AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಕೊರೊನಾ 3ನೇ ಅಲೆ ತಡೆಗೆ ತಜ್ಞರ ಸಮಿತಿ ರಚಿಸಲು ಸಿಎಂ ಯಡಿಯೂರಪ್ಪ ತೀರ್ಮಾನ

Karnataka Covid Update: ವಿದೇಶಗಳಲ್ಲಿ ವೈದ್ಯಕೀಯ ಪದವಿ ಮುಗಿಸಿರುವ ವಿದ್ಯಾರ್ಥಿಗಳನ್ನು ಸಹ ಬಳಸಿಕೊಳ್ಳಲು ಅನುಕೂಲವಾಗುವಂತೆ ಕರ್ನಾಟಕ ಮೆಡಿಕಲ್ ಕೌನ್ಸಿಲ್​ನಲ್ಲಿ ಅವರ ನೋಂದಣಿ ಮಾಡಿಸಲಾಗುವುದು ಎಂದು ಅವರು ತಿಳಿಸಿದರು.

ಕರ್ನಾಟಕದಲ್ಲಿ ಕೊರೊನಾ 3ನೇ ಅಲೆ ತಡೆಗೆ ತಜ್ಞರ ಸಮಿತಿ ರಚಿಸಲು ಸಿಎಂ ಯಡಿಯೂರಪ್ಪ ತೀರ್ಮಾನ
ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:May 01, 2021 | 7:59 PM

Share

ಬೆಂಗಳೂರು: ಕೊರೊನಾ ಸೋಂಕಿತರಿಗೆ ಚಿಕಿತ್ಸೆಗಾಗಿ ವೈದ್ಯಕೀಯ ಮಾನವ ಸಂಪನ್ಮೂಲ ಕೊರತೆ ನೀಗಿಸಲು ಅಂತಿಮ ವರ್ಷದ ವೈದ್ಯಕೀಯ ಮತ್ತು ನರ್ಸಿಂಗ್ ವಿದ್ಯಾರ್ಥಿಗಳನ್ನು ಗ್ರೇಸ್ ಅಂಕ ನೀಡಿ ಕೊವಿಡ್ ಚಿಕಿತ್ಸೆಗೆ ಬಳಸಿಕೊಳ್ಳಲಾಗುವುದು. ಹೀಗಾಗಿ ಅಂತಿಮ ವರ್ಷದ ಪರೀಕ್ಷೆಗಳನ್ನು ಮುಂದೂಡಲಾಗಿದ್ದು ಸೂಕ್ತ ಇನ್ಸೆಂಟಿವ್ ನೀಡಲು ಕ್ರಮ ಕೈಗೊಳ್ಳಲಾಗುವುದು. ನರ್ಸಿಂಗ್, ಫಾರ್ಮಸಿ, ಫಿಸಿಯೋಥೆರಪಿ, ಆಯುಷ್, ದಂತ ವೈದ್ಯಕೀಯ ಹಾಗೂ ಹಾಸ್ಪಿಟಲ್ ಮ್ಯಾನೇಜ್ಮೆಂಟ್ ಕೋರ್ಸ್ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಕೊವಿಡ್ ಚಿಕಿತ್ಸೆಗೆ ಬಳಸಿಕೊಳ್ಳಲಾಗುವುದು. ವಿದೇಶಗಳಲ್ಲಿ ವೈದ್ಯಕೀಯ ಪದವಿ ಮುಗಿಸಿರುವ ವಿದ್ಯಾರ್ಥಿಗಳನ್ನು ಸಹ ಬಳಸಿಕೊಳ್ಳಲು ಅನುಕೂಲವಾಗುವಂತೆ ಕರ್ನಾಟಕ ಮೆಡಿಕಲ್ ಕೌನ್ಸಿಲ್​ನಲ್ಲಿ ಅವರ ನೋಂದಣಿ ಮಾಡಿಸಲಾಗುವುದು. ಕೊವಿಡ್ 3ನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ಒಂದು ತಜ್ಞರ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಜತೆ ನಡೆಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಂಕಿತರ ಚಿಕಿತ್ಸೆಗೆ ಬೆಡ್, ಆಕ್ಸಿಜನ್, ಲಸಿಕೆ ಸಂಬಂಧ ಚರ್ಚಿಸಿದರು.

ರೆಮ್​ಡೆಸಿವಿರ್ ಮತ್ತು ಆಕ್ಸಿಜನ್ ಅನಗತ್ಯವಾಗಿ ಬಳಕೆಯಾಗುತ್ತಿದ್ದು, ಇದನ್ನು ತಪ್ಪಿಸಲು ಸೂಕ್ತ ಆಡಿಟ್ ವ್ಯವಸ್ಥೆ ರಚಿಸಲಾಗುವುದು. ಕೊವಿಡ್ 3ನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ಒಂದು ತಜ್ಞರ ಸಮಿತಿಯನ್ನು ರಚಿಸಲು ತೀರ್ಮಾನ ಕೈಗೊಳ್ಳಲಾಗಿದ್ದು, ಲಸಿಕೆ ವಿತರಣೆಯ ವೇಗವನ್ನು ಹೆಚ್ಚಿಸಲಾಗುವುದು. ವರ್ಧನಗೊಳಿಸುವುದು ಎಂದು ತಿಳಿಸಿದರು.

ಆಕ್ಸಿಜನ್ ಕಾನ್ ಸಂಟ್ರೇಟರ್ ಬಳಸಿಕೊಂಡು ಹೋಟೆಲ್​ಗಳನ್ನು ಆಕ್ಸಿಜನೇಟೆಡ್ ಬೆಡ್ ಮಾದರಿಯ ಸ್ಟೆಪ್​ಡೌನ್​ ಕೊವಿಡ್ ಆಸ್ಪತ್ರೆಗಳನ್ನಾಗಿ ಪರಿವರ್ತಿಸಲಾಗುವುದು. ಕೇಂದ್ರೀಕೃತ ಆಮ್ಲಜನಕ ವ್ಯವಸ್ಥೆ ಇರುವ ಬೆಡ್​ಗಳನ್ನು ಐಸಿಯು ಬೆಡ್​ಗಳನ್ನಾಗಿ ಪರಿವರ್ತಿಸಲಾಗುವುದು ಎಂದು ಅವರು ಈ ವೇಳೆ ವಿವರಿಸಿದರು.

ಟೆಲಿ ಮಿಡಿಸಿಸ್ ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡುವ ಕುರಿತು ವಿವರಿಸಿದ ಅವರು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಅಗತ್ಯವಿಲ್ಲದ ರೋಗ ಲಕ್ಷಣರಹಿತ ಸೋಂಕಿತರು ಆಸ್ಪತ್ರೆಗಳಲ್ಲಿ ದಾಖಲಾಗುತ್ತಿದ್ದಾರೆ. ಇದನ್ನು ಕಡಿಮೆಗೊಳಿಸಲು ಟ್ರಯಾಜಿಂಗ್ ಮಾಡಿ ಅಗತ್ಯವಿದ್ದವರನ್ನು ಮಾತ್ರ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿ ಉಳಿದ ಲಕ್ಷಣರಹಿತ ಸೋಂಕಿತರನ್ನು ಮನೆಯಲ್ಲಿಯೇ ಐಸೋಲೇಷನ್ ಮಾಡಿ ಚಿಕಿತ್ಸೆ ಮುಂದುವರೆಸಲು ಖಾಸಗಿ ಆಸ್ಪತ್ರೆಗಳ ಸಹಭಾಗಿತ್ವದಲ್ಲಿ ಟೆಲಿ ಮೆಡಿಸಿನ್ ಸೌಲಭ್ಯವನ್ನು ಬಲಪಡಿಸಲಾಗುವುದು ಎಂದರು.

ವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಸಾಮಾನ್ಯ ಬೆಡ್​ಗಳನ್ನು ಆಕ್ಸಿಜನೇಟೆಡ್ ಬೆಡ್​ಗಳಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳಲಾಗುವುದು. ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಆಕ್ಸಿಜನ್ ಜನರೇಷನ್ ಪ್ಲಾಂಟ್ ಅಳವಡಿಸಲು ಸರ್ಕಾರದಿಂದ ಧನ ಸಹಾಯ ನೀಡಲಾಗುವುದು. ಕಡಿಮೆ ಕಾರ್ಯಭಾರವಿರುವ ವೈದ್ಯಕೀಯ ಸಿಬ್ಬಂದಿಯನ್ನು ಗುರುತಿಸಿ ಅವರುಗಳನ್ನು ಪರಿಪೂರ್ಣವಾಗಿ ಉಪಯೋಗಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.

ಇದನ್ನೂ ಓದಿ: Covid Helpline Numbers: ಆಕ್ಸಿಜನ್​, ರೆಮ್​ಡೆಸಿವರ್​ ಬೇಕಾದಲ್ಲಿ ಈ ಸಂಖ್ಯೆಗಳನ್ನು ಸಂಪರ್ಕಿಸಿ

ಕೇಂದ್ರ ಸರ್ಕಾರ ನೀಡಿರುವ ಲಸಿಕೆಯನ್ನು 45 ವರ್ಷ ಕಡಿಮೆ ವಯಸ್ಸಿನವರಿಗೆ ಕೊಡುವಂತಿಲ್ಲ: ರಾಜ್ಯಗಳಿಗೆ ಪತ್ರ

CM Yediyurappa says will setup a expert committee to stop Covid 3rd wave in Karnataka

Published On - 7:15 pm, Sat, 1 May 21

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ