AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mekedatu Project: ಮೇಕೆದಾಟು ಯೋಜನೆಯನ್ನು ಜಾರಿ ಮಾಡಿಯೇ ಮಾಡುತ್ತೇವೆ; ದೆಹಲಿಯಲ್ಲಿ ಸಿಎಂ ಯಡಿಯೂರಪ್ಪ ಅಚಲ ನುಡಿ

ಕರ್ನಾಟಕ ನೀಡಿರುವ  ಮೇಕೆದಾಟು ಯೋಜನೆ ವರದಿಯಲ್ಲಿ ಹಲವು ತಪ್ಪುಗಳಿವೆ, ತಮಿಳುನಾಡು ರಾಜ್ಯದ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಇದನ್ನು ಯಾವುದೇ ಕಾರಣಕ್ಕೂ ಕೇಂದ್ರ ಒಪ್ಪುವುದಿಲ್ಲ. ಕರ್ನಾಟಕ ವರದಿಯನ್ನು ತಿರಸ್ಕರಿಸುತ್ತೇವೆ ಎಂದು ಸಚಿವರು ಭರವಸೆ ನೀಡಿದ್ದಾರೆ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದೊರೈ ಮುರುಗನ್ ಮಾಧ್ಯಮದವರಿಗೆ ಹೇಳಿದ್ದಾರೆ.

Mekedatu Project: ಮೇಕೆದಾಟು ಯೋಜನೆಯನ್ನು ಜಾರಿ ಮಾಡಿಯೇ ಮಾಡುತ್ತೇವೆ; ದೆಹಲಿಯಲ್ಲಿ ಸಿಎಂ ಯಡಿಯೂರಪ್ಪ ಅಚಲ ನುಡಿ
ಬಿ ಎಸ್ ಯಡಿಯೂರಪ್ಪ ಮತ್ತು ಎಂ ಕೆ ಸ್ಟಾಲಿನ್
TV9 Web
| Updated By: guruganesh bhat|

Updated on: Jul 16, 2021 | 5:37 PM

Share

ದೆಹಲಿ: ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಯಾವುದೇ ತೊಂದರೆಯೂ ಇಲ್ಲ. ಆದರೂ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಯನ್ನು ವಿರೋಧಿಸುತ್ತಿದೆ ಎಂದು ತಿಳಿದಿಲ್ಲ. ಮೇಕೆದಾಟು ಯೋಜನೆ ಜಾರಿಗೆ ನಮಗೆ ಅವಕಾಶ ಇದೆ. ನಾವು ಮೇಕೆದಾಟು ಯೋಜನೆಯನ್ನು ಜಾರಿ ಮಾಡಿಯೇ ಮಾಡುತ್ತೇವೆ. ಮೇಕೆದಾಟು ಯೋಜನೆ ಆರಂಭಕ್ಕೆ ಶಕ್ತಿ ಮೀರಿ ಪ್ರಯತ್ನಿಸುತ್ತೇನೆ ಎಂದು ದೆಹಲಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಆರು ತಿಂಗಳ ಬಳಿಕ ದೆಹಲಿಗೆ ಬರುತ್ತಿದ್ದೇನೆ. ರಾಜ್ಯದ ಅಭಿವೃದ್ಧಿ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಸಂಪುಟದ ಹೊಸ ಸಚಿವರನ್ನು ಭೇಟಿ ಮಾಡುತ್ತೇನೆ. ಜತೆಗೆ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್​ರನ್ನು ಭೇಟಿ ಮಾಡುತ್ತೇನೆ ಎಂದು ಅವರು ಇದೇ ವೇಳೆ ತಿಳಿಸಿದರು.

ಕರ್ನಾಟಕದ ವರದಿ ಒಪ್ಪುವುದಿಲ್ಲವೆಂದು ತಮಿಳುನಾಡು ನಿಯೋಗಕ್ಕೆ ಕೇಂದ್ರ ಸಚಿವ ಶೇಖಾವತ್ ಭರವಸೆ ಕರ್ನಾಟಕದ ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು ಹಾಕುತ್ತಿದೆ. ಯೋಜನೆ ವಿರೋಧಿಸಿ ತಮಿಳುನಾಡು ಸರ್ವಪಕ್ಷಗಳ ನಿಯೋಗ (all-party delegation from Tamilnadu) ಇಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಅವರನ್ನು ಭೇಟಿಯಾಗಿದೆ. ಯೋಜನೆಗೆ ಒಪ್ಪಿಗೆ ನೀಡದಂತೆ ನಿಯೋಗ ಮನವಿ ಮಾಡಿದೆ. ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ನೀಡಿರುವ ವಿಸ್ತೃತ ವರದಿಯನ್ನು ಒಪ್ಪುವುದಿಲ್ಲ ಎಂದು ಕೇಂದ್ರ ಸಚಿವ ಶೇಖಾವತ್ ಭರವಸೆ ನೀಡಿದ್ದಾರೆ.

ಕರ್ನಾಟಕ ನೀಡಿರುವ  ಮೇಕೆದಾಟು ಯೋಜನೆ (Mekedatu dam project) ವರದಿಯಲ್ಲಿ ಹಲವು ತಪ್ಪುಗಳಿವೆ, ತಮಿಳುನಾಡು ರಾಜ್ಯದ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಇದನ್ನು ಯಾವುದೇ ಕಾರಣಕ್ಕೂ ಕೇಂದ್ರ ಒಪ್ಪುವುದಿಲ್ಲ. ಕರ್ನಾಟಕ ವರದಿಯನ್ನು ತಿರಸ್ಕರಿಸುತ್ತೇವೆ ಎಂದು ಸಚಿವರು ಭರವಸೆ ನೀಡಿದ್ದಾರೆ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದೊರೈ ಮುರುಗನ್ ಮಾಧ್ಯಮದವರಿಗೆ ಹೇಳಿದ್ದಾರೆ.

ತಮಿಳುನಾಡು ಸಿಎಂ ಸ್ಟಾಲಿನ್  ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭೇಟಿ: ಇನ್ನು ಜುಲೈ 18 ರಂದು ತಮಿಳುನಾಡು ಸಿಎಂ ಸ್ಟಾಲಿನ್ ದೆಹಲಿಗೆ ತೆರಳಲಿದ್ದು ರಾಷ್ಟ್ರಪತಿ ರಾಮನಾಥ್ ಕೋವಿಂದ್ (President Ram Nath Kovind) ಭೇಟಿಯಾಗಲಿದ್ದಾರೆ. ಮೇಕೆದಾಟು ಯೋಜನೆಗೆ ಅವಕಾಶ ನೀಡದಂತೆ ಮನವಿ ಮಾಡಲಿದ್ದಾರೆ.

ಮೇಕೆದಾಟು ಜಲಾಶಯ ನಿರ್ಮಾಣ ಯೋಜನೆಯಿಂದ ಕರ್ನಾಟಕ ಸರ್ಕಾರ 440 ಮೆಗಾ ವ್ಯಾಟ್ ವಿದ್ಯುತ್‌ ಉತ್ಪಾದನೆ ಮಾಡಲು ಉದ್ದೇಶಿಸಿದೆ. ಕಾವೇರಿ ನ್ಯಾಯಾಧಿಕರಣದ ತೀರ್ಪಿನ ಅನ್ವಯ ಕುಡಿಯುವ ನೀರಿನ ಬಳಕೆಗೂ ಯೋಜನೆ ಸಹಕಾರಿಯಾಗಲಿದೆ. ಆದರೆ, ಕುಡಿಯುವ ಉದ್ದೇಶಕ್ಕೆ ಈ ಯೋಜನೆಯ ಅಗತ್ಯವಿಲ್ಲ. ಇದೇ ವೇಳೆ ಯೋಜನೆಯನ್ನು ನೀರಾವರಿಗೆ ಬಳಕೆ ಮಾಡುವುದಕ್ಕೆ ಅವಕಾಶವಿಲ್ಲ.

ಇದನ್ನೂ ಓದಿ: 

ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ ಮತ್ತೊಂದು ವಿಘ್ನ; ಈ ಬಾರಿ ಪುದುಚೇರಿಯಿಂದ ಅಡ್ಡಗಾಲು! ಯಾಕಂತೆ?

ಮೇಕೆದಾಟು ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಸಿಎಂ ಯಡಿಯೂರಪ್ಪ

(CM Yediyurappa says We will implement Mekedatu Project anyhow)