Karnataka Politics: ಸಚಿವ ಸಿ ಪಿ ಯೊಗೇಶ್ವರ್​ಗೆ ಕೋಲಾರ ಜಿಲ್ಲೆಯ ಉಸ್ತುವಾರಿ ಜವಾಬ್ಧಾರಿ ಘೋಷಿಸಿದ ಸಿಎಂ ಯಡಿಯೂರಪ್ಪ

ಕಂದಾಯ ಸಚಿವ ಮತ್ತು ಇಷ್ಟು ದಿನಗಳ ಕಾಲ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ಹೊಂದಿದ್ದ ಆರ್.ಅಶೋಕ್​ರ ಅಪೇಕ್ಷೆಯಂತೆ ಎಂಟಿಬಿ ನಾಗರಾಜ್ ಅವರಿಗೆ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ನೀಡಲಾಗಿದೆ. ಈಗ ಕೋಲಾರ ಜಿಲ್ಲೆ ಖಾಲಿ ಇದ್ದು, ಈ ಹುದ್ದೆಯನ್ನು ಸಿ.ಪಿ.ಯೋಗೇಶ್ವರ್ ಅವರಿಗೆ ವಹಿಸುತ್ತೇವೆ ಎಂದು ಅವರು ತಿಳಿಸಿದರು.

Karnataka Politics: ಸಚಿವ ಸಿ ಪಿ ಯೊಗೇಶ್ವರ್​ಗೆ ಕೋಲಾರ ಜಿಲ್ಲೆಯ ಉಸ್ತುವಾರಿ ಜವಾಬ್ಧಾರಿ ಘೋಷಿಸಿದ ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ ಮತ್ತು ಸಚಿವ ಸಿ.ಪಿ.ಯೋಗೇಶ್ವರ್
Follow us
TV9 Web
| Updated By: guruganesh bhat

Updated on:Jun 23, 2021 | 6:10 PM

ಬೆಂಗಳೂರು: ಕೋಲಾರ ಜಿಲ್ಲೆಯ ಉಸ್ತುವಾರಿ ಹುದ್ದೆ ಖಾಲಿ ಇದ್ದು, ಅದನ್ನು ಸಚಿವ ಸಿ.ಪಿ.ಯೋಗೇಶ್ವರ್​​ಗೆ ನೀಡಲು ನಿರ್ಧರಿಸಿದ್ದೇವೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಕಂದಾಯ ಸಚಿವ ಮತ್ತು ಇಷ್ಟು ದಿನಗಳ ಕಾಲ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ಹೊಂದಿದ್ದ ಆರ್.ಅಶೋಕ್​ರ ಅಪೇಕ್ಷೆಯಂತೆ ಎಂಟಿಬಿ ನಾಗರಾಜ್ ಅವರಿಗೆ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ನೀಡಲಾಗಿದೆ. ಈಗ ಕೋಲಾರ ಜಿಲ್ಲೆ ಖಾಲಿ ಇದ್ದು, ಈ ಹುದ್ದೆಯನ್ನು ಸಿ.ಪಿ.ಯೋಗೇಶ್ವರ್ ಅವರಿಗೆ ವಹಿಸುತ್ತೇವೆ ಎಂದು ಅವರು ತಿಳಿಸಿದರು.

ಕರ್ನಾಟಕದಲ್ಲಿ ಇದುವರೆಗೆ ಡೆಲ್ಟಾ ಪ್ಲಸ್ ವೈರಸ್​ ಪತ್ತೆಯಾಗಿಲ್ಲ. ಡೆಲ್ಟಾ ಪ್ಲಸ್ ವೈರಸ್ ಪತ್ತೆ ಅನ್ನುವುದೆಲ್ಲಾ ಊಹಾಪೋಹ. ಮೈಸೂರಿನಲ್ಲಿ ಪತ್ತೆಯಾದ ಬಗ್ಗೆ ಸಚಿವರ ಹೇಳಿಕೆ ವಿಚಾರವಾಗಿ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಬಿಜೆಪಿ ಕೋರ್ ಕಮೀಟಿ ಸಭೆಯ ನಂತರ ನೀಡಿದ್ದ ಸಂದೇಶವೇನು? ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಯಾಗಿಲ್ಲ. ಸಿಎಂ ಯಡಿಯೂರಪ್ಪನವರೇ ನಮ್ಮ ನಾಯಕರು. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಮಾತನ್ನು ಸ್ಪಷ್ಟಪಡಿಸಲೆಂದೇ ರಾಜ್ಯ ಬಿಜೆಪಿ ಉಸ್ತುವಾರಿಯಾದ ಅರುಣ್ ಸಿಂಗ್ ಆಗಮಿಸಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಬಿಜೆಪಿ ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದರು.

ಮುಂದಿನ ದಿನಗಳಲ್ಲಿ ಪಕ್ಷ, ಸರ್ಕಾರದ ವಿರುದ್ಧ ಬಹಿರಂಗ ಹೇಳಿಕೆ ನೀಡಿದವರ ಮೇಲೆ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಎರಡು ದಿನಗಳಲ್ಲಿ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ಅರುಣ್ ಸಿಂಗ್ ಕೋರ್ ಕಮಿಟಿ ಸಭೆಯಲ್ಲಿ ಭರವಸೆ ನೀಡಿದ್ದಾರೆ. ಅವರ ಭೇಟಿಯಲ್ಲಿ ಸಂಪುಟ ಪುನಾರಚನೆ ಬಗ್ಗೆಯೂ ಯಾವುದೇ ಚರ್ಚೆ ಆಗಿಲ್ಲ. ಶಾಸಕ ಅರವಿಂದ್ ಬೆಲ್ಲದ್ ಮಾಡಿರುವ ಆರೋಪ ಬಗ್ಗೆಯೂ ಪಕ್ಷದ ಗಮನಹರಿಸಿದೆ ಎಂದು ಅವರು ನಾಯಕತ್ವ ಬದಲಾವಣೆಯ ಪ್ರಹಸನ ಸದ್ಯ ಮುಕ್ತಾಯಗೊಂಡಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನೀಡಿದ ಸಂದೇಶವನ್ನು ತಿಳಿಸಿದ್ದರು

ಕೋರ್ ಕಮಿಟಿ ಸಭೆಯಲ್ಲಿ ಸರ್ಕಾರದ ಇಮೇಜ್ ಹೆಚ್ಚಿಸಲು ಚರ್ಚಿಸಲಾಗಿದೆ. ಪಕ್ಷ ಮತ್ತು ಸರ್ಕಾರದ ನಡುವೆ ಹೊಂದಾಣಿಕೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಕಾಂಗ್ರೆಸ್ ತುರ್ತು ಪರಿಸ್ಥಿತಿ ಹೇರಿದ್ದನ್ನು ಖಂಡಿಸಿ ಜೂನ್ 25ರಂದು ಕರಾಳ ದಿನ ಆಚರಿಸಲು ನಿರ್ಣಯ ಕೈಗೊಳ್ಳಲಾಗಿದೆ.  ಜಿ.ಪಂ, ತಾ.ಪಂ ಚುನಾವಣೆಗಳಿಗೆ ಸಿದ್ಧತೆ ನಡೆಸಲು ಪಕ್ಷದ ಜಿಲ್ಲಾ ಘಟಕಗಳಿಗೆ ಸೂಚನೆ ನೀಡಲಾಗಿದೆ. ಜೂನ್ 26ರಂದು ಬೆಂಗಳೂರಿನಲ್ಲಿ ರಾಜ್ಯ ಕಾರ್ಯಕಾರಿಣಿ ನಡೆಯಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದರು.

ಇದನ್ನೂ ಓದಿ: Delta Plus Variant: ಕರ್ನಾಟಕದಲ್ಲಿ ಇದುವರೆಗೆ ಡೆಲ್ಟಾ ಪ್ಲಸ್ ವೈರಸ್​ ಪತ್ತೆಯಾಗಿಲ್ಲ; ಸಿಎಂ ಯಡಿಯೂರಪ್ಪ ಸ್ಪಷ್ಟನೆ

ಸುದ್ದಿ ವಿಶ್ಲೇಷಣೆ: ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲ, ಕಾಂಗ್ರೆಸ್​ನಲ್ಲಿ ಈಗಲೇ ಹಲವಾರು ಮುಖ್ಯಮಂತ್ರಿಗಳು!

(CM Yediyurappa announce will give Kolar district in charge to Minister CP Yogeshwar)

Published On - 5:53 pm, Wed, 23 June 21

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ