‘ಕಾಲೇಜು ಆರಂಭಕ್ಕೆ ಓಕೆ.. ಆದ್ರೆ ಕೊರೊನಾ ನಿಯಂತ್ರಣಕ್ಕೆ ಬಂದರಷ್ಟೇ LKG-UKG ಆರಂಭ’

ಬೆಂಗಳೂರು: ರಾಜ್ಯದಲ್ಲಿ ಹಂತ ಹಂತವಾಗಿ ಶಾಲಾ ಕಾಲೇಜು ಆರಂಭಕ್ಕೆ ಸಿದ್ಧತೆ ನಡೆದಿದೆ. ಶಾಲಾ ಕಾಲೇಜು ಆರಂಭಿಸುವ ಬಗ್ಗೆ ಡಿಸಿಎಂ ಡಾ. ಅಶ್ವತ್ಥ್​ ನಾರಾಯಣ ಸುಳಿವು ನೀಡಿದ್ದು ಈಗಾಗಲೇ ಕೇಂದ್ರ ಸರ್ಕಾರ ಶಾಲೆ ತೆರೆಯಲು ಅವಕಾಶ ಕಲ್ಪಿಸಿದೆ. ಕೇಂದ್ರದ ಅನುಮತಿ ಬೆನ್ನಲ್ಲೇ ಯುಜಿಸಿಯಿಂದಲೂ (UGC )‌ ಸೂಚನೆ ದೊರೆತಿದೆ. ಹಾಗಾಗಿ ನವೆಂಬರ್​ನಲ್ಲಿ ಕಾಲೇಜುಗಳನ್ನು ಆರಂಭಿಸುವ ಸೂಚನೆಗಳಿವೆ ಎಂದು ಅವರು ತಿಳಿಸಿದ್ದಾರೆ. ಮೊದಲ ಹಂತದಲ್ಲಿ ಸಾಕಷ್ಟು ಮುನ್ನೆಚ್ಚರಿಕೆಯೊಂದಿಗೆ ಪದವಿ ಕಾಲೇಜುಗಳ ಆರಂಭಗೊಳ್ಳಲಿವೆ. ಎರಡನೇ ಹಂತದಲ್ಲಿ 8ರಿಂದ 12ನೇ ತರಗತಿ ಆರಂಭ. […]

‘ಕಾಲೇಜು ಆರಂಭಕ್ಕೆ ಓಕೆ.. ಆದ್ರೆ  ಕೊರೊನಾ ನಿಯಂತ್ರಣಕ್ಕೆ ಬಂದರಷ್ಟೇ LKG-UKG ಆರಂಭ’
ಡಿಸಿಎಂ ಡಾ.ಅಶ್ವತ್ಥ್ ನಾರಾಯಣ
ಸಾಧು ಶ್ರೀನಾಥ್​

Updated on: Oct 16, 2020 | 4:11 PM

ಬೆಂಗಳೂರು: ರಾಜ್ಯದಲ್ಲಿ ಹಂತ ಹಂತವಾಗಿ ಶಾಲಾ ಕಾಲೇಜು ಆರಂಭಕ್ಕೆ ಸಿದ್ಧತೆ ನಡೆದಿದೆ. ಶಾಲಾ ಕಾಲೇಜು ಆರಂಭಿಸುವ ಬಗ್ಗೆ ಡಿಸಿಎಂ ಡಾ. ಅಶ್ವತ್ಥ್​ ನಾರಾಯಣ ಸುಳಿವು ನೀಡಿದ್ದು ಈಗಾಗಲೇ ಕೇಂದ್ರ ಸರ್ಕಾರ ಶಾಲೆ ತೆರೆಯಲು ಅವಕಾಶ ಕಲ್ಪಿಸಿದೆ. ಕೇಂದ್ರದ ಅನುಮತಿ ಬೆನ್ನಲ್ಲೇ ಯುಜಿಸಿಯಿಂದಲೂ (UGC )‌ ಸೂಚನೆ ದೊರೆತಿದೆ. ಹಾಗಾಗಿ ನವೆಂಬರ್​ನಲ್ಲಿ ಕಾಲೇಜುಗಳನ್ನು ಆರಂಭಿಸುವ ಸೂಚನೆಗಳಿವೆ ಎಂದು ಅವರು ತಿಳಿಸಿದ್ದಾರೆ.

ಮೊದಲ ಹಂತದಲ್ಲಿ ಸಾಕಷ್ಟು ಮುನ್ನೆಚ್ಚರಿಕೆಯೊಂದಿಗೆ ಪದವಿ ಕಾಲೇಜುಗಳ ಆರಂಭಗೊಳ್ಳಲಿವೆ. ಎರಡನೇ ಹಂತದಲ್ಲಿ 8ರಿಂದ 12ನೇ ತರಗತಿ ಆರಂಭ. 3ನೇ ಹಂತದಲ್ಲಿ 1-7ನೇ ತರಗತಿ ತೆರೆಯಲು ಅವಕಾಶ ಕಲ್ಪಿಸಲಾಗುವುದು. ಆದರೆ, ಕೊರೊನಾ ನಿಯಂತ್ರಣಕ್ಕೆ ಬಂದರಷ್ಟೇ LKG, UKG ಆರಂಭ ಮಾಡುತ್ತೇವಷ್ಟೇ ಎಂದು ಡಿಸಿಎಂ ಅಶ್ವತ್ಥ್​ ನಾರಾಯಣ ಸ್ಪಷ್ಟಪಡಿಸಿದ್ದಾರೆ.

ಸಿಎಂ ಜೊತೆ ಶಿಕ್ಷಣ ತಜ್ಞರು‌, ಆರೋಗ್ಯ ತಜ್ಞರ ಚರ್ಚೆ ನಡೆದಿದೆ. ಚರ್ಚೆ ‌ನಂತರ ಶಾಲೆ ಆರಂಭಿಸುವ ಬಗ್ಗೆ ಅಂತಿಮ ನಿರ್ಧಾರವಾಗಲಿದೆ. ನವೆಂಬರ್ 1 ಅಥವಾ 2ನೇ ವಾರದಲ್ಲಿ ಕಾಲೇಜು ಆರಂಭವಾಗುವ ಸೂಚನೆಯಿದೆ ಎಂದು ಡಿಸಿಎಂ, ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್​ ನಾರಾಯಣ ಹೇಳಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us