ಮಹಿಳಾ, ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಭ್ರಷ್ಟಾಚಾರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಲೋಕಾಯುಕ್ತಕ್ಕೆ ದೂರು

| Updated By: ಗಣಪತಿ ಶರ್ಮ

Updated on: Nov 17, 2023 | 5:14 PM

ಗುತ್ತಿಗೆದಾರರಿಂದ ಅಂಗನವಾಡಿಗಳಿಗೆ ಪೂರೈಕೆಯಾಗುವ ಆಹಾರ ಗುಣಮಟ್ಟ ಇರುವುದಿಲ್ಲ. ಹೀಗಾಗಿ ಸ್ಥಳೀಯ ಸೇವಾ ಸಂಘಗಳೇ ಆಹಾರ ಪೂರೈಕೆ ಮಾಡುವಂತೆ ಹೈ ಕೋರ್ಟ್ ಆದೇಶ ನೀಡಿತ್ತು. ಆದರೆ, ಆದೇಶ ಉಲ್ಲಂಘನೆ ಮಾಡಿ ಕಪ್ಪು ಪಟ್ಟಿಯಲ್ಲಿರುವ ಪೂರೈಕೆ ಕಂಪನಿಗೆ ಟೆಂಡರ್ ನೀಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮಹಿಳಾ, ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಭ್ರಷ್ಟಾಚಾರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಲೋಕಾಯುಕ್ತಕ್ಕೆ ದೂರು
ಲಕ್ಷ್ಮೀ ಹೆಬ್ಬಾಳ್ಕರ್
Follow us on

ಬೆಂಗಳೂರು, ನವೆಂಬರ್ 17: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ (Women and Child Welfare Department) ಭ್ರಷ್ಟಾಚಾರ (Corruption) ನಡೆದಿದೆ ಎಂಬ ಆರೋಪ ವ್ಯಕ್ತವಾಗಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ವಿರುದ್ಧ ಲೋಕಾಯುಕ್ತ ಸಂಸ್ಥೆಗೆ ದೂರು ನೀಡಲಾಗಿದೆ. ಮಕ್ಕಳ ಪೌಷ್ಟಿಕ ಆಹಾರ ಸರಬರಾಜಿನಲ್ಲಿ ಅಕ್ರಮ ನಡೆದಿದೆ. 600 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಭ್ರಷ್ಟಾಚಾರವಾಗಿದೆ ಎಂದು ವಕೀಲ ನಟರಾಜ ಶರ್ಮಾ ಲೋಕಾಯಕ್ತಕ್ಕೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕಪ್ಪುಪಟ್ಟಿಯಲ್ಲಿರುವ ಕ್ರಿಸ್ಟಿ ಫ್ರೈಡ್ ಗ್ರಾಂ ಕಂಪನಿಗೆ ಟೆಂಡರ್ ನೀಡಲಾಗಿದೆ ಎಂದು ಆರೋಪಿಸಿರುವ ನಟರಾಜ ಶರ್ಮಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರ. ಕಾರ್ಯದರ್ಶಿ ಜೆ.ಸಿ.ಪ್ರಕಾಶ್, ಇಲಾಖೆಯ ನಿರ್ದೇಶಕರ ವಿರುದ್ಧವೂ ಲೋಕಾಯುಕ್ತ ಸಂಸ್ಥೆಗೆ ದೂರು ನೀಡಿದ್ದಾರೆ.

ಗುತ್ತಿಗೆದಾರರಿಂದ ಅಂಗನವಾಡಿಗಳಿಗೆ ಪೂರೈಕೆಯಾಗುವ ಆಹಾರ ಗುಣಮಟ್ಟ ಇರುವುದಿಲ್ಲ. ಹೀಗಾಗಿ ಸ್ಥಳೀಯ ಸೇವಾ ಸಂಘಗಳೇ ಆಹಾರ ಪೂರೈಕೆ ಮಾಡುವಂತೆ ಹೈ ಕೋರ್ಟ್ ಆದೇಶ ನೀಡಿತ್ತು. ಆದರೆ, ಆದೇಶ ಉಲ್ಲಂಘನೆ ಮಾಡಿ ಕಪ್ಪು ಪಟ್ಟಿಯಲ್ಲಿರುವ ಪೂರೈಕೆ ಕಂಪನಿಗೆ ಟೆಂಡರ್ ನೀಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಉಡುಪಿ ಸಾಮೂಹಿಕ ಹತ್ಯೆ; ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ರಿಂದ ಕುಟುಂಬಕ್ಕೆ ಸಾಂತ್ವನ

ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಹಾಗೂ ಭ್ರಷ್ಟಾಚಾರ ಆರೋಪ ಮಾಡಿದ್ದ ಕಾಂಗ್ರೆಸ್,​ ಅಧಿಕಾರಕ್ಕೆ ಬಂದ ಬಳಿಕ ಭ್ರಷ್ಟಾಚಾರ ಮಿತಿ ಮೀರಿದೆ ಎಂದು ಪ್ರತಿಪಕ್ಷಗಳು ಕಳೆದ ಕೆಲವು ದಿನಗಳಿಂದ ಆರೋಪಿಸುತ್ತಲೇ ಬಂದಿವೆ. ಇದೀಗ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಲೋಕಾಯುಕ್ತಕ್ಕೆ ದೂರು ದಾಖಲಾಗಿರುವುದು ಪ್ರತಿಪಕ್ಷಗಳಿಗೆ ಹೊಸ ಅಸ್ತ್ರ ಸಿಕ್ಕಂತಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ