
ಬೆಂಗಳೂರು, ಜನವರಿ 12: ದ್ವೀತಿಯ ಪಿಯುಸಿ (2nd PUC) ವಾರ್ಷಿಕ ಪರೀಕ್ಷೆಗೆ ದಿನಗಣನೆ ಶುರುವಾಗಿದೆ. ಹೀಗಾಗಿ ಕರ್ನಾಟಕದಾದ್ಯಂತ ಪ್ರಿಪರೇಟರಿ ಎಕ್ಸಾಂ ನಡೆಸಲಾಗುತ್ತಿದೆ. ಪರೀಕ್ಷೆ ಆರಂಭ ಬೆನ್ನಲ್ಲೇ ಪ್ರಶ್ನೆ ಪತ್ರಿಕೆ ಲೀಕ್ ಹಾವಳಿ ಕೂಡ ಜೋರಾಗಿದೆ. ಶಿಕ್ಷಣ ಇಲಾಖೆ ವೈಫಲ್ಯವನ್ನೇ ಖದೀಮರು ಬಂಡವಾಳ ಮಾಡಿಕೊಂಡಿದ್ದಾರೆ. ಕೆಎಸ್ಇಎಬಿ (KSEAB) ತಯಾರು ಮಾಡಿದ ಪ್ರಶ್ನೆ ಪತ್ರಿಕೆ ರೀತಿಯೇ ಹೋಲುವಂತೆ ಪ್ರಶ್ನೆಪತ್ರಿಕೆ ತಯಾರಿಸಿದ್ದಾರೆ. ಆ ಮೂಲಕ ನಕಲಿ ಪ್ರಶ್ನೆಪತ್ರಿಕೆ ಹರಿಬಿಟ್ಟು ಇದೇ ಒರಿಜಿನಲ್ ಅಂತ ಬಿಂಬಿಸಿದ್ದಾರೆ. ಸದ್ಯ ಈ ಬಗ್ಗೆ ಬೆಂಗಳೂರು ನಾರ್ತ್ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪಿಯು ಮಂಡಳಿಯ ಜಂಟಿ ನಿರ್ದೇಶಕರು NiranjanShetty@NiranjanShetty9581 ಯೂಟ್ಯೂಬ್ ಚಾನೆಲ್ ವಿರುದ್ಧ ಬೆಂಗಳೂರು ನಾರ್ತ್ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ. ನಕಲಿ ಪ್ರಶ್ನೆಪತ್ರಿಕೆ ಹರಿಬಿಟ್ಟು ಇದು ಒರಿಜಿನಲ್, ಇದರ ಪ್ರತಿ ಬೇಕಾದಲ್ಲಿ ಫಾಲೋ, ಸಬ್ಸ್ಕ್ರೈಬ್ ಮಾಡಿ ಅಂತ ಲಿಂಕ್ ಶೇರ್ ಮಾಡಿದ್ದಾರೆ. ಕೇವಲ ಯೂಟ್ಯೂಬ್ ಸಬ್ಸ್ಕ್ರೈಬ್ ಗೋಸ್ಕರ ಪಿಯು ಪ್ರಶ್ನೆಪತ್ರಿಕೆ ಸೋರಿಕೆ ಆಗಿದೆ ಅಂತ ಬಿಂಬಿಸಿದ್ದಾರೆ. ಈ ರೀತಿ ಸುಳ್ಳು ಸುದ್ದಿ ಹರಡಿ ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡಲಾಗಿದೆ.
ದ್ವಿತೀಯ ಪಿಯು ಪ್ರಿಪರೇಟರಿ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕ ಭರತ್. ಎಸ್ ಪ್ರತಿಕ್ರಿಯಿಸಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆಯಲ್ಲಿ ಯಾರು ಲೀಕ್ ಮಾಡಿದ್ದಾರೆಂದು ಗೊತ್ತಾಗಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: SSLC ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್: ಮುಖ್ಯೋಪಾಧ್ಯಾಯರು ಸೇರಿ 8 ಮಂದಿ ಅರೆಸ್ಟ್
ಕೆಲವೊಂದು ಹಳೆಯ ಪ್ರಶ್ನೆ ಪತ್ರಿಕೆಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಫೇಕಾಗಿ ಲೀಕ್ ಮಾಡುತ್ತಿದ್ದಾರೆ. ಅವರ ಬಗ್ಗೆಯೂ ಹದ್ದಿನ ಕಣ್ಣಿಟ್ಟಿದ್ದೇವೆ. ಪೋಷಕರಿಗೆ ಆತಂಕ ಬೇಡ, ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ. ತನಿಖೆ ನಡೆಯುತ್ತಿರುವ ಹಿನ್ನೆಲೆ ನಾವು ಏನೂ ಮಾತನಾಡಲ್ಲ ಎಂದಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:31 pm, Mon, 12 January 26