ಬಿಜೆಪಿ ಎಂಎಲ್ಸಿ ಆರ್.ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ, ಹಲವು ವಸ್ತುಗಳು ಪತ್ತೆ
ಚುನಾವಣೆ ಸಮೀಪಿಸುತ್ತಿದ್ದಂತೆಯೇ ಇತ್ತ ಬಿಜೆಪಿ ವಿಧಾನಪರಿಷತ್ ಸದಸ್ಯ ಆರ್.ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಹಾವೇರಿ: ಬಿಜೆಪಿ ವಿಧಾನಪರಿಷತ್ ಸದಸ್ಯ ಆರ್.ಶಂಕರ್(BJP MLC R Shankar) ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ(Commercial Taxes Department) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಬೀರಲಿಂಗೇಶ್ವರ ನಗರದಲ್ಲಿರುವ ಶಂಕರ್ ಮನೆ ಮೇಲೆ ನಿನ್ನೆ(ಮಾರ್ಚ್ 14) ತಡರಾತ್ರಿ ದಾಳಿಯಾಗಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆಯಲ್ಲಿ ನಡೆಸಿದ್ದಾರೆ. ಈ ವೇಳೆ ಆರ್.ಶಂಕರ್ ಗೃಹಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕರಿಗೆ ಹಂಚಲು ತಂದಿದ್ದ ಹಲವು ವಸ್ತುಗಳು ಪತ್ತೆಯಾಗಿವೆ. ಆರ್.ಶಂಕರ್ ಭಾವಚಿತ್ರ ಇರುವ ಸೀರೆ ಬಾಕ್ಸ್. ತಟ್ಟೆ, ಲೋಟಾ ಹಾಗೂ ಎಲ್.ಕೆ.ಜಿ ಪದವಿ ಕಾಲೇಜು ಮಕ್ಕಳಿಗೆ ಹಂಚಲು ತಂದಿದ್ದ ಸ್ಕೂಲ್ ಬ್ಯಾಗ್ ಸಿಕ್ಕಿವೆ ಎಂದು ತಿಳಿದುಬಂದಿವೆ.
ಸುಮಾರು 8 ಕೊಟಿ ರೂಪಾಯಿ ವೆಚ್ಚದ ವಸ್ತುಗಳು ಪತ್ತೆಯಾಗಿವೆ ಎಂದು ಅಂದಾಜಿಸಲಾಗಿದ್ದು, ಈ ಎಲ್ಲ ವಸ್ತುಗಳ GST ಬಿಲ್ ಕೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಆರ್ ಶಂಕರ್, ಬಿಲ್ ಕೊಡಲು ಅವಕಾಶ ಕೇಳಿದ್ದಾರೆ. ಒಂದು ವೇಳೆ ಸರಿಯಾದ ಜಿಎಸ್ ಟಿ ಬಿಲ್ ಇಲ್ಲದಿದ್ರೆ ದಂಡ ವಿಧಿಸುವ ಸಾಧ್ಯತೆ ಇದೆ.
ಇನ್ನು ಚುನಾವಣೆ ನಿಯಮ ಉಲ್ಲಂಘಣೆ ಮಾಡಿದಾರಾ ಎಂಬುವುದಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಸಹ ದಾಳಿ ಮಾಡಿದ್ದು, ಎಲ್ಲ ದಾಖಲೆಗಳನ್ನು ಕೊರ್ಟ್ ಮುಂದೆ ಹಾಜರುಪಡಿಸಿ, ಒಪ್ಪಿಗೆ ಮೇರೆಗೆ ಎಫ್ಐಆರ್ ದಾಖಲು ಮಾಡಲಾಗುವುದು ಎಂದು Tv9ಗೆ ಹಾವೇರಿ ಜಿಲ್ಲಾಧಿಕಾರಿ ರಘುನಂದನಮೂರ್ತಿ ಮಾಹಿತಿ ನೀಡಿದ್ದಾರೆ.
Published On - 8:21 am, Wed, 15 March 23