AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಮತ್ತೊಂದು ತಿರುವು: ಅಭಿಪ್ರಾಯಗಳ ಸಮಗ್ರ ಪರಿಶೀಲನೆಗೆ ನ್ಯಾಯಮೂರ್ತಿ ನೇತೃತ್ವದ ಸಮಿತಿ ರಚನೆ

ಬಿಡದಿ ಟೌನ್‌ಶಿಪ್‌ ಬಗ್ಗೆ ಪರ ವಿರೋದಗಳು ವ್ಯಕ್ತವಾಗಿದ್ದು, ಇದು ರಾಜಕಿಯ ಸ್ವರೂಪ ಪಡೆದುಕೊಂಡಿದೆ. ಒಂದೆಡೆ ಡಿಕೆ ಶಿವಕುಮಾರ್ ಸರ್ಕಾರ ಮಾಡಿಯೇ ತೀರಬೇಕೆಂದು ಹಠಕ್ಕೆ ಬಿದ್ದಿದ್ದರೆ, ಇನ್ನೊಂದೆಡೆ ವಿಪಕ್ಷಗಳು ಜೆಡಿಎಸ್ ಮತ್ತು ಬಿಜೆಪಿ ಟೌನ್​​ಶಿಪ್ ಮಾಡದಂತೆ ಪಟ್ಟು ಹಿಡಿದಿವೆ. ಹೀಗೆ ಈ ಯೋಜನೆ ಜಿದ್ದಾಜಿದ್ದಿಗೆ ಕಾರಣವಾಗಿದೆ. ಇದರ ಮಧ್ಯೆ ಇದಿಗ ಸರ್ಕಾರ, ಈ ಸಂಬಂಧ ಅಭಿಪ್ರಾಯಗಳ ಸಮಗ್ರ ಪರಿಶೀಲನೆಗೆ ನ್ಯಾಯಮೂರ್ತಿ ನೇತೃತ್ವದ ಸಮಿತಿ ರಚನೆ ಮಾಡಿದೆ.

ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಮತ್ತೊಂದು ತಿರುವು: ಅಭಿಪ್ರಾಯಗಳ ಸಮಗ್ರ ಪರಿಶೀಲನೆಗೆ ನ್ಯಾಯಮೂರ್ತಿ ನೇತೃತ್ವದ ಸಮಿತಿ ರಚನೆ
Bidadi Township
ರಮೇಶ್ ಬಿ. ಜವಳಗೇರಾ
|

Updated on: Aug 08, 2026 | 9:12 PM

Share

ಮುಖ್ಯಾಂಶಗಳು

  • ಬಿಡದಿ ಟೌನ್‌ಶಿಪ್‌ ನಿರ್ಮಾಣ ವಿವಾದ
  • ವಿಪಕ್ಷಗಳ ಪಾದಯಾತ್ರೆ ನಡುವೆ ಸರ್ಕಾರ ಮಹತ್ವದ ಹೆಜ್ಜೆ
  • ಟೌನ್‌ಶಿಪ್‌ ಯೋಜನೆ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ಸಮಿತಿ ರಚನೆ

ಬೆಂಗಳೂರು, (ಆಗಸ್ಟ್ 08): ಬಿಡದಿ ಟೌನ್‌ಶಿಪ್‌ ವಿವಾದ (Bidadi Township) ಮತ್ತೊಂದು ತಿರುವು ಪಡೆದುಕೊಂಡಿದೆ. ಟೌನ್ ಶಿಪ್ ಗೆ ಬಿಜೆಪಿ (BJP) ಹಾಗೂ ಜೆಡಿಎಸ್  (JDS)ಬಲವಾಗಿ ವಿರೋಧಿಸಿದ್ದು, ಆಗಸ್ಟ್ 9 ಮತ್ತು 10ರಂದು ಪಾದಯಾತ್ರೆ ನಡೆಸಲು ತೀರ್ಮಾನಿಸಿವೆ. ಇದರ ಮಧ್ಯೆ ಇದೀಗ ಡಿಕೆ ಶಿವಕುಮಾರ್ (Dk Shivakumar) ಸರ್ಕಾರ, ಬಿಡದಿ ಟೌನ್‌ಶಿಪ್‌ ಬಗ್ಗೆ ಅಭಿಪ್ರಾಯಗಳ ಸಮಗ್ರ ಪರಿಶೀಲನೆಗೆ ನ್ಯಾಯಮೂರ್ತಿ ನೇತೃತ್ವದ ಸಮಿತಿ ರಚನೆ ಮಾಡಿದ್ದು, 30 ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಈ ಯೋಜನೆಗೆ ಯಾರಿಂದಲೂ ಬಲವಂತವಾಗಿ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಸಿಎಂ ಡಿಕೆ ಶಿವಕುಮಾರ್, ಸಮಿತಿಯು ಸದರಿ ಯೋಜನೆಯನ್ನು ಕಾನೂನಾತ್ಮಕ, ಮಾನವೀಯತೆ ಹಾಗೂ ಸಮಗ್ರ ಅಭಿವೃದ್ದಿಯ ಚೌಕಟ್ಟಿನಲ್ಲಿ ವಿಶ್ಲೇಷಣೆಗೊಳಪಡಿಸಿ ತನ್ನ ಶಿಫಾರಸ್ಸನ್ನು ನೀಡಲಿದೆ ಎಂದಿದ್ದಾರೆ. ಈ ಮೂಲಕ ರೈತರ ವಿರೋಧ ಹಾಗೂ ವಿಪಕ್ಷಗಳ ಪಾದಯಾತ್ರೆ ನಡುವೆ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.

ಸಮಿತಿಯಲ್ಲಿ ಯಾರ್ಯಾರು ಇದ್ದಾರೆ?

ನ್ಯಾಯಮೂರ್ತಿ ಗುಹನಾಥನ್ ನರೇಂದರ್ ನೇತೃತ್ವದ ಸಮಿತಿಯಲ್ಲಿ ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್.ವಿ.ರಂಗನಾಥ್, ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್ ಉಮಾಶಂಕರ್ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಪ್ರಸನ್ನಕುಮಾರ್ ಸದಸ್ಯರಾಗಿದ್ದು, ಈ ಸಮತಿ 30 ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕಿದೆ.

ಇದನ್ನೂ ನೋಡಿ: ಬಿಡದಿ ಟೌನ್‌ಶಿಪ್ ವಿರುದ್ಧ ಸಮರಕ್ಕೆ ಬಿಜೆಪಿ, ಜೆಡಿಎಸ್ ಸಜ್ಜು: ಬೃಹತ್ ಪಾದಯಾತ್ರೆ ನಡೆಸಲು ನಿರ್ಧಾರ

ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆ ಶಿವಕುಮಾರ್, ಸಮಿತಿಯು ಸದರಿ ಯೋಜನೆಯನ್ನು ಕಾನೂನಾತ್ಮಕ, ಮಾನವೀಯತೆ ಹಾಗೂ ಸಮಗ್ರ ಅಭಿವೃದ್ದಿಯ ಚೌಕಟ್ಟಿನಲ್ಲಿ ವಿಶ್ಲೇಷಣೆಗೊಳಪಡಿಸಿ ತನ್ನ ಶಿಫಾರಸ್ಸನ್ನು ನೀಡಲಿದೆ. 2006ನೇ ಸಾಲಿನಲ್ಲಿ ಬಿಡದಿ ಬಳಿ ಸಮಗ್ರ ಉಪ ನಗರವನ್ನು ಅಭಿವೃದ್ಧಪಡಿಸಲು ತೀರ್ಮಾನಿಸಲಾಗಿತ್ತು. ಇತ್ತೀಚೆಗೆ ಬೆಂಗಳೂರಿನ ಸಮೀಪ ಬಂಡವಾಳ ಹೂಡಿಕೆಗೆ ಬೇಡಿಕೆ ಹೆಚ್ಚಾಗಿದ್ದು, ನನೆಗುದಿಗೆ ಬಿದ್ದಿದ್ದ ಬಿಡದಿ ಸಮಗ್ರ ಉಪನಗರ ಯೋಜನೆಯನ್ನು ಜನವಸತಿ ಪ್ರದೇಶಗಳ ಕನಿಷ್ಟ ಸ್ಥಳಾಂತರ ಮತ್ತು ಭೂಮಾಲೀಕರಿಗೆ ಉತ್ತಮ ಮೌಲ್ಯ ಒದಗಿಸುವ ಆಶಯದೊಂದಿಗೆ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆಯನ್ನು ಮುಂದುವರೆಸಲು ಸರ್ಕಾರದ ತೀರ್ಮಾನ ಎಂದಿದ್ದಾರೆ.

ಯೋಜನೆಯನ್ನು ಜನಸ್ನೇಹಿಯಾಗಿ ಜಾರಿಗೊಳಿಸಲು ಸಾರ್ವಜನಿಕರ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಮನ್ನಣೆ ನೀಡುವುದಾಗಿ ಸರಕಾರ ಈಗಾಗಲೇ ಸ್ಪಷ್ಟಪಡಿಸಿದೆ. ಜನರ ಆಶೋತ್ತರಗಳನ್ನು ಗೌರವಿಸಿ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಈ ಯೋಜನೆಯನ್ನು ಮತ್ತಷ್ಟು ಉತ್ತಮವಾಗಿ ರೂಪಿಸುವುದು ಸರ್ಕಾರದ ಆಶಯವಾಗಿದ್ದು, ಈ ಹಿನ್ನೆಲೆಯಲ್ಲಿ ಸಮಿತಿ ರಚನೆಯನ್ನು ಮಾಡಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us