
ಮಂಗಳೂರು, ಏ. 07: ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಮುಂದಿನ ಮೂರು ದಿನಗಳ ಕಾಲ ಹವಾಮಾನದಲ್ಲಿ ಭಾರಿ ಏರುಪೇರಾಗಲಿದ್ದು, ತೀವ್ರವಾದ ಬಿಸಿ ಗಾಳಿ ಮತ್ತು ಆರ್ದ್ರತೆ (Humidity) ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಭಾಗಕ್ಕೆ ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಲಾಗಿದೆ.
ಏಪ್ರಿಲ್ 9 ರಿಂದ ಏಪ್ರಿಲ್ 11 ರವರೆಗೆ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗುವ ಸಾಧ್ಯತೆ ಇದ್ದು, ಆರ್ದ್ರತೆಯ ಕಾರಣದಿಂದಾಗಿ ಸಾರ್ವಜನಿಕರಿಗೆ ಹೆಚ್ಚಿನ ಸೆಖೆಯ ಅನುಭವವಾಗಲಿದೆ. ಹವಾಮಾನ ಇಲಾಖೆ ಮತ್ತು ಆರೋಗ್ಯ ಇಲಾಖೆಯು ಸಾರ್ವಜನಿಕರಿಗೆ ಕೆಲವು ಮುನ್ನೆಚ್ಚರಿಕೆಗಳನ್ನು ವಹಿಸಲು ಕೋರಿದೆ.
ಇದನ್ನೂ ಓದಿ: ಮಹಿಳೆಯ ಈ ಗುಣಗಳು ಕುಟುಂಬದ ಬಹುದೊಡ್ಡ ಶಕ್ತಿ ಎಂದಿದ್ದಾರೆ ಚಾಣಕ್ಯ
ಬಾಯಾರಿಕೆ ಇಲ್ಲದಿದ್ದರೂ ನಿಯಮಿತವಾಗಿ ನೀರು ಕುಡಿಯುತ್ತಿರಿ. ಎಳನೀರು, ಮಜ್ಜಿಗೆಯಂತಹ ಪಾನೀಯಗಳನ್ನು ಸೇವಿಸಿ ಎಂದು ಹೇಳಲಾಗಿದೆ.ಮಧ್ಯಾಹ್ನ 12 ರಿಂದ ಸಂಜೆ 4 ಗಂಟೆಯವರೆಗೆ ನೇರ ಬಿಸಿಲಿಗೆ ಒಡ್ಡಿಕೊಳ್ಳುವುದನ್ನು ತಪ್ಪಿಸಿ. ತಿಳಿ ಬಣ್ಣದ, ಹತ್ತಿ ಬಟ್ಟೆಗಳನ್ನು ಧರಿಸಲು ಆದ್ಯತೆ ನೀಡಿ. ಹೊರಹೋಗುವಾಗ ಛತ್ರಿ ಅಥವಾ ಟೋಪಿ ಬಳಸಲು ಸಲಹೆ ನೀಡಿದೆ. ಬಿಸಿಲಿನ ಪ್ರಖರತೆ ಮಕ್ಕಳು ಮತ್ತು ವಯೋವೃದ್ಧರ ಮೇಲೆ ಹೆಚ್ಚು ಪರಿಣಾಮ ಬೀರಲಿದ್ದು, ಅವರ ಆರೋಗ್ಯದ ಕಡೆ ಗಮನಹರಿಸಿ ಎಂದು ಇಲಾಖೆ ಎಚ್ಚರಿಕೆ ನೀಡಿದೆ.
🚨ಬಿಸಿ ಗಾಳಿ & ಆರ್ದ್ರತೆ ಎಚ್ಚರಿಕೆ🚨#Hot and #Humid #Warning@dcudupi @DCDKOfficial @dcuttarakannada #KSNDMC #Heatwave @KarnatakaVarthe #Premonsoon pic.twitter.com/x4QrTv0Noh
— Karnataka State Natural Disaster Monitoring Centre (@KarnatakaSNDMC) April 7, 2026
ಏಪ್ರಿಲ್ 9 ರಿಂದ ಏಪ್ರಿಲ್ 11 ರವರೆಗೆ ಕರ್ನಾಟಕದ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 9 ರಿಂದ 11 ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಾಮರಾಜನಗರ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಏಪ್ರಿಲ್ 11 ರಂದು ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
#thunderstorm #Warning:
Thunderstorm with gusty wind (30-40 kmph) likely to occur at one or two places on 11th April 2026 over North Interior Karnataka and 09th to 11th April 2026 over South Interior Karnataka. Thunderstorm and lightning likely to occur at one or two places on— Karnataka State Natural Disaster Monitoring Centre (@KarnatakaSNDMC) April 7, 2026
ಈ ಸಮಯದಲ್ಲಿ ಗುಡುಗಿನೊಂದಿಗೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಏಪ್ರಿಲ್ 11 ಮತ್ತು 12 ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಆಕಾಶವು ಭಾಗಶಃ ಮೋಡದಿಂದ ಕೂಡಿದ್ದು, ಸಂಜೆ ಅಥವಾ ರಾತ್ರಿಯ ಸಮಯದಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನವು 36°C ಮತ್ತು ಕನಿಷ್ಠ ತಾಪಮಾನವು 22°C ಆಸುಪಾಸಿನಲ್ಲಿರಲಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ