AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಿಷನ್ ಆರೋಪಕ್ಕೆ ಅಂದು ಸಾಕ್ಷಿ ಕೊಡದವರು ಇಂದು ಕೇಳ್ತಿರೋದೇಕೆ: ‘ಕೈ’ ಸರ್ಕಾರಕ್ಕೆ ಅಶೋಕ್ ಪ್ರಶ್ನೆ

ಗುತ್ತಿಗೆದಾರರ ಸಂಘ ಮಾಡಿರುವ 80 ಪರ್ಸೆಂಟ್ ಕಮಿಷನ್ ಆರೋಪ ಮತ್ತು ಕಸದ ಟೆಂಡರ್​ಗೆ ಕಮಿಷ್​ ಕೊಡಬೇಕೆಂಬ ಆರೋಪಗಳ ಬಗ್ಗೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಸರ್ಕಾರ ಇದ್ದಾಗ ಕಮಿಷನ್ ಆರೋಪಕ್ಕೆ ಅಂದು ಸಾಕ್ಷಿ ಕೊಡದವರು ಇಂದು ಕೇಳ್ತಿರೋದೇಕೆ ಎಂದು ಪ್ರಶ್ನಿಸಿರುವ ಅವರು, ಕಮಿಷನ್ ಆರೋಪ ಸುಳ್ಳಾದ್ರೆ ಮೊಕದ್ದಮೆ ಹೂಡಿ ಎಂದು ಸವಾಲು ಹಾಕಿದ್ದಾರೆ.

ಕಮಿಷನ್ ಆರೋಪಕ್ಕೆ ಅಂದು ಸಾಕ್ಷಿ ಕೊಡದವರು ಇಂದು ಕೇಳ್ತಿರೋದೇಕೆ: ‘ಕೈ’ ಸರ್ಕಾರಕ್ಕೆ ಅಶೋಕ್ ಪ್ರಶ್ನೆ
ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್Image Credit source: tv9
ಹರೀಶ್ ಜಿ.ಆರ್​.
| Edited By: |

Updated on: Feb 18, 2026 | 2:20 PM

Share

ಬೆಂಗಳೂರು, ಫೆಬ್ರವರಿ 18: ಕಮಿಷನ್ ಆರೋಪದ ವಿಚಾರದಲ್ಲಿ ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರ ದ್ವಂದ್ವ ಧೋರಣೆ ಅನುಸರಿಸುತ್ತಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ (R Ashoka) ಟೀಕಿಸಿದರು. ವಿಧಾನಸೌಧದಲ್ಲಿ ಬುಧವಾರ ಮಾತನಾಡಿದ ಅವರು, ಹಿಂದಿನ ಸರ್ಕಾರದ ಆರೋಪಗಳಿಗೆ ಸಾಕ್ಷಿ ಕೇಳದವರು ಈಗ ಏಕೆ ಕೇಳುತ್ತಿದ್ದಾರೆ ಎಂದು ಪ್ರಶ್ನಿಸಿದರು. ಸರ್ಕಾರದ ಮೇಲೆ ಗುತ್ತಿಗೆದಾರರ ಸಂಘ ಮಾಡಿರುವ 80 % ಕಮಿಷನ್ ಆರೋಪ ಗಂಭೀರ ವಿಷಯವಾಗಿದ್ದು, ಅದು ಸುಳ್ಳು ಎಂದು ಹೇಳುವ ಕಾಂಗ್ರೆಸ್ ನಾಯಕರು ಆರೋಪ ಮಾಡಿದವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಿ ಎಂದು ಸವಾಲು ಹಾಕಿದರು. ನಾವು ಸತ್ಯಹರಿಶ್ಚಂದ್ರನ ಮಕ್ಕಳು ಎಂದು ಹೇಳಿಕೊಳ್ಳುವ ಸಚಿವರು ಮೊದಲು ಈ ಆರೋಪಗಳಿಗೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯದ ಟೆಂಡರ್‌ಗಳು ನೆರೆಯ ಆಂಧ್ರಪ್ರದೇಶದ ಗುತ್ತಿಗೆದಾರರಿಗೆ ಹೋಗುತ್ತಿವೆ ಎಂದು ಆರೋಪಿಸಿದ ಅವರು, ಕೆಕೆಆರ್‌ಡಿಬಿ ಕಾಮಗಾರಿಗಳನ್ನು ಸ್ಥಳೀಯ ಗುತ್ತಿಗೆದಾರರಿಗೆ ನೀಡಬೇಕು ಎಂದು ಒತ್ತಾಯಿಸಿದರು.

ಯಾವ್ಯಾವ ಕೆಲಸಕ್ಕೆ ಎಷ್ಟು ಕಮಿಷನ್? ಅಶೋಕ್ ಹೇಳಿದ್ದೇನು?

ಕಸದ ಟೆಂಡರ್ ಪಡೆಯಲು 7% ಕಮಿಷನ್, ಬಿಲ್ ಬಿಡುಗಡೆಗೆ 7% ಹಾಗೂ ವಿಶೇಷ ಎಲ್‌ಒಸಿ ಪಡೆಯಲು 7% ನೀಡಬೇಕಾಗಿದೆ. ಇದರಿಂದ ಒಟ್ಟಾರೆ 21% ಕಮಿಷನ್ ಸರ್ಕಾರಕ್ಕೆ ಹೋಗುತ್ತಿದೆ ಎಂದು ಆರೋಪಿಸಿದರು. ಇಂಜಿನಿಯರ್‌ಗಳಿಗೆ ಬೇರೆ ಕಮೀಷನ್ ನೀಡಬೇಕಾಗುತ್ತಿದೆ, ಕಸದ ಸಮಸ್ಯೆಗೆ ಸರ್ಕಾರದ ‘ಮಾಫಿಯಾ’ವೇ ಕಾರಣ ಎಂದು ಅಶೋಕ್ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಸರ್ಕಾರದಿಂದಲೇ ಭೂಕಬಳಿಕೆ: ಜಿಲ್ಲೆಜಿಲ್ಲೆಗಳಲ್ಲಿ ಕಾಂಗ್ರೆಸ್​ ಭವನಕ್ಕೆ ಭೂಮಿ ನೀಡಿದ ದಾಖಲೆ ಸಮೇತ ಬಿಜೆಪಿ ಗಂಭೀರ ಆರೋಪ

ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವ ಕ್ರಮವನ್ನು ಖಂಡಿಸಿದ ಅವರು, ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಬಗ್ಗೆ ಅಶೋಕ್ ಏನಂದ್ರು?

ಜಿಬಿಎ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ವಿಚಾರವಾಗಿ ಮಾತನಾಡಿದ ಅಶೋಕ್, ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆದಿದ್ದು, ಮೈತ್ರಿ ಸುಗಮವಾಗಿ ಚುನಾವಣೆ ಎದುರಿಸಲಿದೆ ಎಂದರು. ಸಣ್ಣಪುಟ್ಟ ಗೊಂದಲಗಳನ್ನು ಬೇಗನೆ ಬಗೆಹರಿಸಲಾಗುವುದು, ಅಂತಿಮ ತೀರ್ಮಾನ ಹೈಕಮಾಂಡ್‌ದ್ದು ಎಂದು ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More