AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

300 ರೂ. ಲಂಚ ಪಡೆದು ಬಚಾವಾಗಲೆತ್ನಿಸಿದ್ದ ಬೆರಳಚ್ಚುಗಾರ್ತಿಗೆ 10 ವರ್ಷ ನಂತರ ಹೈಕೋರ್ಟಲ್ಲಿ ಶಾಕ್!

ಅಚ್ಚರಿಯ ಪ್ರಕರಣವೊಂದರಲ್ಲಿ, 300 ರೂಪಾಯಿ ಲಂಚ ಪಡೆದು ಬಚಾವಾಗಲು ಯತ್ನಿಸಿದ್ದ ವಾಣಿಜ್ಯ ತೆರಿಗೆ ಇಲಾಖೆಯ ಮಹಿಳಾ ಬೆರಳಚ್ಚುಗಾರ್ತಿಯೊಬ್ಬರಿಗೆ ಹತ್ತು ವರ್ಷದ ನಂತರ ಹೈಕೋರ್ಟ್​ನಲ್ಲಿ ಶಾಕ್ ದೊರೆತಿದೆ. ಸರ್ಕಾರ ವಜಾಗೊಳಿಸಿದ್ದ ಶಿಕ್ಷೆಯನ್ನು ಬದಲಾಯಿಸುವಂತೆ ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಾಧಿಕರಣ ಸಲಹೆ ನೀಡಿತ್ತು. ಆದರೆ, ಇದೀಗ ಹೈಕೋರ್ಟ್​ ಹೇಳಿದ್ದೇ ಬೇರೆ! ವಿವರ ಇಲ್ಲಿದೆ.

300 ರೂ. ಲಂಚ ಪಡೆದು ಬಚಾವಾಗಲೆತ್ನಿಸಿದ್ದ ಬೆರಳಚ್ಚುಗಾರ್ತಿಗೆ 10 ವರ್ಷ ನಂತರ ಹೈಕೋರ್ಟಲ್ಲಿ ಶಾಕ್!
ಕರ್ನಾಟಕ ಹೈಕೋರ್ಟ್
Ganapathi Sharma
|

Updated on: Oct 18, 2024 | 8:00 AM

Share

ಬೆಂಗಳೂರು, ಅಕ್ಟೋಬರ್ 18: ವಾಣಿಜ್ಯ ತೆರಿಗೆ ಇಲಾಖೆಯ ಮಹಿಳಾ ಬೆರಳಚ್ಚುಗಾರ್ತಿಯೊಬ್ಬರು 300 ರೂಪಾಯಿ ಲಂಚ ಪಡೆದು ಸಿಕ್ಕಿಬಿದ್ದ ನಂತರ ಅವರನ್ನು ರಾಜ್ಯ ಸರ್ಕಾರ ವಜಾಗೊಳಿಸಿತ್ತು. ಈ ವಿಚಾರವಾಗಿ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್ ಕೂಡ ಎತ್ತಿಹಿಡಿದಿದೆ. ಇಂಥ ಪ್ರಕರಣದಲ್ಲಿ ವಿಧಿಸಿದ ಶಿಕ್ಷೆಯನ್ನು ಬದಲಿಸಲು ನ್ಯಾಯಾಲಯಕ್ಕೆ ಅಧಿಕಾರವಿಲ್ಲ ಎಂದು ನ್ಯಾಯಮೂರ್ತಿಗಳಾದ ಎಸ್​ಜಿ ಪಂಡಿತ್ ಮತ್ತು ಸಿಎಂ ಪೂಣಚ್ಚ ಅವರನ್ನೊಳಗೊಂಡ ವಿಭಾಗೀಯ ಪೀಠ ಹೇಳಿದೆ.

ಲಂಚ ಪಡೆದಿದ್ದ ಹೆಚ್​ಎಸ್​ ಕಂಠಿ ಅವರನ್ನು ಸೇವೆಯಿಂದ ವಜಾಗೊಳಿಸಿ ಸರ್ಕಾರ ಕ್ರಮ ಕೈಗೊಂಡಿತ್ತು. ಆದರೆ, ಶಿಕ್ಷೆಯನ್ನು ಕಡ್ಡಾಯ ನಿವೃತ್ತಿಗೆ ಬದಲಾಯಿಸುವಂತೆ ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಾಧಿಕರಣ (ಕೆಎಸ್​ಎಟಿ) 2018ರ ಜನವರಿ 4ರಂದು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿತ್ತು.

ಕಂಠಿ ಮತ್ತು ವಾಣಿಜ್ಯ ತೆರಿಗೆ ಅಧಿಕಾರಿ ಸಂಪತ್ ರಾವ್ ಎಸ್ ಬೊಮ್ಮಣ್ಣನವರ್ ಲಂಚ ಪಡೆದ ಆರೋಪ ಎದುರಿಸಿದ್ದರು. ರಾವ್ ಅವರು ದೂರುದಾರ ಗಣೇಶ್ ಶೆಟ್ಟಿಯಿಂದ 2000 ಮತ್ತು ಕಂಠಿ 300 ರೂ. ಲಂಚ ಪಡೆದಿದ್ದರು ಎಂದು ಆರೋಪಿಸಲಾಗಿತ್ತು.

ಹತ್ತು ವರ್ಷಗಳಿಗೂ ಹಳೆಯ ಪ್ರಕರಣ

ವಿಚಾರಣೆಯ ನಂತರ, ಕಂಠಿ ಅವರನ್ನು 2014 ರ ಜುಲೈ 24 ರಂದು ಸೇವೆಯಿಂದ ವಜಾಗೊಳಿಸಲಾಗಿತ್ತು. ಅವರು ಕರ್ತವ್ಯ ನಿಷ್ಠೆಯನ್ನು ಕಾಪಾಡಿಕೊಳ್ಳಲು ವಿಫಲರಾಗಿದ್ದಾರೆ ಮತ್ತು ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಗಳನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ ಎಂದು ಸರ್ಕಾರ ಹೇಳಿತ್ತು.

ಇದನ್ನು ಪ್ರಶ್ನಿಸಿ ಕಂಠಿ ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಾಧಿಕರಣ ಮೊರೆ ಹೋಗಿದ್ದರು. ಅವರ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಧಿಕರಣ, ಆಕೆ 11 ವರ್ಷ 5 ತಿಂಗಳಷ್ಟೇ ಸೇವೆ ಸಲ್ಲಿಸಿದ ಮಹಿಳೆಯಾಗಿದ್ದು, ಪ್ರಕರಣವನ್ನು ಸೌಮ್ಯವಾಗಿ ಪರಿಗಣಿಸಬೇಕು. ವಜಾಗೊಳಿಸುವ ಆದೇಶಕ್ಕೆ ಬದಲಾಗಿ ಕಡ್ಡಾಯ ನಿವೃತ್ತಿ ನೀಡಬಹುದು ಎಂದಿತ್ತು.

ಸರ್ಕಾರದ ವಾದವೇನು?

ನ್ಯಾಯಮಂಡಳಿಯ ಆದೇಶದ ವಿರುದ್ಧ ರಾಜ್ಯ ಸರ್ಕಾರವು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಅಕ್ರಮ ಸಾಬೀತಾದ ಪ್ರಕರಣದಲ್ಲಿ ಶಿಕ್ಷೆಯನ್ನು ಬದಲಿಸುವಂತೆ ನ್ಯಾಯಾಧಿಕರಣ ಸೂಚಿಸಿದೆ. ಇದು ಸರಿಯಲ್ಲ ಎಂದು ಸರ್ಕಾರ ವಾದಿಸಿತ್ತು.

ಹೈಕೋರ್ಟ್ ಹೇಳಿದ್ದೇನು?

ಕಂಠಿ ಮೊದಲ ವಿಚಾರಣೆಯಲ್ಲೇ ಹಣ ಪಡೆದಿರುವುದಾಗಿ ಒಪ್ಪಿಕೊಂಡಿದ್ದಾರೆ. ತಮ್ಮ ಹೇಳಿಕೆಯಲ್ಲಿಯೂ ಅದನ್ನು ದಾಖಲಿಸಿದ್ದಾರೆ ಎಂಬುದನ್ನು ಹೈಕೋರ್ಟ್ ವಿಭಾಗೀಯ ಪೀಠ ಗಮನಿಸಿದೆ.

ಇದನ್ನೂ ಓದಿ: ಮತ್ತೆ ಮುನ್ನಲೆಗೆ ಪಂಚಮಸಾಲಿ 2ಎ ಮೀಸಲಾತಿ ಕಿಚ್ಚು: ಸಿಎಂ ಜೊತೆ ಸಮುದಾಯದ ಮುಖಂಡರ ಸಭೆ

ಲಂಚ ಕೇಳುವುದು ಮತ್ತು ಪಡೆಯುವುದು ಗಂಭೀರ ಅಪರಾಧವಾಗಿದೆ. ಇಂಥ ಪ್ರಕರಣಗಳಲ್ಲಿ ಕಠಿಣವಾಗಿ ವ್ಯವಹರಿಸಬೇಕು. ಶಿಕ್ಷೆಯನ್ನು ಬದಲಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಪೀಠ ಹೇಳಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ