂತ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಾರ್ಥಿಸಿದ್ದಾರೆ.

ಮಾಜಿ ಸಚಿವ, ಶಾಸಕ ಸಿ.ಎಂ.ಉದಾಸಿ ಅವರ ನಿಧನಕ್ಕೆ ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್.ಡಿ.ದೇವೇಗೌಡ ಸಹ ಸಂತಾಪ ವ್ಯಕ್ತಪಡಿಸಿದ್ದಾರೆ.

ಹಾವೇರಿ ಜಿಲ್ಲೆ ಹಾನಗಲ್​ಗೆ ಇಂದು ಬೆಳಗ್ಗೆ ಭೇಟಿ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಿಎಂ ಉದಾಸಿ  ಅವರ ಅನಾರೋಗ್ಯ ನೆನೆದು  ಭಾವುಕರಾಗಿ ಕಣ್ಣೀರು ಹಾಕಿದ್ದರು. ಹಾನಗಲ್ ಸರ್ಕಾರಿ ಆಸ್ಪತ್ರೆಯಲ್ಲಿ ಇಂದು ಕೊವಿಡ್  ವಾರಿಯರ್ ಗಳಿಗೆ ಆಹಾರದ ಕಿಟ್ ವಿತರಿಸಿದ ನಂತರ ಮಾತನಾಡುತ್ತಿದ್ದ ವೇಳೆ ಗೃಹಸಚಿವ ಬೊಮ್ಮಾಯಿ‌ ಕಣ್ಣೀರು ಹಾಕಿದ್ದರು. ಮಾಜಿ ಸಚಿವ ಸಿ.ಎಂ.ಉದಾಸಿ ಅವರು ಇಂದಿಲ್ಲಿ ಉಪಸ್ಥಿತರಿರಬೇಕಿತ್ತು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ನೆನೆದಿದ್ದರು. ಶಾಸಕ ಸಿ.ಎಂ.ಉದಾಸಿ  ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸಹ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: CM Udasi Death: ಮಾಜಿ ಸಚಿವ, ಹಾನಗಲ್ ಶಾಸಕ ಸಿ ಎಂ ಉದಾಸಿ ನಿಧನ

Surekha Death: ಕನ್ನಡ ಚಿತ್ರರಂಗದ ಹಿರಿಯ ನಟಿ ಸುರೇಖಾ ಹೃದಯಾಘಾತದಿಂದ ನಿಧನ

(CM Yediyurappa and former Prime Minister Deve Gowda Condolences for MLA CM Udasi death)

Published On - 4:27 pm, Tue, 8 June 21