ಸಾಮಾನ್ಯ ಜನರಂತೆಯೇ ಜನಪ್ರತಿನಿಧಿಗಳಿಂದಲೂ ಸಾಲ ವಸೂಲಿ ಮಾಡಲಾಗುವುದು: ಸಚಿವ ಸೋಮಶೇಖರ್

ಕರ್ನಾಟಕದಲ್ಲಿ ಇನ್ನಷ್ಟು ರೈತರಿಗೆ ಸಾಲ ನೀಡಲು ಕ್ರಮ ಕೈಗೊಳ್ಳಲಾಗುವುದು. ರೈತರಿಗೆ ಹೊಸದಾಗಿ 20,810 ಕೋಟಿ ಸಾಲ ನೀಡುವ ಚಿಂತನೆಯಿದೆ ಎಂದು ಸಹ ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

ಸಾಮಾನ್ಯ ಜನರಂತೆಯೇ ಜನಪ್ರತಿನಿಧಿಗಳಿಂದಲೂ ಸಾಲ ವಸೂಲಿ ಮಾಡಲಾಗುವುದು: ಸಚಿವ ಸೋಮಶೇಖರ್
ಎಸ್ ಟಿ ಸೋಮಶೇಖರ್
Follow us
TV9 Web
| Updated By: guruganesh bhat

Updated on: Sep 25, 2021 | 4:28 PM

ದೆಹಲಿ: ಸಹಕಾರಿ ಬ್ಯಾಂಕುಗಳಲ್ಲಿ ಜನಪ್ರತಿನಿಧಿಗಳ ಸಾಲ ಬಾಕಿ ಇಟ್ಟುಕೊಂಡಿರುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಕೆಲವರು ಬಡ್ಡಿ ಮಾತ್ರ ಕಟ್ಟುತ್ತಿದ್ದಾರೆ. ಇನ್ನು ಕೆಲವರು ಬಡ್ಡಿ, ಅಸಲು ಎರಡು ಕಟ್ಟಿಲ್ಲ. ಅಂತವರಿಗೆ ನೊಟೀಸ್ ಜಾರಿ ಮಾಡಲಾಗುವುದು. ಸಾಮಾನ್ಯ ಜನರಿಂದ ಹೇಗೆ ಬಡ್ಡಿ ವಸೂಲು ಮಾಡುತ್ತಾರೋ ಅದೇ ರೀತಿ ಜನಪ್ರತಿನಿಧಿಗಳಿಂದಲೂ ಸಾಲ ವಸೂಲು ಮಾಡಲು ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ದೆಹಲಿಯಲ್ಲಿ ಸಹಕಾರ ಸಚಿವ ಎಸ್‌. ಟಿ ಸೋಮಶೇಖರ್ ಸುದ್ದಿಗೋಷ್ಠಿ ನಡೆಸಿ ತಿಳಿಸಿದರು.

ಸಹಕಾರ ಸಮೃದ್ಧ ಕಾರ್ಯಕ್ರಮದಲ್ಲಿ ಭಾಗಿಯಾಗಲು ಕರ್ನಾಟಕದಿಂದ 200 ಜನ ಆಗಮಿಸಿದ್ದೇವೆ. ಕಾರ್ಯಕ್ರಮದಲ್ಲಿ ಸಹಕಾರ ವ್ಯವಸ್ಥೆಯಲ್ಲಿನ ಸಮಸ್ಯೆಗಳನ್ನು ಚರ್ಚೆ ಮಾಡಿದ್ದೇವೆ. ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಕೂಡಾ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಹೇಳಿದ್ದಾರೆ. ಎಲ್ಲ ಕೊ ಆಪರೇಟಿವ್ ಸಂಸ್ಥೆ ಒಂದೇ ನೆಲೆಯಲ್ಲಿ ತರುವ ಉದ್ದೇಶದ ಬಗ್ಗೆ ಚರ್ಚೆ ಮಾಡಲಾಗಿದೆ. ಇದರಿಂದ ಸಮಗ್ರ ಮಾಹಿತಿ ಎಲ್ಲ ಜಿಲ್ಲೆಗಳಿಂದ ಒಂದು ನೆಲೆಯಲ್ಲಿ ಸಿಗಲಿದೆ. ಕರ್ನಾಟಕದಲ್ಲಿ ಇನ್ನಷ್ಟು ರೈತರಿಗೆ ಸಾಲ ನೀಡಲು ಕ್ರಮ ಕೈಗೊಳ್ಳಲಾಗುವುದು. ರೈತರಿಗೆ ಹೊಸದಾಗಿ 20,810 ಕೋಟಿ ಸಾಲ ನೀಡುವ ಚಿಂತನೆಯಿದೆ ಎಂದು ಸಹ ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

ನಮ್ಮ ಶಾಸಕರೇ ಡಿಸಿಸಿ ಬ್ಯಾಂಕ್‌ಗಳಲ್ಲಿ 245 ಕೋಟಿ ಸಾಲ ಪಡೆದು ಒಂದೇ ಒಂದು ರೂ ಕಟ್ಟಿಲ್ಲ! ನಮ್ಮ ಶಾಸಕರೇ ಡಿಸಿಸಿ ಬ್ಯಾಂಕ್‌ಗಳಲ್ಲಿ 245 ಕೋಟಿ ಸಾಲ ಪಡೆದು ಒಂದೇ ಒಂದು ರೂಪಾಯಿಯೂ ಕಟ್ಟಿಲ್ಲ ಎಂದು ವಿಧಾನ ಪರಿಷತ್ ಕಲಾಪದ ವೇಳೆ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಅಳಲು ತೋಡಿಕೊಂಡಿದ್ದಾರೆ.

ಸಹಕಾರ ಇಲಾಖೆ ವ್ಯಾಪ್ತಿಯ ಸಕ್ಕರೆ ಕಾರ್ಖಾನೆಗಳನ್ನ ಉಳಿಸಿ. ಈ ಬಗ್ಗೆ ಆದಷ್ಟು ಬೇಗ ನಿರ್ಣಯ ಮಾಡುವಂತೆ ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಒತ್ತಾಯ ಮಾಡಿದರು. ಎಸ್.ಆರ್.ಪಾಟೀಲ್ ಪ್ರಸ್ತಾಪಕ್ಕೆ ಸೋಮಶೇಖರ್ ಸ್ಪಷ್ಟನೆ ನೀಡುತ್ತಾ, ರಾಜ್ಯ ಸಹಕಾರ ಇಲಾಖೆ ಸದ್ಯ ಬಹಳ ಕಷ್ಟದಲ್ಲಿದೆ. ಸಹಕಾರಿ ಬ್ಯಾಂಕ್‌ಗಳಲ್ಲಿ ಪಡೆದ ಸಾಲ ಮರುಪಾವತಿಸುತ್ತಿಲ್ಲ. ಸಕ್ಕರೆ ಕಾರ್ಖಾನೆ ಮಾಲೀಕರು ಸಾಲ ಮರುಪಾವತಿ ಮಾಡ್ತಿಲ್ಲ. ಯಾರು ಪಾವತಿ ಮಾಡುತ್ತಿಲ್ಲ ಎಂದು ಹೇಳಲು ಹೋಗಲ್ಲ ಎಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ತಮ್ಮ ಅಸಹಾಯಕತೆ ವ್ಯಕ್ತಪಡಿಸಿದರು.

ಇದನ್ನೂ ಓದಿ: 

ನಮ್ಮ ಶಾಸಕರೇ ಡಿಸಿಸಿ ಬ್ಯಾಂಕ್‌ಗಳಲ್ಲಿ 245 ಕೋಟಿ ಸಾಲ ಪಡೆದು ಒಂದೇ ಒಂದು ರೂ ಕಟ್ಟಿಲ್ಲ! ಸಹಕಾರ ಸಚಿವ ಸೋಮಶೇಖರ್ ಅಳಲು

(Co Operative Minister ST Somashekhar loan will take from people representative like common people)

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು