ಸರ್ಕಾರದ ನಿಯಮ ಉಲ್ಲಂಘಿಸಿ ದೇಗುಲದಲ್ಲಿ ಪೂಜೆ; ಬಿ.ವೈ.ವಿಜಯೇಂದ್ರ ವಿರುದ್ಧ ಮೈಸೂರು ಜಿಲ್ಲಾಧಿಕಾರಿಗೆ ದೂರು

ಬಿ.ವೈ. ವಿಜಯೇಂದ್ರ ಕುಟುಂಬ ಸಮೇತ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಶ್ರೀಕಂಠೇಶ್ವರ ದೇಗುಲದಲ್ಲಿ ವಿಶೇಷ ಪೂಜೆ, ಹೋಮ ಹವನ ನಡೆಸಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪರ ಮಗನಿಂದಲೇ ಕೊರೊನಾ ಲಾಕ್​ಡೌನ್ ನಿಯಮ ಉಲ್ಲಂಘನೆ ಆದ ಬಗ್ಗೆ ಆಕ್ಷೇಪ ವ್ಯಕ್ತವಾಗಿತ್ತು.

ಸರ್ಕಾರದ ನಿಯಮ ಉಲ್ಲಂಘಿಸಿ ದೇಗುಲದಲ್ಲಿ ಪೂಜೆ; ಬಿ.ವೈ.ವಿಜಯೇಂದ್ರ ವಿರುದ್ಧ ಮೈಸೂರು ಜಿಲ್ಲಾಧಿಕಾರಿಗೆ ದೂರು
ಬಿ.ವೈ ವಿಜಯೇಂದ್ರ (ಸಂಗ್ರಹ ಚಿತ್ರ)
Edited By:

Updated on: Aug 21, 2021 | 10:09 AM

ಮೈಸೂರು: ಕೊರೊನಾ ಹಾಗೂ ಲಾಕ್​ಡೌನ್ ನಡುವೆಯೂ ನಂಜನಗೂಡು ದೇಗುಲದಲ್ಲಿ ಬಿ.ವೈ. ವಿಜಯೇಂದ್ರ ಪೂಜೆ ಮಾಡಿಸಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ವಿಜಯೇಂದ್ರ ವಿರುದ್ಧ ಮೈಸೂರು ಜಿಲ್ಲಾಧಿಕಾರಿಗೆ ದೂರು ನೀಡಲಾಗಿದೆ. ಜಿಲ್ಲಾಧಿಕಾರಿಗಳಿಗೆ ಮೈಸೂರು ಜಿಲ್ಲಾ ಕಾಂಗ್ರೆಸ್​ ಘಟಕ ಈ ಬಗ್ಗೆ ದೂರು ನೀಡಿದೆ. ವಿಜಯೇಂದ್ರ ವಿರುದ್ಧ ಎಫ್​ಐಆರ್ ದಾಖಲಿಸುವಂತೆ ದೂರಿನಲ್ಲಿ ತಿಳಿಸಲಾಗಿದೆ.

ಬಿ.ವೈ. ವಿಜಯೇಂದ್ರ ಕುಟುಂಬ ಸಮೇತ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಶ್ರೀಕಂಠೇಶ್ವರ ದೇಗುಲದಲ್ಲಿ ವಿಶೇಷ ಪೂಜೆ, ಹೋಮ ಹವನ ನಡೆಸಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪರ ಮಗನಿಂದಲೇ ಕೊರೊನಾ ಲಾಕ್​ಡೌನ್ ನಿಯಮ ಉಲ್ಲಂಘನೆ ಆದ ಬಗ್ಗೆ ಆಕ್ಷೇಪ ವ್ಯಕ್ತವಾಗಿತ್ತು.

ಸರ್ಕಾರದ ನಿಯಮ ಉಲ್ಲಂಘಿಸಿದ್ದಕ್ಕೆ ಕೇಸ್​ ದಾಖಲಿಸಬೇಕು. ಎಫ್​ಐಆರ್ ದಾಖಲಿಸಲು ಪೊಲೀಸರಿಗೆ ಸೂಚನೆ ನೀಡಬೇಕು. ದೇಗುಲದ ಆಡಳಿತ ಮಂಡಳಿ ಹಾಗೂ ಸರ್ಕಾರಿ ಸಿಬ್ಬಂದಿ ಮತ್ತು ಪುರೋಹಿತ ವರ್ಗವನ್ನು ಸಸ್ಪೆಂಡ್ ಮಾಡಿ ಎಫ್​ಐಆರ್ ದಾಖಲಿಸಬೇಕು ಎಂದು ಒತ್ತಾಯಿಸಿ ಮೈಸೂರು ಜಿಲ್ಲಾ ಕಾಂಗ್ರೆಸ್‌ ಘಟಕದಿಂದ ಜಿಲ್ಲಾಧಿಕಾರಿಗೆ ದೂರು ದಾಖಲಾಗಿದೆ.

ಡಿಸಾಸ್ಟರ್ ಮ್ಯಾನೇಜ್ಮೆಂಟ್ ಆಕ್ಟ್ 2005, ಸೆಕ್ಷನ್ 51 ಸ್ಪಷ್ಟ ಉಲ್ಲಂಘನೆ, ಕರ್ನಾಟಕ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆ 2020ರ ಉಲ್ಲಂಘನೆ, ಸರ್ಕಾರದ ಅಧಿಕಾರಿಗಳು ಹೊರಡಿಸುವ ಆದೇಶಕ್ಕೆ ವಿರುದ್ಧವಾಗಿ ನಡೆದುಕೊಳ್ಳುವುದು ಐಪಿಸಿ 188ರ ಉಲ್ಲಂಘನೆ ಆಧಾರದಲ್ಲಿ ಎಫ್​ಐಆರ್ ದಾಖಲಿಸುವಂತೆ ಹೇಳಲಾಗಿದೆ.

ಮತ್ತೊಂದೆಡೆ, ಕೊರೊನಾ ಲಾಕ್​ಡೌನ್ ಮಾರ್ಗಸೂಚಿ ಉಲ್ಲಂಘಿಸಿ ದೇವಾಲಯ ಪ್ರವೇಶ ಮಾಡಿರುವುದಕ್ಕೆ ವಿಜಯೇಂದ್ರ ವಿರುದ್ಧ ಕ್ರಮಕ್ಕೆ ನಿರ್ದೇಶನ ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆಯಾಗಿದೆ. ವಕೀಲ ಜಿ.ಆರ್. ಮೋಹನ್​​ರಿಂದ ಮೆಮೋ ಸಲ್ಲಿಕೆಯಾಗಿದೆ. ವಿಜಯೇಂದ್ರ ವಿರುದ್ಧ ಕ್ರಮಕ್ಕೆ ನಿರ್ದೇಶನ ಕೋರಿ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಲಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಉತ್ಪಾದಿಸುವ ಆಮ್ಲಜನಕವನ್ನು ರಾಜ್ಯದಲ್ಲೇ ಬಳಸಲು ಕೇಂದ್ರದ ತಾತ್ವಿಕ ಒಪ್ಪಿಗೆ: ಜಗದೀಶ್‌ ಶೆಟ್ಟರ್‌

ಬ್ಲ್ಯಾಕ್‌ ಫಂಗಸ್‌ಗೆ ರಾಜ್ಯದ ಆರು ಕಡೆ ಉಚಿತ ಚಿಕಿತ್ಸೆ, ಈಗಾಗಲೇ 1000 ವೈಲ್ಸ್‌ ಔಷಧಿ ಬಂದಿದೆ: ಅಶ್ವತ್ಥ ನಾರಾಯಣ

Published On - 10:46 pm, Wed, 19 May 21