ಬೆಂಗಳೂರು, ಸೆಪ್ಟೆಂಬರ್ 25: ಗೋರಿಪಾಳ್ಯವನ್ನು ಪಾಕಿಸ್ತಾನಕ್ಕೆ ಹೋಲಿಕೆ ಮಾಡಿದ್ದ ಹೈಕೋರ್ಟ್ (High Court) ನ್ಯಾಯಾಧೀಶ ವಿ ಶ್ರೀಶಾನಂದ (V Shrishand) ಅವರನ್ನು ಸುಪ್ರಿಂಕೋರ್ಟ್ (Supreme Court) ತರಾಟೆಗೆ ತೆಗೆದುಕೊಂಡಿದೆ. “ನೀವು ಭಾರತದ ಯಾವುದೇ ಭಾಗವನ್ನು “ಪಾಕಿಸ್ತಾನ” ಅಂತ ಕರೆಯುವಂತಿಲ್ಲ. ಇದು ದೇಶದ ಪ್ರಾದೇಶಿಕ ಸಮಗ್ರತೆಗೆ ವಿರುದ್ಧವಾಗಿದೆ. ನಿಮ್ಮ ಹೇಳಿಕೆಯನ್ನು ಸಮ್ಮತಿಸುವುದಿಲ್ಲ. ನಿಮ್ಮ ಕ್ಷಮೆಯನ್ನು ಸುಪ್ರೀಂಕೋರ್ಟ್ ಪುರಸ್ಕರಿಸಿದೆ” ಎಂದು ಸುಪ್ರೀಂಕೋರ್ಟ್ ಹೇಳಿದೆ.
ಪ್ರಕರಣದ ವಿಚಾರಣೆಯೊಂದರ ವೇಳೆ, ‘‘ಮೈಸೂರು ರಸ್ತೆ ಮೇಲ್ಸೇತುವೆ ಬಳಿ ಹೋಗಿ ನೋಡಿ, ಪ್ರತಿ ಆಟೊ ರಿಕ್ಷಾದಲ್ಲಿ 10 ಮಂದಿ ಇರುತ್ತಾರೆ. ಅಲ್ಲಿ ಯಾವುದೂ ಅನ್ವಯವಾಗುವುದಿಲ್ಲ. ಯಾಕೆಂದರೆ ಕೆಆರ್ ಮಾರುಕಟ್ಟೆ ಮತ್ತು ಗೋರಿಪಾಳ್ಯವರೆಗೆ ಮೈಸೂರು ರೋಡ್ ಫ್ಲೈಓವರ್ ಪಾಕಿಸ್ತಾನದಲ್ಲಿದೆ, ಭಾರತದಲ್ಲಿಲ್ಲ. ಇದು ವಾಸ್ತವ. ನೀವು ಎಂಥವನೇ ಸ್ಟ್ರಿಕ್ಟ್ ಅಧಿಕಾರಿಗಳನ್ನು ಅಲ್ಲಿಗೆ ಹಾಕಿ, ಹಿಡಿದರೆ ನೋಡ್ತೀನಿ’’ ಎಂದು ನ್ಯಾಯಾಧೀಶರು ಹೇಳಿದ್ದರು.
ಇದನ್ನೂ ಓದಿ: ‘ಸಂಜೆ 250 ಕೊಡು, ಇಲ್ಲಾಂದ್ರೆ ಶೆಡ್ಡಿಗ್ ಬಾ’, ಆಟೋ ಚಾಲಕರ ಸಮಸ್ಯೆಯನ್ನು ಎಳೆಎಳೆಯಾಗಿ ವಿವರಿಸಿದ ಕರ್ನಾಟಕ ಹೈಕೋರ್ಟ್
ನ್ಯಾಯಾಧೀಶರು ಹೇಳಿಕೆ ನೀಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದಕ್ಕೆ ವ್ಯಾಪಕ ಆಕ್ಷೇಪ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಸುಪ್ರೀಂಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡು, ವಿಚಾರಣೆ ನಡೆಸಿ, ಹೈಕೋರ್ಟ್ ನ್ಯಾಯಾಧೀಶರನ್ನು ತರಾಟೆಗೆ ತೆಗೆದುಕೊಂಡಿತು.
ಸುಪ್ರೀಂಕೋರ್ಟ್ ಸ್ವಯಂಪ್ರೇರಿತ ಪ್ರಕರಣ ಕೈಗೆತ್ತಿಕೊಳ್ಳುತ್ತಿದ್ದಂತೆ ನ್ಯಾಯಾಧೀಶ ಅವರು ವಿ ಶ್ರೀಶಾನಂದ ಕ್ಷಮೆಯಾಚಿಸಿದರು. ಸುಪ್ರೀಂಕೋರ್ಟ್ ನ್ಯಾಯಾಧೀಶರ ಕ್ಷಮೆಯನ್ನು ಸ್ವೀಕರಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:19 pm, Wed, 25 September 24