ಸಿಎಂ ಕಾರ್ಯದರ್ಶಿಯ ಪಿಎ ಎಂದು ಮಹಿಳಾ ಅಧಿಕಾರಿಗಳ ಮಾಹಿತಿ ಕಲೆ ಹಾಕುತ್ತಿದ್ದ ವ್ಯಕ್ತಿ ಅರೆಸ್ಟ್​​

ಮುಖ್ಯಮಂತ್ರಿ ಕಾರ್ಯದರ್ಶಿಯ ಪಿಎ ಎಂದು ಹೇಳಿಕೊಂಡು ಸರ್ಕಾರಿ ಮಹಿಳಾ ಅಧಿಕಾರಿಗಳ ಮಾಹಿತಿ ಕಲೆ ಹಾಕುತ್ತಿದ್ದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಕ್ರಂ ಗೋಪಾಲಸ್ವಾಮಿ ಬಂಧಿತ ಆರೋಪಿ.

ಸಿಎಂ ಕಾರ್ಯದರ್ಶಿಯ ಪಿಎ ಎಂದು ಮಹಿಳಾ ಅಧಿಕಾರಿಗಳ ಮಾಹಿತಿ ಕಲೆ ಹಾಕುತ್ತಿದ್ದ ವ್ಯಕ್ತಿ ಅರೆಸ್ಟ್​​
ವಿಕ್ರಂ ಗೋಪಾಲಸ್ವಾಮಿ ಬಂಧಿತ ಆರೋಪಿ
Updated By: ವಿವೇಕ ಬಿರಾದಾರ

Updated on: Jan 17, 2024 | 7:35 AM

ಬೆಂಗಳೂರು, ಜನವರಿ 17: ಮುಖ್ಯಮಂತ್ರಿ (Chief Minister) ಕಾರ್ಯದರ್ಶಿಯ ಪಿಎ ಎಂದು ಹೇಳಿಕೊಂಡು ಸರ್ಕಾರಿ ಮಹಿಳಾ ಅಧಿಕಾರಿಗಳ (Government Employees) ಮಾಹಿತಿ ಕಲೆ ಹಾಕುತ್ತಿದ್ದ ವ್ಯಕ್ತಿಯನ್ನು ವಿಧಾನಸೌಧ ಠಾಣೆ (Vidhana Soudha Police Station) ಪೊಲೀಸರು ಬಂಧಿಸಿದ್ದಾರೆ. ವಿಕ್ರಂ ಗೋಪಾಲಸ್ವಾಮಿ ಬಂಧಿತ ಆರೋಪಿ. ಆರೋಪಿ ಮುಖ್ಯಮಂತ್ರಿ ಕಾರ್ಯದರ್ಶಿ ಪಿಎ, ಕಂದಾಯ ಸಚಿವರ ಪಿಎ ಎಂದು ಹೇಳಿಕೊಂಡು ತಿರುಗಾಡುತ್ತಿದ್ದನು. ಈತ ಡಿಜಿ ಕಚೇರಿ, ಕಮಿಷನರ್ ಕಚೇರಿಯಿಂದ ಕರೆ ಮಾಡ್ತಿದ್ದೇನೆಂದು ಹೇಳಿ ಕಂದಾಯ ಇಲಾಖೆಯ ಮಹಿಳಾ ಅಧಿಕಾರಿಗಳ ಬಗ್ಗೆ ವಿವರ ಕಲೆ ಹಾಕುತ್ತಿದ್ದನು.

ಈತನ ನಿಜ ಬಣ್ಣ ತಿಳಿದು, ಓರ್ವ ಅಧಿಕಾರಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ದಾಖಲಾಗುತ್ತಿದ್ದಂತೆ ಪೊಲೀಸರು ವಿಕ್ರಂ ಗೋಪಾಲಸ್ವಾಮಿಯನ್ನು ಬಂಧಿಸಿದರು. ವಿಚಾರಣೆ ವೇಳೆ ವಿಕ್ರಂ ಗೋಪಾಲಸ್ವಾಮಿಯು ನಿವೃತ್ತ ಅಧಿಕಾರಿಯೊಬ್ಬರ ಮಗ ಎಂಬುದು ತಿಳಿದುಬಂದಿದೆ.

ಇದನ್ನೂ ಓದಿ: ಮುಖ್ಯಮಂತ್ರಿ ಆಪ್ತ ಕಾರ್ಯದರ್ಶಿ ಹೆಸರಿನಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿ: ದೂರು ದಾಖಲು

ವಿಕ್ರಂ ಗೋಪಾಲಸ್ವಾಮಿ ವಿಧಾನಸೌಧ, ಎಂಎಸ್ ಬಿಲ್ಡಿಂಗ್​ನಲ್ಲಿ ಓಡಾಡುತ್ತಿದ್ದನು. ಈತ ಸರ್ಕಾರಿ ಅಧಿಕಾರಿಗಳ ವಿವರ ತಿಳಿದುಕೊಂಡು ಬ್ಲ್ಯಾಕ್​ಮೇಲ್ ಮಾಡುತ್ತಿದ್ದ ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ ವಿಧಾನಸೌಧ ಪೊಲೀಸರು ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ