ಹೊಸ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್‌ನಲ್ಲಿ ಕಾಲೇಜು ಸ್ಟಾರ್ಟ್

|

Updated on: Apr 30, 2020 | 6:37 AM

ಬೆಂಗಳೂರು: ಕೊರೊನಾ ವೈರಸ್ ಮಧ್ಯೆ ಕಳೆದ ತಿಂಗಳಿನಿಂದ ದೇಶಾದ್ಯಂತ ಶಾಲೆಗಳು ಮತ್ತು ಕಾಲೇಜುಗಳನ್ನು ಮುಚ್ಚಲಾಗಿತ್ತು. ಸದ್ಯ ಯುಜಿಸಿಯಿಂದ ಹೊಸ ಶೈಕ್ಷಣಿಕ ಕ್ಯಾಲೆಂಡರ್ ಬಿಡುಗಡೆ ಮಾಡಲಾಗಿದೆ. ಹೊಸ ವಿದ್ಯಾರ್ಥಿಗಳಿಗೆ ಕಾಲೇಜುಗಳು ಸೆಪ್ಟೆಂಬರ್‌ನಲ್ಲಿ ಆರಂಭವಾಗಲಿದೆ ಮತ್ತು ಈಗಾಗಲೇ ದಾಖಲಾಗಿರುವವರಿಗೆ ಆಗಸ್ಟ್ ತಿಂಗಳಲ್ಲಿ ಕಾಲೇಜುಗಳು ಪ್ರಾರಂಭವಾಗಲಿದೆ. ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪ್ರಕ್ರಿಯೆಯು ಆಗಸ್ಟ್‌ನಿಂದ ಪ್ರಾರಂಭವಾಗಲಿದೆ. ಕೊರೊನಾ ಸೋಂಕಿನ ಭೀತಿ ಮತ್ತು ನಂತರದ ರಾಷ್ಟ್ರವ್ಯಾಪಿ ಲಾಕ್‌ಡೌನ್ ದೃಷ್ಟಿಯಿಂದ ವಿಶ್ವವಿದ್ಯಾಲಯಗಳ ಪರೀಕ್ಷೆಗಳು ಮತ್ತು ಶೈಕ್ಷಣಿಕ ಕ್ಯಾಲೆಂಡರ್‌ನ ಮಾರ್ಗಸೂಚಿಗಳನ್ನು ವಿವರಿಸಿದ ಆಯೋಗವು ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು […]

ಹೊಸ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್‌ನಲ್ಲಿ ಕಾಲೇಜು ಸ್ಟಾರ್ಟ್
Follow us on

ಬೆಂಗಳೂರು: ಕೊರೊನಾ ವೈರಸ್ ಮಧ್ಯೆ ಕಳೆದ ತಿಂಗಳಿನಿಂದ ದೇಶಾದ್ಯಂತ ಶಾಲೆಗಳು ಮತ್ತು ಕಾಲೇಜುಗಳನ್ನು ಮುಚ್ಚಲಾಗಿತ್ತು. ಸದ್ಯ ಯುಜಿಸಿಯಿಂದ ಹೊಸ ಶೈಕ್ಷಣಿಕ ಕ್ಯಾಲೆಂಡರ್ ಬಿಡುಗಡೆ ಮಾಡಲಾಗಿದೆ. ಹೊಸ ವಿದ್ಯಾರ್ಥಿಗಳಿಗೆ ಕಾಲೇಜುಗಳು ಸೆಪ್ಟೆಂಬರ್‌ನಲ್ಲಿ ಆರಂಭವಾಗಲಿದೆ ಮತ್ತು ಈಗಾಗಲೇ ದಾಖಲಾಗಿರುವವರಿಗೆ ಆಗಸ್ಟ್ ತಿಂಗಳಲ್ಲಿ ಕಾಲೇಜುಗಳು ಪ್ರಾರಂಭವಾಗಲಿದೆ. ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪ್ರಕ್ರಿಯೆಯು ಆಗಸ್ಟ್‌ನಿಂದ ಪ್ರಾರಂಭವಾಗಲಿದೆ.

ಕೊರೊನಾ ಸೋಂಕಿನ ಭೀತಿ ಮತ್ತು ನಂತರದ ರಾಷ್ಟ್ರವ್ಯಾಪಿ ಲಾಕ್‌ಡೌನ್ ದೃಷ್ಟಿಯಿಂದ ವಿಶ್ವವಿದ್ಯಾಲಯಗಳ ಪರೀಕ್ಷೆಗಳು ಮತ್ತು ಶೈಕ್ಷಣಿಕ ಕ್ಯಾಲೆಂಡರ್‌ನ ಮಾರ್ಗಸೂಚಿಗಳನ್ನು ವಿವರಿಸಿದ ಆಯೋಗವು ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ಜುಲೈನಲ್ಲಿ ನಡೆಸಲಾಗುವುದು ಎಂದು ತಿಳಿಸಿದೆ.

ಈಗಿರುವ ಶುಲ್ಕವನ್ನೇ ಮುಂದುವರಿಸಿ ಇಲ್ಲ ಕಡಿಮೆ ಮಾಡಿ:
ವಿದ್ಯಾರ್ಥಿಗಳ ಶಾಲಾ ಶುಲ್ಕ ಹೆಚ್ಚಳ ಮಾಡದಂತೆ ಖಾಸಗಿ ಶಾಲೆಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ನೀಡಿದೆ. ಮುಂದಿನ ಶೈಕ್ಷಣಿಕ ವರ್ಷದ ಶುಲ್ಕ ಹೆಚ್ಚಿಸದಂತೆ ಆದೇಶಿಸಿದ್ದು, ಈಗ ಇರುವ ಶಾಲಾ ಶುಲ್ಕವನ್ನೇ ಮುಂದುವರಿಸಿ ಅಥವಾ ಕಡಿಮೆ ಶುಲ್ಕ ಪಡೆಯಿರಿ ಎಂದು ಇಲಾಖೆ ತಿಳಿಸಿದೆ.

ಪ್ರತಿವರ್ಷ ಶೇಕಡಾ 15ರಷ್ಟು ಶುಲ್ಕ ಏರಿಕೆಗೆ ಅವಕಾಶವಿತ್ತು. ಪೋಷಕರ ಇಚ್ಛೆಯಂತೆ ಶುಲ್ಕ ಪಡೆಯಲು ಸೂಚನೆ ನೀಡಿದೆ. ತಿಂಗಳು, ತ್ರೈಮಾಸಿಕ, ಅರ್ಧವಾರ್ಷಿಕ ಕಂತು ಅಥವಾ ವರ್ಷದ ಶುಲ್ಕ ಒಂದೇ ಬಾರಿ ಪಾವತಿಸಲು ಶಿಕ್ಷಣ ಇಲಾಖೆ ಅವಕಾಶ ನೀಡಿದೆ. ಹಾಗೂ ಆದೇಶ ಉಲ್ಲಂಘಿಸಿ ಹೆಚ್ಚು ಶುಲ್ಕ ಪಡೆಯುವ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.