ಬೆಂಗಳೂರು ಗೋರಿಪಾಳ್ಯ ಪಾಕಿಸ್ತಾನಕ್ಕೆ ಹೋಲಿಕೆ: ಹೈಕೋರ್ಟ್​ ನ್ಯಾಯಾಧೀಶರಿಗೆ ಸುಪ್ರಿಂ ತರಾಟೆ

ಬೆಂಗಳೂರಿನ ಗೋರಿಪಾಳ್ಯವನ್ನು ಪಾಕಿಸ್ತಾನಕ್ಕೆ ಹೋಲಿಕೆ ಮಾಡಿದ್ದ ಹೈಕೋರ್ಟ್​ ನ್ಯಾಯಾಧೀಶ ವಿ ಶ್ರೀಶಾನಂದ ಅವರನ್ನು ಸುಪ್ರಿಂಕೋರ್ಟ್​ ತರಾಟೆಗೆ ತೆಗೆದುಕೊಂಡಿದೆ. ಹೈಕೋರ್ಟ್​ ನ್ಯಾಯಾಧೀಶ ವಿ ಶ್ರೀಶಾನಂದ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿತ್ತು.

ಬೆಂಗಳೂರು ಗೋರಿಪಾಳ್ಯ ಪಾಕಿಸ್ತಾನಕ್ಕೆ ಹೋಲಿಕೆ: ಹೈಕೋರ್ಟ್​ ನ್ಯಾಯಾಧೀಶರಿಗೆ ಸುಪ್ರಿಂ ತರಾಟೆ
ಸುಪ್ರೀಂಕೋರ್ಟ್​
Follow us
|

Updated on:Sep 25, 2024 | 1:02 PM

ಬೆಂಗಳೂರು, ಸೆಪ್ಟೆಂಬರ್​ 25: ಗೋರಿಪಾಳ್ಯವನ್ನು ಪಾಕಿಸ್ತಾನಕ್ಕೆ ಹೋಲಿಕೆ ಮಾಡಿದ್ದ ಹೈಕೋರ್ಟ್ (High Court)​ ನ್ಯಾಯಾಧೀಶ ವಿ ಶ್ರೀಶಾನಂದ (V Shrishand) ಅವರನ್ನು ಸುಪ್ರಿಂಕೋರ್ಟ್ (Supreme Court)​ ತರಾಟೆಗೆ ತೆಗೆದುಕೊಂಡಿದೆ. “ನೀವು ಭಾರತದ ಯಾವುದೇ ಭಾಗವನ್ನು “ಪಾಕಿಸ್ತಾನ” ಅಂತ ಕರೆಯುವಂತಿಲ್ಲ. ಇದು ದೇಶದ ಪ್ರಾದೇಶಿಕ ಸಮಗ್ರತೆಗೆ ವಿರುದ್ಧವಾಗಿದೆ. ನಿಮ್ಮ ಹೇಳಿಕೆಯನ್ನು ಸಮ್ಮತಿಸುವುದಿಲ್ಲ. ನಿಮ್ಮ ಕ್ಷಮೆಯನ್ನು ಸುಪ್ರೀಂಕೋರ್ಟ್ ಪುರಸ್ಕರಿಸಿದೆ” ಎಂದು ಸುಪ್ರೀಂಕೋರ್ಟ್​ ಹೇಳಿದೆ.

ಹೈಕೋರ್ಟ್​ ನ್ಯಾಯಾಧೀಶರು ಹೇಳಿದ್ದೇನು?

ಪ್ರಕರಣದ ವಿಚಾರಣೆಯೊಂದರ ವೇಳೆ, ‘‘ಮೈಸೂರು ರಸ್ತೆ ಮೇಲ್ಸೇತುವೆ ಬಳಿ ಹೋಗಿ ನೋಡಿ, ಪ್ರತಿ ಆಟೊ ರಿಕ್ಷಾದಲ್ಲಿ 10 ಮಂದಿ ಇರುತ್ತಾರೆ. ಅಲ್ಲಿ ಯಾವುದೂ ಅನ್ವಯವಾಗುವುದಿಲ್ಲ. ಯಾಕೆಂದರೆ ಕೆಆರ್​​ ಮಾರುಕಟ್ಟೆ ಮತ್ತು ಗೋರಿಪಾಳ್ಯವರೆಗೆ ಮೈಸೂರು ರೋಡ್ ಫ್ಲೈಓವರ್ ಪಾಕಿಸ್ತಾನದಲ್ಲಿದೆ, ಭಾರತದಲ್ಲಿಲ್ಲ. ಇದು ವಾಸ್ತವ. ನೀವು ಎಂಥವನೇ ಸ್ಟ್ರಿಕ್ಟ್ ಅಧಿಕಾರಿಗಳನ್ನು ಅಲ್ಲಿಗೆ ಹಾಕಿ, ಹಿಡಿದರೆ ನೋಡ್ತೀನಿ’’ ಎಂದು ನ್ಯಾಯಾಧೀಶರು ಹೇಳಿದ್ದರು.

ಇದನ್ನೂ ಓದಿ:  ‘ಸಂಜೆ 250 ಕೊಡು, ಇಲ್ಲಾಂದ್ರೆ ಶೆಡ್ಡಿಗ್ ಬಾ’, ಆಟೋ ಚಾಲಕರ ಸಮಸ್ಯೆಯನ್ನು ಎಳೆಎಳೆಯಾಗಿ ವಿವರಿಸಿದ ಕರ್ನಾಟಕ ಹೈಕೋರ್ಟ್​

ನ್ಯಾಯಾಧೀಶರು ಹೇಳಿಕೆ ನೀಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು. ಇದಕ್ಕೆ ವ್ಯಾಪಕ ಆಕ್ಷೇಪ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಸುಪ್ರೀಂಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡು, ವಿಚಾರಣೆ ನಡೆಸಿ, ಹೈಕೋರ್ಟ್​ ನ್ಯಾಯಾಧೀಶರನ್ನು ತರಾಟೆಗೆ ತೆಗೆದುಕೊಂಡಿತು.

ಸುಪ್ರೀಂಕೋರ್ಟ್​ ಸ್ವಯಂಪ್ರೇರಿತ ಪ್ರಕರಣ ಕೈಗೆತ್ತಿಕೊಳ್ಳುತ್ತಿದ್ದಂತೆ ನ್ಯಾಯಾಧೀಶ ಅವರು ವಿ ಶ್ರೀಶಾನಂದ ಕ್ಷಮೆಯಾಚಿಸಿದರು. ಸುಪ್ರೀಂಕೋರ್ಟ್​ ನ್ಯಾಯಾಧೀಶರ ಕ್ಷಮೆಯನ್ನು ಸ್ವೀಕರಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:19 pm, Wed, 25 September 24

ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್​ನಲ್ಲಿ ಆ್ಯಪಲ್ ಐಫೋನ್ ಆಫರ್
ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್​ನಲ್ಲಿ ಆ್ಯಪಲ್ ಐಫೋನ್ ಆಫರ್
ಎಲೆಕ್ಟ್ರಾನಿಕ್ ಸಿಟಿಯಲ್ಲಿ ಓಡಾಡುತ್ತ ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ
ಎಲೆಕ್ಟ್ರಾನಿಕ್ ಸಿಟಿಯಲ್ಲಿ ಓಡಾಡುತ್ತ ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ
ಕ್ಷಣಾರ್ಧದಲ್ಲೇ ಜಲ ಸಮಾಧಿಯಾದ ಎರಡಂತಸ್ತಿನ ಮನೆ
ಕ್ಷಣಾರ್ಧದಲ್ಲೇ ಜಲ ಸಮಾಧಿಯಾದ ಎರಡಂತಸ್ತಿನ ಮನೆ
ಕೋಲಾರದಲ್ಲಿ ಅನುಮಾನಾಸ್ಪದ ಸೂಟ್​ಕೇಸ್​ ಪತ್ತೆ, ಸ್ಥಳೀಯರಿಗೆ ಆತಂಕ
ಕೋಲಾರದಲ್ಲಿ ಅನುಮಾನಾಸ್ಪದ ಸೂಟ್​ಕೇಸ್​ ಪತ್ತೆ, ಸ್ಥಳೀಯರಿಗೆ ಆತಂಕ
ಯುವ ದಸರಾ ವೇದಿಕೆ ಮೇಲೆ ನಕ್ಕ ರುಕ್ಮಿಣಿ ವಸಂತ್; ವಿಡಿಯೋ ನೋಡಿ
ಯುವ ದಸರಾ ವೇದಿಕೆ ಮೇಲೆ ನಕ್ಕ ರುಕ್ಮಿಣಿ ವಸಂತ್; ವಿಡಿಯೋ ನೋಡಿ
Daily Devotional: ಯಾವ ಗ್ರಹ ಪೂಜಿಸಿದರೆ ಏನೇನು ಫಲ ಸಿಗುತ್ತೆ?
Daily Devotional: ಯಾವ ಗ್ರಹ ಪೂಜಿಸಿದರೆ ಏನೇನು ಫಲ ಸಿಗುತ್ತೆ?
Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು
Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು
ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
ರಸ್ತೆಯಲ್ಲಿ ಬಿದ್ದ ಮೀನುಗಳನ್ನು ಕವರ್​ನಲ್ಲಿ ತುಂಬಿಕೊಳ್ಳಲು ಮುಗಿಬಿದ್ದ ಜನ
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್