AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hassan Airport: ಆದಷ್ಟು ಬೇಗ ದೇವೇಗೌಡರ ಜತೆ ಹಾಸನ ವಿಮಾನ ನಿಲ್ದಾಣದ ಶಂಕುಸ್ಥಾಪನೆ ಮಾಡುವೆ: ಸಿಎಂ ಯಡಿಯೂರಪ್ಪ

ಕೊವಿಡ್ ಪರಿಸ್ಥಿತಿಯಲ್ಲಿ ಸ್ವಲ್ಪ ಸುಧಾರಣೆ ಆದ ಬಳಿಕ ಅಭಿವೃದ್ಧಿ ಕೆಲಸಗಳತ್ತ ಹೆಚ್ಚು ಗಮನಹರಿಸುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸುದ್ದಿಗಾರರಿಗೆ ತಿಳಿಸಿದರು.

Hassan Airport: ಆದಷ್ಟು ಬೇಗ ದೇವೇಗೌಡರ ಜತೆ ಹಾಸನ ವಿಮಾನ ನಿಲ್ದಾಣದ ಶಂಕುಸ್ಥಾಪನೆ ಮಾಡುವೆ: ಸಿಎಂ ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ ಮತ್ತು ಎಚ್.ಡಿ.ದೇವೇಗೌಡ
TV9 Web
| Edited By: |

Updated on: Jun 13, 2021 | 3:48 PM

Share

ಬೆಂಗಳೂರು: ಹಾಸನದಲ್ಲಿ ವಿಮಾನ ನಿಲ್ದಾಣದ ಕಾಮಗಾರಿ ತಕ್ಷಣ ಪ್ರಾರಂಭ ಆಗಬೇಕಿದೆ. ಶಿವಮೊಗ್ಗದ ಏಜೆನ್ಸಿಯವರಿಗೆ ತಕ್ಷಣ ಕೆಲಸ ಪ್ರಾರಂಭ ಮಾಡಲು ಸೂಚಿಸಿದ್ದೇನೆ. ಆದಷ್ಟು ಬೇಗ ನಾನು ಮತ್ತು ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡರು ಹಾಸನ ವಿಮಾನ ನಿಲ್ದಾಣದ ಶಂಕುಸ್ಥಾಪನೆ ನೆರವೇರಿಸುತ್ತೇವೆ. ಕೊವಿಡ್ ಪರಿಸ್ಥಿತಿಯಲ್ಲಿ ಸ್ವಲ್ಪ ಸುಧಾರಣೆ ಆದ ಬಳಿಕ ಅಭಿವೃದ್ಧಿ ಕೆಲಸಗಳತ್ತ ಹೆಚ್ಚು ಗಮನಹರಿಸುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸುದ್ದಿಗಾರರಿಗೆ ತಿಳಿಸಿದರು.

ರಾಜ್ಯದ 19 ಜಿಲ್ಲೆಗಳಲ್ಲಿ ಅನ್​ಲಾಕ್​ ಮಾಡಿರುವುದರಿಂದ ಬೆಂಗಳೂರಿನತ್ತ ಜನರು ಹೆಚ್ಚಿನ ಪ್ರಮಾಣದಲ್ಲಿ ಆಗಮಿಸುತ್ತಾರೆ. ಹೀಗಾಗಿ ಕೊವಿಡ್ ಟೆಸ್ಟಿಂಗ್ ಹೆಚ್ಚಳ ಮಾಡುವ ಬಗ್ಗೆ ಗಂಭೀರವಾಗಿ ಯೋಚಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಖಾಸಗಿ ಶಾಲಾ ಶುಲ್ಕದ ವಿಚಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಜತೆ ಮಾತನಾಡಿ ಕಾನೂನು ಚೌಕಟ್ಟಲ್ಲಿ ಏನೇನು ಮಾಡಬಹುದೆಂದು ಚಿಂತಿಸಿ ಕ್ರಮ ಕೈಗೊಳ್ಳುತ್ತೇವೆ. ಜೂನ್ 16ರಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕಕ್ಕೆ ಆಗಮಿಸುತ್ತಾರೆ. ಅವರಿಗೆ ವಹಿಸಿದ ಜವಾಬ್ಧಾರಿ ವಹಿಸಲು ಸಹಕಾರ ನೀಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.

ಶಿವಮೊಗ್ಗದಲ್ಲಿ ಆದಷ್ಟು ಬೇಗ ವಿಮಾನಯಾನ ಆರಂಭಿಸುವ ಅಪೇಕ್ಷೆಯಿದೆ: ಸಿಎಂ ಯಡಿಯೂರಪ್ಪ ಶಿವಮೊಗ್ಗ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ​ ಆಗುವುದರಿಂದ ಕೈಗಾರಿಕೆಗಳ  ಅಭಿವೃದ್ಧಿ ಆಗಲಿದೆ. 384 ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣದ​ ಕಾಮಗಾರಿ ನಡೆಯುತ್ತಿದೆ. ಕೈಗಾರಿಕಾ ಕ್ಷೇತ್ರ ಬೆಳೆದರೆ ಯುವಕರಿಗೆ ಉದ್ಯೋಗ ಸಿಗಲಿದೆ. ಮಧ್ಯ ಕರ್ನಾಟಕ ಭಾಗದ ಜನರಿಗೆ ಅನುಕೂಲವಾಗಲಿದೆ. 2022ರ ಜೂನ್​ ಅಂತ್ಯದಲ್ಲಿ ಕಾಮಗಾರಿ ಪೂರ್ಣಗೊಳ್ಳುವ ವಿಶ್ವಾಸವಿದೆ. ನಮಗೂ ಆದಷ್ಟು ಬೇಗ ವಿಮಾನಯಾನ ಆರಂಭಿಸಬೇಕೆಂಬ ಅಪೇಕ್ಷೆಯಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಶಿವಮೊಗ್ಗದ ಸೋಗಾನೆಯಲ್ಲಿ ವಿಮಾನ ನಿಲ್ದಾಣದ ಕಾಮಗಾರಿ ವೀಕ್ಷಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಶೀಘ್ರದಲ್ಲೇ ಹಾಸನ ಏರ್​ಪೋರ್ಟ್​ ಕಾಮಗಾರಿಯೂ ಆರಂಭವಾಗಲಿದೆ. ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ನಿಗದಿತ ಅವಧಿಗೆ ಮುಂಚಿತವಾಗಿ ಕಾಮಗಾರಿ ಮುಗಿಯಬೇಕು. ಉತ್ತಮ ದರ್ಜೆಯ ಕಾಮಗಾರಿ ಆಗಬೇಕು. ಸಿಎಂ ಯಡಿಯೂರಪ್ಪಗೆ ಸಂಸದ ಬಿ.ವೈ.ರಾಘವೇಂದ್ರ, ಸಚಿವ ಭೈರತಿ ಬಸವರಾಜ್ ಸೇರಿದಂತೆ ಅಧಿಕಾರಿಗಳು ಸಾಥ್ ನೀಡಿದರು.

ಇದನ್ನೂ ಓದಿ: Vatal Nagaraj: ‘ನಾನು ಮುಖ್ಯಮಂತ್ರಿಯಾದರೆ…? ಹೋರಾಟಗಾರ, ಮಾಜಿ ಶಾಸಕ ವಾಟಾಳ್ ನಾಗರಾಜ್ ಹೇಳಿದ್ದೇನು?

ಕೊವಿಡ್ ನಿಯಂತ್ರಿಸುವಲ್ಲಿ ಯಶಸ್ವಿಯಾದ ಉತ್ತರ ಕನ್ನಡ ಜಿಲ್ಲಾಡಳಿತ; 6 ಪಂಚಾಯತಿ ವ್ಯಾಪ್ತಿಯ ಗ್ರಾಮಗಳು ಕೊರೊನಾ ಮುಕ್ತ

(CM Yediyurappa says Will do Hassan Airport stone laying programme as soon as possible with HD Deve Gowda)