ಚಾಮರಾಜನಗರ: ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗಿದೆ. ವಾರದಲ್ಲಿ 4 ದಿನ ಸಂಪೂರ್ಣ ಲಾಕ್ಡೌನ್ ಮಾಡುವುದಾಗಿ ಸಚಿವ ಸುರೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ. ಗುರುವಾರ, ಶುಕ್ರವಾರ, ಶನಿವಾರ, ಭಾನುವಾರ ನಿರ್ಬಂಧ ಹೇರಲಾಗಿದೆ. ಸೋಮವಾರ, ಮಂಗಳವಾರ, ಬುಧವಾರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದೆ.
ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 39,305 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೊವಿಡ್ 19ರಿಂದ 596 ಜನರ ನಿಧನರಾಗಿದ್ದಾರೆ. ಇದೇ ಅವಧಿಯಲ್ಲಿ ಬೆಂಗಳೂರಿನಲ್ಲಿ 16,747 ಜನರಿಗೆ ಸೋಂಕು ತಗುಲಿರುವುದು ಪತ್ತೆಯಾಗಿದ್ದು, 374 ಜನರು ರಾಜಧಾನಿಯೊಂದರಲ್ಲೇ ಕೊವಿಡ್ನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗಿನ ಕೊರೊನಾ ಸೋಂಕಿತರ ಸಂಖ್ಯೆ 19,73,683ಕ್ಕೆ ಏರಿಕೆಯಾಗಿದ್ದು, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 9,67,640ಕ್ಕೆ ಏರಿಕೆಯಾಗಿದೆ. 571006 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ಮೃತಪಟ್ಟವರನ್ನೂ ಸೇರಿ ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 19,372 ಜನರ ಸಾವನ್ನಪ್ಪಿದ್ದು, 5,71,006 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 8,431 ಜನರ ಸಾವನ್ನಪ್ಪಿದ್ದು, 3,52,454 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಜಿಲ್ಲಾವಾರು ಸೋಂಕಿತರ ವಿವರ
ಬೆಂಗಳೂರು ನಗರ ಜಿಲ್ಲೆ 16747, ತುಮಕೂರು 2,168, ಹಾಸನ 1,800, ಮೈಸೂರು 1,537, ದಕ್ಷಿಣ ಕನ್ನಡ 1,175, ಮಂಡ್ಯ 1,133, ಧಾರವಾಡ 1,006, ಕಲಬುರಗಿ 988, ಬಾಗಲಕೋಟೆ 968, ಬಳ್ಳಾರಿ 973, ಉತ್ತರ ಕನ್ನಡ 885, ಉಡುಪಿ 855, ಶಿವಮೊಗ್ಗ 820, ಕೋಲಾರ 755, ಬೆಳಗಾವಿ 736, ಯಾದಗಿರಿ 727, ವಿಜಯಪುರ 659, ಬೆಂಗಳೂರು ಗ್ರಾಮಾಂತರ 704, ಚಾಮರಾಜನಗರ 623, ಚಿಕ್ಕಬಳ್ಳಾಪುರ 599, ರಾಯಚೂರು 582, ಕೊಡಗು 534, ಕೊಪ್ಪಳ 412, ರಾಮನಗರ 337, ಚಿಕ್ಕಮಗಳೂರು 362, ಗದಗ 332, ಬೀದರ್ 305, ಹಾವೇರಿ 214, ದಾವಣಗೆರೆ 197, ಚಿತ್ರದುರ್ಗ ಜಿಲ್ಲೆಯಲ್ಲಿ 172 ಪ್ರಕರಣ ದಾಖಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ: ಕೊರೊನಾ ಮೂರನೇ ಅಲೆ ಎದುರಿಸಲು ಟಾಸ್ಕ್ ಫೋರ್ಸ್ ಸಮಿತಿ ರಚಿಸುವಂತೆ ಬಿ.ಎಸ್. ಯಡಿಯೂರಪ್ಪ ಆದೇಶ
ಕೊರೊನಾ ಸಂದರ್ಭದಲ್ಲಿ ಸೆಂಟ್ರಲ್ ವಿಸ್ತಾ ಯೋಜನೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕಾರಿಣಿ ನಿರ್ಣಯ
Published On - 9:20 pm, Mon, 10 May 21