ಹೋಟೆಲ್- ರೆಸ್ಟೋರೆಂಟ್ ತೆರೆಯಿರಿ, ಆದ್ರೆ ಮುನ್ನೆಚ್ಚರಿಕೆ ಇರಲಿ: ಸಿಎಂ ಸೂಚನೆ
ಬೆಂಗಳೂರು: ಕೊರೊನಾ ಸೋಂಕು ವಿರುದ್ಧದ ಲಾಕ್ ಡೌನ್ 5 ಅವಧಿಯಲ್ಲಿ ಸಾಕಷ್ಟು ಮುನ್ನೆಚ್ಚರಿಕೆಯೊಂದಿಗೆ ಹೋಟೆಲ್, ರೆಸ್ಟೋರೆಂಟ್ ತೆರೆಯಿರಿ ಎಂದು ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವುದಾಗಿ ಹೋಟೆಲ್ ಗಳ ಸಂಘದ ಪ್ರತಿನಿಧಿಗಳು ಮತ್ತು ಸಾರಿಗೆ ಕಂಪೆನಿಗಳ ಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ರಾಜ್ಯದಲ್ಲಿ ಹೋಟೆಲ್ ಗಳು, ರೆಸ್ಟೋರೆಂಟ್ ಗಳನ್ನು ತೆರೆಯಲು ಅವಕಾಶ ನೀಡಲಾಗುತ್ತಿದೆ. ಆದರೆ ನಿಗದಿಪಡಿಸಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ […]
ಬೆಂಗಳೂರು: ಕೊರೊನಾ ಸೋಂಕು ವಿರುದ್ಧದ ಲಾಕ್ ಡೌನ್ 5 ಅವಧಿಯಲ್ಲಿ ಸಾಕಷ್ಟು ಮುನ್ನೆಚ್ಚರಿಕೆಯೊಂದಿಗೆ ಹೋಟೆಲ್, ರೆಸ್ಟೋರೆಂಟ್ ತೆರೆಯಿರಿ ಎಂದು ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವುದಾಗಿ ಹೋಟೆಲ್ ಗಳ ಸಂಘದ ಪ್ರತಿನಿಧಿಗಳು ಮತ್ತು ಸಾರಿಗೆ ಕಂಪೆನಿಗಳ ಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ.
ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ರಾಜ್ಯದಲ್ಲಿ ಹೋಟೆಲ್ ಗಳು, ರೆಸ್ಟೋರೆಂಟ್ ಗಳನ್ನು ತೆರೆಯಲು ಅವಕಾಶ ನೀಡಲಾಗುತ್ತಿದೆ. ಆದರೆ ನಿಗದಿಪಡಿಸಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಹಾಗೂ ಕೆಲವು ತೊಡಕುಗಳ ನಿವಾರಣೆ ಕುರಿತು ಪ್ರವಾಸೋದ್ಯಮ ಹಾಗೂ ಸಾರಿಗೆ ಇಲಾಖೆ ಮತ್ತು ವಿವಿಧ ಭಾಗೀದಾರರ ಜೊತೆಗೆ ಚರ್ಚೆ ನಡೆಸಿದ ಸಂರ್ಭದಲ್ಲಿ ತಿಳಿಸಿದರು.
ಈ ಸಭೆಯಲ್ಲಿ ಭಾಗವಹಿಸಿದ್ದ ಬಸ್ ಮಾಲೀಕರ ಸಂಘ ಹೋಟೆಲ್ ಮಾಲೀಕರ ಸಂಘ ಹಾಗು ಟ್ಯಾಕ್ಸಿ ಮಾಲಿಕರ ಸಂಘಗಳ ನಿಯೋಗವು ಸರ್ಕಾರದ ಮುಂದೆ ಕೆಲ ಬೇಡಿಕೆಗಳನ್ನು ಮುಂದಿಟ್ಟಿತು. ಅವರ ಬೇಡಿಕೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಭರವೆಯ ಮಾತುಗಳನ್ನಾಡಿದ್ದಾರೆ. ಇದೇ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯು ಹೋಟೆಲ್ ಗಳು, ಆತಿಥ್ಯ ಘಟಕಗಳು ಮತ್ತು ಪ್ರವಾಸಿ ತಾಣಗಳನ್ನು ತೆರೆಯುವ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳ ಕೈಪಿಡಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಬಿಡುಗಡೆ ಮಾಡಿದರು.
Published On - 1:38 pm, Sat, 6 June 20