ಕರಾವಳಿ ಕರ್ನಾಟಕ, ಬೆಂಗಳೂರಿನಲ್ಲಿ ಭಾನುವಾರದವರೆಗೆ ಸಾಧಾರಣ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Karnataka Rains; ಬೆಂಗಲೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ಚಿನಾಟಕದ ಜಿಲ್ಲೆಗಳು ಹಾಗೂ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ಕರ್ನಾಟಕದ ಇತರ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಕರ್ನಾಟಕ, ಬೆಂಗಳೂರಿನಲ್ಲಿ ಭಾನುವಾರದವರೆಗೆ ಸಾಧಾರಣ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಸಾಂದರ್ಭಿಕ ಚಿತ್ರ
Follow us
| Updated By: ಗಣಪತಿ ಶರ್ಮ

Updated on:Aug 22, 2023 | 9:24 PM

ಬೆಂಗಳೂರು, ಆಗಸ್ಟ್ 22: ಕರಾವಳಿ ಕರ್ನಾಟಕದಲ್ಲಿ (Coastal Karnataka) ಭಾನುವಾರದವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿಯ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಅಲ್ಲಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಂಗಳವಾರ ತಿಳಿಸಿದೆ. ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಆಗಸ್ಟ್ 25 ಮತ್ತು 28 ರ ನಡುವೆ ಒಣ ಹವೆ ಇರಲಿದೆ. ಆದರೆ, ಗುರುವಾರ ಬೆಳಿಗ್ಗೆ ತನಕ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಲೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಸಂಸ್ಥೆ ಹೇಳಿದೆ.

ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ಕರ್ನಾಟಕದ ಇತರ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದ ಹಲವೆಡೆಗಳಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್​ಎನ್​ಡಿಎಂಸಿ) ತಿಳಿಸಿದೆ.

ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ತೀರಾ ಕಡಿಮೆ ಇದೆ. ಇಂಥ ಸಂದರ್ಭದಲ್ಲೇ ಕಾವೇರಿ ನದಿಯಿಂದ ತಮಿಳುನಾಡಿಗೆ ನೀತು ಬಿಡಬೇಕಾದ ಅನಿವಾರ್ಯತೆಯೂ ಎದುರಾಗಿದೆ. ಇದೀಗ, ಮುಂದಿನ ದಿನಗಳಲ್ಲಿ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿರುವುದು ತುಸು ನಿರಾಳತೆ ಒದಗಿಸಿದೆ.

ಇದನ್ನೂ ಓದಿ: ಕರ್ನಾಟಕದ ಬಹುತೇಕ ಜಲಾಶಯಗಳಲ್ಲಿ ನೀರಿನ ಸಂಗ್ರಹದಲ್ಲಿ ಭಾರೀ ಕುಸಿತ; ಯಾವ ಜಲಾಶಯದಲ್ಲಿ ಎಷ್ಟಿದೆ ನೀರು? ಇಲ್ಲಿದೆ ವಿವರ

ಈ ವರ್ಷ ಆಗಸ್ಟ್ ತಿಂಗಳಲ್ಲಿ ಬೆಂಗಳೂರಿನಲ್ಲಿ ಶೇ 40 ಕ್ಕಿಂತ ಹೆಚ್ಚು ಮಳೆಯ ಕೊರತೆ ವರದಿಯಾಗಿದೆ. ಈ ವರ್ಷ ರಾಜ್ಯದಾದ್ಯಂತ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಬೆಂಗಳೂರಿಗೆ ನೀರು ಪೂರೈಸುವ ಪ್ರಮುಖ ನದಿಯಾಗಿರುವ ಕಾವೇರಿ ನದಿಯ ಜಲಾನಯನ ಪ್ರದೇಶಗಳಲ್ಲೂ ಈ ವರ್ಷ ಕಡಿಮೆ ಮಳೆಯಾಗಿರುವುದು ಸರ್ಕಾರವನ್ನು, ಜನಸಾಮಾನ್ಯರನ್ನು ಚಿಂತೆಗೀಡು ಮಾಡಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:23 pm, Tue, 22 August 23

ತಾಜಾ ಸುದ್ದಿ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?