AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ವರದ ನಡುವೆಯೂ ಸಿಎಂ ಬಿ.ಎಸ್.ಯಡಿಯೂರಪ್ಪ ಚುನಾವಣಾ ಪ್ರಚಾರ

ಮಹಾರಾಷ್ಟ್ರ ಮಾದರಿಯಲ್ಲಿ ಕರ್ಫ್ಯೂ ಜಾರಿ ವಿಚಾರದ ಬಗ್ಗೆ ಪ್ರಸ್ತಾಪಿಸಿದ ಅವರು, ಮಹಾರಾಷ್ಟ್ರಕ್ಕೂ ನಮಗೂ ಸಂಬಂಧವಿಲ್ಲ. ಬೆಂಗಳೂರಿನಲ್ಲಿ 10 ಹೊಸ ಕೊವಿಡ್ ಸೆಂಟರ್‌ ಸ್ಥಾಪಿಸಲು ನಿರ್ಧರಿಸಲಾಗಿದೆ. ಕೊರೊನಾ ಸೋಂಕಿತರಿಗಾಗಿ 1,500 ಬೆಡ್‌ಗಳ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಜ್ವರದ ನಡುವೆಯೂ ಸಿಎಂ ಬಿ.ಎಸ್.ಯಡಿಯೂರಪ್ಪ ಚುನಾವಣಾ ಪ್ರಚಾರ
ಕೊರೊನಾ ಲಸಿಕೆ ಪಡೆದ ಸಿಎಂ ಬಿ.ಎಸ್.ಯಡಿಯೂರಪ್ಪ (ಸಂಗ್ರಹ ಚಿತ್ರ)
Ghanashyam D M | ಡಿ.ಎಂ.ಘನಶ್ಯಾಮ
|

Updated on:Apr 14, 2021 | 6:24 PM

Share

ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜ್ವರದಿಂದ ಬಳಲುತ್ತಿದ್ದರೂ ಪ್ರಚಾರಕ್ಕೆ ತೆರಳಿದ ಘಟನೆ ನಡೆದಿದೆ. ಸಿಎಂ ಯಡಿಯೂರಪ್ಪ ಅವರ ದೇಹದ ಉಷ್ಣಾಂಶ 99 ಫ್ಯಾರನ್​ಹೀಟ್​ಗಿಂತ ಹೆಚ್ಚಾಗಿತ್ತು. ನಂತರ ಈ ವಿಷಯವನ್ನು ಆರೋಗ್ಯ ಸಿಬ್ಬಂದಿ ಮುಖ್ಯಮಂತ್ರಿಯವರ ಗಮನಕ್ಕೆ ತಂದಿದ್ದಾರೆ. ಖಾಸಗಿ ಹೋಟೆಲ್ ಮುಂಭಾಗದಲ್ಲಿ ಥರ್ಮಲ್ ಸ್ಕ್ರೀನಿಂಗ್ ವೇಳೆ ಮುಖ್ಯಮಂತ್ರಿಗೆ ಜ್ವರ ಇರುವುದು ಪತ್ತೆಯಾಗಿತ್ತು.

ಬೆಳಗಾವಿ ತಾಲ್ಲೂಕು ಬಾಳೆಕುಂದ್ರಿಯಲ್ಲಿ ಕೊರೊನಾ ನೈಟ್ ಕರ್ಫ್ಯೂ ಜಾರಿ ಕುರಿತು ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ನೈಟ್ ಕರ್ಫ್ಯೂ ರಿಸಲ್ಟ್ ಬರಲು ನಾಲ್ಕೈದು ದಿನ ಬೇಕು. ಮಹಾರಾಷ್ಟ್ರ ಮಾದರಿಯಲ್ಲಿ ಕರ್ಫ್ಯೂ ಜಾರಿ ವಿಚಾರದ ಬಗ್ಗೆ ಪ್ರಸ್ತಾಪಿಸಿದ ಅವರು, ಮಹಾರಾಷ್ಟ್ರಕ್ಕೂ ನಮಗೂ ಸಂಬಂಧವಿಲ್ಲ. ಬೆಂಗಳೂರಿನಲ್ಲಿ 10 ಹೊಸ ಕೊವಿಡ್ ಸೆಂಟರ್‌ ಸ್ಥಾಪಿಸಲು ನಿರ್ಧರಿಸಲಾಗಿದೆ. ಕೊರೊನಾ ಸೋಂಕಿತರಿಗಾಗಿ 1,500 ಬೆಡ್‌ಗಳ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಬೆಂಗಳೂರನ್ನು ಕೇಂದ್ರೀಕರಿಸಿ 1,500 ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ. ಕೊವಿಡ್ ಸೋಂಕು ನಿಯಂತ್ರಣಕ್ಕೆ ಜನರ ಸಹಕಾರ ಅಗತ್ಯ. ಕೊವಿಡ್ ಟಫ್ ರೂಲ್ಸ್‌ ಬಗ್ಗೆ ಸರ್ವಪಕ್ಷ ಸಭೆಯ ಬಳಿಕ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು. ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಯಾವ ಪುರುಷಾರ್ಥಕ್ಕೆ ಈ ಸಭೆ ಎಂದು ಪ್ರಶ್ನಿಸಿರುವ ಕುರಿತು ಪ್ರತಿಕ್ರಿಯಿಸಿದ ಯಡಿಯೂರಪ್ಪ, ಸಭೆಯಲ್ಲಿ ಎಚ್.ಡಿ ಕುಮಾರಸ್ವಾಮಿ ಏನು ಹೇಳುತ್ತಾರೆ ನೋಡೋಣ ಎಂದರು. ರಾಜ್ಯದಲ್ಲಿ ಕೊವಿಡ್ ಲಸಿಕೆಗೆ ಕೊರತೆ ಇಲ್ಲ. ಬೇಕಾದಷ್ಟು ಕೊವಿಡ್ ಲಸಿಕೆ ಇದೆ ಎಂದು ಹೇಳಿದರು.

ಬೆಳಗಾವಿ ಜಿಲ್ಲೆಯ ಅರಭಾವಿ ವಿಧಾನಸಭಾ ಕ್ಷೇತ್ರದ ಮೂಡಲಗಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಪರ ಸಿಎಂ BSY ಪ್ರಚಾರ ನಡೆಸಿದರು. ಈ ವೇಳೆ ಸಚಿವರಾದ ಜಗದೀಶ್ ಶೆಟ್ಟರ್, ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ಸಂಸದರಾದ ಎ.ನಾರಾಯಣಸ್ವಾಮಿ, ಈರಣ್ಣ ಕಡಾಡಿ, ಕೆಎಂಎಫ್​ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಉಪಸ್ಥಿತರಿದ್ದರು.

(CM Yediyurappa Suffering from Fever Still Participates in Campaign in Belagavi)

ಇದನ್ನೂ ಓದಿ: ಸಿಎಮ್​ ಬಿಎಸ್ ಯಡಿಯೂರಪ್ಪಗೆ ಎಚ್​ಕೆ ಪಾಟೀಲ್​ ಪತ್ರ: ಕೋವಿಡ್​ ರೋಗಿಗಳಿಗೆ ಎಲ್ಲ ಸೇವೆ, ಔಷಧಿ, ಹಾಸಿಗೆ ಸಿಗುವಂತೆ ಮಾಡಿ

ಇದನ್ನೂ ಓದಿ: ಜನರ ಜೀವ, ಜೀವನಕ್ಕಿಂತ ಇವರಿಗೆ ಉಪಚುನಾವಣೆಯೇ ಮುಖ್ಯ: ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದ ಎಚ್​.ಡಿ.ಕುಮಾರಸ್ವಾಮಿ

Published On - 6:16 pm, Wed, 14 April 21

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?