AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುನಿರತ್ನ ವಿರುದ್ಧ ಮೂರು ತಿಂಗಳ ಹಿಂದೆಯೇ ದಾಖಲಾಗಿತ್ತು ದೂರು: ಕೇಸ್ ಕೊಟ್ಟು ಹಿಂದೆ ಸರಿದಿದ್ದ ದೂರುದಾರೆ!

ಅತ್ಯಾಚಾರ ಪ್ರಕರಣದಲ್ಲಿ ಎಸ್​ಐಟಿ ಕಸ್ಟಡಿಯಲ್ಲಿರುವ ಶಾಸಕ ಮುನಿರತ್ನರನ್ನು ನಿರಂತರವಾಗಿ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಆದರೆ, ಮುನಿರತ್ನ ವಿರುದ್ಧ ಮೂರು ತಿಂಗಳ ಹಿಂದೆಯೇ ದೂರು ದಾಖಲಾಗಿದ್ದರೂ ಎಫ್​ಐಆರ್ ದಾಖಲಾಗಿರಲಿಲ್ಲ ಎನ್ನಲಾಗಿದೆ. ಅಷ್ಟಲ್ಲದೇ, ದಾರುದಾರೆ ಕೂಡ ವಿಚಾರಣೆಗೆ ಹಾಜರಾಗಿರಲಿಲ್ಲ ಎಂಬ ವಿಚಾರ ಬೆಳಕಿಗೆ ಬಂದಿದ್ದು, ಸಾಕಷ್ಟು ಪ್ರಶ್ನೆಗಳಿಗೆ ಎಡೆಮಾಡಿಕೊಟ್ಟಿದೆ

ಮುನಿರತ್ನ ವಿರುದ್ಧ ಮೂರು ತಿಂಗಳ ಹಿಂದೆಯೇ ದಾಖಲಾಗಿತ್ತು ದೂರು: ಕೇಸ್ ಕೊಟ್ಟು ಹಿಂದೆ ಸರಿದಿದ್ದ ದೂರುದಾರೆ!
ಮುನಿರತ್ನ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Oct 02, 2024 | 7:31 AM

Share

ಬೆಂಗಳೂರು, ಅಕ್ಟೋಬರ್ 2: ಒಂದಲ್ಲ ಎರಡಲ್ಲ, ಮೂರು ಪ್ರಕರಣಗಳಲ್ಲಿ ಆರೋಪಿಯಾಗಿರುವ ಆರ್​ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ ಈಗ ಎಸ್​ಐಟಿ ಕಸ್ಟಡಿಯಲ್ಲಿದ್ದಾರೆ. ಅತ್ಯಾಚಾರ ಪ್ರಕರಣ ಸಂಬಂಧ ಎಸ್​ಐಟಿ ಅಧಿಕಾರಿಗಳ ವಿಚಾರಣೆ ಎದುರಿಸುತ್ತಿದ್ದಾರೆ. ಸಂತ್ರಸ್ತೆಯ ಆರೋಪಗಳೆಲ್ಲ ಸುಳ್ಳು ಅಂತ ತಮ್ಮನ್ನು ತಾವು ಸಮರ್ಥಿಸಿಕೊಳ್ಳುತ್ತಿದ್ದಾರೆ. ಆದರೆ, ಮುನಿರತ್ನ ವಿರುದ್ಧ ಮೂರು ತಿಂಗಳ ಹಿಂದೆಯೇ ಅತ್ಯಾಚಾರ ಆರೋಪದ ಬಗ್ಗೆ ದೂರು ನೀಡಲಾಗಿತ್ತು ಎಂಬ ವಿಚಾರ ಬಯಲಾಗಿದೆ.

ಶಾಸಕ ಮುನಿರತ್ನ ವಿರುದ್ದ ಜೂನ್​​ನಲ್ಲೇ ದೂರು ದಾಖಲಾಗಿತ್ತು. ಜೂನ್​​ನಲ್ಲಿಯೇ ಶಾಸಕ ಮುನಿರತ್ನ ವಿರುದ್ಧ ಸಂತ್ರಸ್ತ ಮಹಿಳೆ ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರನ್ನು ಅರ್ಜಿಯಾಗಿ ಪಡೆದುಕೊಂಡಿದ್ದ ಪೊಲೀಸರು ಅರ್ಜಿ ಸಂಬಂಧ ವಿಚಾರಣೆಗೆ ಸಾಕ್ಷಿ ನೀಡುವಂತೆ ದೂರುದಾರೆಗೆ ತಿಳಿಸಿದ್ದರು. ಈ ಸಂಬಂಧ ದೂರುದಾರೆಗೆ ನೋಟಿಸ್ ನೀಡಲಾಗಿತ್ತು. ಆದ್ರೆ ದೂರುದಾರೆ ಪೊಲೀಸರ ಮುಂದೆಯೇ ಹಾಜಾರಾಗಿರಲಿಲ್ಲ. ಹೀಗಾಗಿ ಪೊಲೀಸರು ವಿಚಾರಣೆಯನ್ನು ಹಾಗೇಯೇ ಬಿಟ್ಟಿದ್ದರು. ಈಗ ಮತ್ತೆ ಅದೇ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರಿಂದ ಕೇಸ್ ದಾಖಲು ಮಾಡಿ ಅರೆಸ್ಟ್ ಮಾಡಲಾಗಿತ್ತು. ಆದರೆ ಈ ವಿಚಾರವಾಗಿ ಕೆಲ‌ ಪ್ರಶ್ನೆಗಳಿಗೆ ಉತ್ತರ ಸಿಗುತ್ತಿಲ್ಲ.

ಇದನ್ನೂ ಓದಿ: ಜಾತಿ ನಿಂದನೆ, ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ಎಸ್​ಐಟಿ ದಾಳಿ

ಸಂತ್ರಸ್ತೆ ಈ ಹಿಂದೆ ದೂರು ಕೊಟ್ಟಿದ್ದರೂ ಆಗ ಪೊಲೀಸರು ಎಫ್​ಐಆರ್ ದಾಖಲಿಸಿರಲಿಲ್ಲ. ಹೀಗಾಗಿ ದೂರು‌ ಕೊಟ್ಟರೂ ಯಾಕೆ ಪೊಲೀಸರು ಎಫ್​ಐಆರ್ ದಾಖಲಿಸಿಲ್ಲ ಎಂಬ ಪ್ರಶ್ನೆ ಮೂಡಿದೆ. ಅಷ್ಟಲ್ಲದೇ, ಮಹಿಳೆ ಮೂರು ತಿಂಗಳ ಹಿಂದೆ ದೂರು ನೀಡಿ ಹಿಂದೆ ಸರಿದಿದ್ದು ಯಾಕೆ ಎಂಬ ಪ್ರಶ್ನೆ ಉದ್ಭವಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More