ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧಟತನ ತೋರುತ್ತಿದ್ದಾರೆ.. ಗಡಿ ಸೌಹಾರ್ದತೆ ಕದಡುತ್ತಿದ್ದಾರೆ: ಸಿಎಂ ಯಡಿಯೂರಪ್ಪ ಆಕ್ರೋಶ
ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆ ಮಾತುಗಳು ದೇಶದ ಏಕತೆಗೆ ಮಾರಕವಾಗಿದೆ. ಇದನ್ನು ನಾನು ಖಂಡಿಸುತ್ತೇನೆ. ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ. ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರು: ಕರ್ನಾಟಕದಲ್ಲಿರುವ ಮರಾಠಿಗರ ಪ್ರದೇಶವನ್ನು ಮತ್ತೆ ಮಹಾರಾಷ್ಟ್ರಕ್ಕೆ ಸೇರಿಸಲು ಬದ್ಧ ಎಂದು ಹೇಳಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಸಿಎಂ ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟ್ವೀಟ್ ಮಾಡಿರುವ ಸಿಎಂ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡುವ ಮೂಲಕ ಉದ್ಧಟತನ ಪ್ರದರ್ಶನ ಮಾಡಿದ್ದಾರೆ. ಇದು ಭಾರತೀಯ ಒಕ್ಕೂಟ ತತ್ವಕ್ಕೆ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರಿಗೂ ಗೊತ್ತಿರುವ ಸತ್ಯ ಎಂದಿದ್ದಾರೆ.
ಹೀಗಿರುವಾಗ ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆ ಮಾತುಗಳು ದೇಶದ ಏಕತೆಗೆ ಮಾರಕವಾಗಿದೆ. ಇದನ್ನು ನಾನು ಖಂಡಿಸುತ್ತೇನೆ. ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ. ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ. ಈ ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಆಗುತ್ತಿರುವುದು ನೋವಿನ ಸಂಗತಿ. ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಈ ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಆಗುತ್ತಿರುವುದು ನೋವಿನ ಸಂಗತಿ. ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ' : ಮುಖ್ಯಮಂತ್ರಿ @BSYBJP
— CM of Karnataka (@CMofKarnataka) January 18, 2021
ಶಿವಸೇನೆಯವರು ಕನ್ನಡಿಗರಿಗೆ ಚಿರಋಣಿ ಆಗಿರಬೇಕು: ಕರವೇ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡ
Published On - 11:52 am, Mon, 18 January 21