ಕೋಮು ವೈಷಮ್ಯ ಆರೋಪ; ತೇಜಸ್ವಿ ಸೂರ್ಯ ಹಾಗೂ ಮೂವರು ಶಾಸಕರ ವಿರುದ್ಧ ಜೆಡಿಎಸ್​ ಯುವ ನಾಯಕಿಯಿಂದ ದೂರು

Bed Blocking Scam: ಬೆಡ್​ ಬ್ಲಾಕಿಂಗ್ ದಂಧೆಯನ್ನು ಹೊರಗೆಳೆಯುವ ವೇಳೆ ಒಂದು ಧರ್ಮದ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಆ ಮೂಲಕ ಕೋಮು ವೈಷಮ್ಯ ಬಿತ್ತುವ ಕೆಲಸವನ್ನು ಮಾಡಿದ್ದಾರೆ ಎಂದು ದೂರಲಾಗಿದೆ.

ಕೋಮು ವೈಷಮ್ಯ ಆರೋಪ; ತೇಜಸ್ವಿ ಸೂರ್ಯ ಹಾಗೂ ಮೂವರು ಶಾಸಕರ ವಿರುದ್ಧ ಜೆಡಿಎಸ್​ ಯುವ ನಾಯಕಿಯಿಂದ ದೂರು
ಸಂಸದ ತೇಜಸ್ವಿ ಸೂರ್ಯ
Follow us
Skanda
|

Updated on: May 07, 2021 | 7:04 AM

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೊನಾ ಸೋಂಕಿತರಿಗೆ ಬೆಡ್​ ಸಿಗದಿರುವುದಕ್ಕೆ, ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರೆಯದೇ ಇರುವುದಕ್ಕೆ ಬೆಡ್ ಬ್ಲಾಕಿಂಗ್ ದಂಧೆಯೇ ಕಾರಣ ಎಂದು ಭಾರೀ ಅಕ್ರಮವನ್ನು ಹೊರಗೆಳೆದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಸತೀಶ್ ರೆಡ್ಡಿ, ರವಿ ಸುಬ್ರಹ್ಮಣ್ಯ, ಉದಯ್ ಗರುಡಾಚಾರ್ ವಿರುದ್ಧ ದೂರು ದಾಖಲಾಗಿದೆ. ಅಕ್ರಮಕ್ಕೆ ಸಂಬಂಧಿಸದಂತೆ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಮಾತನಾಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಪಕ್ಷದ ಸ್ಟೇಟ್ ಕಮಿಟಿ ಅಬ್ಸರ್ವರ್ ನಜ್ಮಾ ನಜೀರ್ ಭಾನು ಎಂಬುವವರು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ದೂರು ನೀಡಿದ್ದಾರೆ.

ಬೆಡ್​ ಬ್ಲಾಕಿಂಗ್ ದಂಧೆಯನ್ನು ಹೊರಗೆಳೆಯುವ ವೇಳೆ ಒಂದು ಧರ್ಮದ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಆ ಮೂಲಕ ಕೋಮು ವೈಷಮ್ಯ ಬಿತ್ತುವ ಕೆಲಸವನ್ನು ಮಾಡಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ, ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ, ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್ ಇವರೆಲ್ಲರೂ ಬಿಬಿಎಂಪಿ ವಾರ್ ರೂಮ್ ಸಿಬ್ಬಂದಿಗಳ ವಿರುದ್ಧ ಕಿಡಿಕಾರಿದ್ದರು. ಆದರೆ, ಆ ಸಂದರ್ಭದಲ್ಲಿ ಒಂದು ಸಮುದಾಯಕ್ಕೆ ಸೇರಿದ ವ್ಯಕ್ತಿಗಳ ವಿರುದ್ಧ ಮಾತನಾಡಿರುವುದು ಆಕ್ಷೇಪಾರ್ಹ. ಹೀಗಾಗಿ ಈ ಎಲ್ಲರ ವಿರುದ್ಧವೂ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದೂರಿನ ಮೂಲಕ ಆಗ್ರಹಿಸಿದ್ದಾರೆ.

BBMP BED BLOCKING COMPLAINT AGAINST BJP LEADERS

ದೂರಿನ ಪ್ರತಿ

ಶಾಸಕ ಸತೀಶ್ ರೆಡ್ಡಿ ಸ್ಪಷ್ಟನೆ: ‘ವಿಚಾರಣೆಯ ದಾರಿ ತಪ್ಪಿಸಲು ನನ್ನ ಹೆಸರನ್ನು ಬೆಡ್ ಬ್ಲಾಕಿಂಗ್​ ಹಗರಣದಲ್ಲಿ ತರಲಾಗಿದೆ’ ಬೆಡ್ ಬ್ಲಾಕಿಂಗ್ ಹಗರಣದ ಆರೋಪ ತಮಗೇ ತಿರುಗುಬಾಣವಾಗುತ್ತಿರುವ ಕುರಿತು ಶಾಸಕ ಸತೀಶ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಕೊವಿಡ್ ವಿರುದ್ಧದ ಹೋರಾಟದಲ್ಲಿ ಏಜೆನ್ಸಿಗಳನ್ನು ನೇಮಿಸಿದ್ದ ಓರ್ವ ಐಎಎಸ್ ಅಧಿಕಾರಿ ನನ್ನ ಬಗ್ಗೆ ಸುದ್ದಿ ಹಬ್ಬಿಸುತ್ತಿದ್ದಾರೆ. ಈಗ ಬೆಡ್ ಬ್ಲಾಕಿಂಗ್ ಹಗರಣದಲ್ಲಿ ತನ್ನ ಹೆಸರು ಬಯಲಾಗುತ್ತದೆ ಎಂದು ನನ್ನ ಹೆಸರನ್ನು ಈ ಪ್ರಕರಣದಲ್ಲಿ ತರುವ ಕುತಂತ್ರ ಮಾಡುತ್ತಿದ್ದಾರೆ. ತಾವು ಸಿಕ್ಕಿಬೀಳಬಾರದು ಎಂದು ನನ್ನ ಹೆಸರು ಹೇಳಿದ್ದಾರೆ. ಈ ಮೂಲಕ ಪ್ರಕರಣದ ದಾರಿ ತಪ್ಪಿಸಲು ಪ್ರಯತ್ನಿಸಿದ್ದಾರೆ ಎಂದು ಶಾಸಕ ಸತೀಶ್ ರೆಡ್ಡಿ ಆಪಾದಿಸಿದ್ದಾರೆ.

ಬೆಡ್ ಬ್ಲಾಕಿಂಗ್ ಹಗರಣದ ಎಲ್ಲಾ ದಾಖಲೆಗಳನ್ನು ಕಮಿಷನರ್ ಹಾಗೂ ಮುಖ್ಯಮಂತ್ರಿಗಳಿಗೆ ನೀಡಿದ್ದೇವೆ. ನಾನು ಬೆಡ್ ಬ್ಲಾಕಿಂಗ್ ಮಾಡಿರುವುದಕ್ಕೆ ದಾಖಲೆಗಳಿದ್ದಲ್ಲಿ ಬಹಿರಂಗಪಡಿಸಿ ಸಾಬೀತು ಮಾಡಲಿ ಎಂದು ಸವಾಲು ಹಾಕಿದ್ದಾರೆ. ಕಾಂಗ್ರೆಸ್ ಟ್ವೀಟ್ ಮಾಡಿದ ವಿಚಾರವಾಗಿಯೂ ಪ್ರತಿಕ್ರಿಯೆ ನೀಡಿದ ಶಾಸಕ ಸತೀಶ್ ರೆಡ್ಡಿ, ಬೆಡ್ ಬ್ಲಾಕಿಂಗ್ ದಂದೆಯನ್ನು ಬೆಳಕಿಗೆ ತಂದಾಗ ಕೆಪಿಸಿಸಿ ಅಧ್ಯಕ್ಷರು ಸೇರಿ ಹಲವು ನಾಯಕರು ಅಭಿನಂದನೆ ಮಾಡಿದ್ದರು. ನಾವು ಆಗಲೂ ಯಾರ ಬಗ್ಗೆಯೂ ಸಹ ಮಾತನಾಡಿಲ್ಲ. ಈಗಲೂ ಅಷ್ಟೇ ಯಾರ ಬಗ್ಗೆಯೂ ನಾವು ಮಾತನಾಡುವುದಿಲ್ಲ. ವಿರೋಧ ಪಕ್ಷದ ಕೆಲಸ ನಾವೇ ಮಾಡ್ತಾ ಇದ್ದೀವಿ ಅಂತ ಅವರಿಗೆ ಅನಿಸಿದೆ. ಬೆಡ್ ಬ್ಲಾಕಿಂಗ್ ಹಗರಣದ ಕುರಿತು ಮುಖ್ಯಮಂತ್ರಿಗಳಿಗೆ ಹಾಗೂ ಸಿಸಿಬಿಯವರಿಗೆ ಎಲ್ಲಾ ಮಾಹಿತಿ ಇದೆ. ಹೀಗಾಗಿ ತಪ್ಪಿತಸ್ಥರಿಗೆ ಶಿಕ್ಷೆ ತಪ್ಪಿದ್ದಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಬಂಧಿತ ನೇತ್ರಾವತಿ ಈವೆಂಟ್ ಬ್ಯುಸಿನೆಸ್, ಸಾಮಾಜಿಕ ಕಾರ್ಯಕರ್ತೆ; ಯುವಕ ರೋಹಿತ್ ಆಕೆಯ ಬಾಲ್ಯದ ಗೆಳೆಯನ ಮಗ: ಡಿಸಿಪಿ ಪಾಂಡೆ

ಬೆಡ್​ ಬ್ಲಾಕಿಂಗ್ ದಂಧೆ: ತನಿಖಾ ಪ್ರಗತಿ ವರದಿ ಸಲ್ಲಿಸಲು ಹೈಕೋರ್ಟ್​ ಸೂಚನೆ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು