Karnataka Weather: ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಶೀತಗಾಳಿ, ಮತ್ತಷ್ಟು ಹೆಚ್ಚಲಿದೆ ಚಳಿ

ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಶೀತಗಾಳಿ ಬೀಸುತ್ತಿದ್ದು, ಮುಂದಿನ ದಿನಗಳಲ್ಲಿ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಒಣಹವೆ ಮುಂದುವರೆದಿದೆ, ವಿಜಯಪುರದಲ್ಲಿ 10.9 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Karnataka Weather: ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಶೀತಗಾಳಿ, ಮತ್ತಷ್ಟು ಹೆಚ್ಚಲಿದೆ ಚಳಿ
ಚಳಿ
Image Credit source: Daijiworld

Updated on: Dec 27, 2023 | 7:34 AM

ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಶೀತಗಾಳಿ ಬೀಸುತ್ತಿದ್ದು, ಮುಂದಿನ ದಿನಗಳಲ್ಲಿ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಒಣಹವೆ ಮುಂದುವರೆದಿದೆ, ವಿಜಯಪುರದಲ್ಲಿ 10.9 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಅಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಬೆಳಗಿನ ಜಾವ ಮಂಜು ಮುಸುಕಿರಲಿದೆ. ಎಚ್​ಎಎಲ್​ನಲ್ಲಿ 27.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 28.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಜನವರಿ 1 ಹಾಗೂ 2 ರಂದು ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮತ್ತಷ್ಟು ಓದಿ: Karnataka Weather: ಡಿಸೆಂಬರ್ 31 ರಿಂದ 2 ದಿನಗಳ ಕಾಲ ಕರ್ನಾಟಕದಾದ್ಯಂತ ಮಳೆ
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us