ವಿಜಯಪುರ: ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಾಕಿ ಕಾಮಗಾರಿಗಳನ್ನು ಕೂಡಲೇ ಮುಕ್ತಾಯ ಮಾಡಬೇಕು ಎಂದು ಜಿಲ್ಲಾ ಪಂಚಾಯತಿ ಸಭಾ ಭವನದಲ್ಲಿ ಹಮ್ಮಿಕೊಂಡಿದ್ದ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಸಂಸದ ರಮೇಶ ಜಿಗಜಿಣಗಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಂಸದರಿಗೆ ವಿವರಣೆ:
ಸಭೆಗೆ ಆಗಮಿಸಿದ್ದ ಜಿ.ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಮಾತನಾಡುತ್ತ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 2,70,396 ಕುಟುಂಬಗಳು ನೋಂದಣಿ ಮಾಡಿಕೊಂಡಿವೆ. ಅವುಗಳಲ್ಲಿ, 2,70,280 ಕುಟುಂಬಗಳಿಗೆ ಉದ್ಯೋಗ ಚೀಟಿಗಳನ್ನು ನೀಡಲಾಗಿದೆ. 1,046 ಕುಟುಂಬಗಳು 100 ದಿನ ಉದ್ಯೋಗ ಪೂರ್ಣಗೊಳಿಸಿವೆ. 1,08,359 ಕುಟುಂಬಗಳಿಗೆ ಉದ್ಯೋಗ ಬೇಡಿ ಅರ್ಜಿ ಸಲ್ಲಿಸಿದ್ದು, 92,851 ಕುಟುಂಬಗಳಿಗೆ ಉದ್ಯೋಗ ನೀಡಲಾಗಿದೆ ಎಂದು ತಿಳಿಸಿದರು.
ಒಟ್ಟು 44,519 ಕಾಮಗಾರಿಗಳಿವೆ. ಅದರಲ್ಲಿ 16,138 ಕಾಮಗಾರಿಗಳು ಪೂರ್ಣಗೊಂಡಿದ್ದು 28,381 ಕಾಮಗಾರಿಗಳು ಪ್ರಗತಿಯಲ್ಲಿವೆ. ಒಟ್ಟು 38,29,549 ಮಾನವ ದಿನಗಳ ಉತ್ಪತ್ತಿಯಾಗಿವೆ ಎಂದು ವಿವರಣೆ ನೀಡಿದರು.
ಇದೇ ವೇಳೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಯೋಜನಾ ನಿರ್ದೇಶಕರು ಮಾತನಾಡಿ ಒಟ್ಟು 212 ಗ್ರಾಮ ಪಂಚಾಯತ್‍ಗಳಲ್ಲಿ 159 ಗ್ರಾಮ ಪಂಚಾಯತ್ ಒಕ್ಕೂಟಗಳ ರಚನೆ ಮಾಡಲಾಗಿದೆ. 83 ಒಕ್ಕೂಟಗಳಿದ್ದು, 803.25 ಲಕ್ಷಗಳ ಅನುದಾವನ್ನು ಸ್ವ ಸಹಾಯ ಸಂಘಗಳ ಮಹಿಳೆಯರು ಸಾಲವನ್ನು ಪಡೆದುಕೊಂಡು ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಮಾಡುತ್ತಾ ಆರ್ಥಿಕವಾಗಿ ಸಬಲರನ್ನಾಗಿ ಹೊಂದಲು ಖರ್ಚು ಮಾಡಲಾಗಿದೆ ಎಂದು ತಿಳಿಸಿದರು.
ಗ್ರಾಮ ಸಡಕ್ ಯೋಜನೆ:
ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 111.52 ಕಿ.ಮೀ ರಸ್ತೆ ಮಂಜೂರಾಗಿದ್ದು 4.5 ಕಾಮಗಾರಿ ಪೂರ್ಣಗೊಂಡಿದೆ ಎಂದು ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದರು. ಈ ಕುರಿತಂತೆ, ಇನ್ನುಳಿದ ಕಾಮಗಾರಿಯನ್ನು ಪೂರ್ಣಗೊಳಿಸಲು ಸಂಸದ ರಮೇಶ ಜಿಗಜಿಣಗಿ ಸೂಚಿಸಿದರು.
ಅದೇ ರೀತಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ 19,957 ಮನೆಗಳು ಮಂಜೂರಾಗಿದೆ. ಈ ಪೈಕಿ 17,072 ಫಲಾನುಭವಿಗಳನ್ನು ಅನುಮೋದಿಸಲಾಗಿದೆ. ಇದರಲ್ಲಿ 3,542 ಮನೆಗಳ ನಿರ್ಮಾಣ ಕಾರ್ಯ ಪ್ರಾರಂಭವಾಗಿದ್ದು 1,533 ಪಾಯಾ ಹಂತದಲ್ಲಿ 2,737 ಲಿಂಟನ್ ಹಂತದಲ್ಲಿ, 2,714 ರೂಫ್ ಹಂತದಲ್ಲಿ ಹಾಗೂ 5,628 ಮನೆಗಳು ಪೂರ್ಣಗೊಂಡಿರುತ್ತದೆ ಎಂದು ಸಭೆಯಲ್ಲಿ ಆಧಿಕಾರಿಗಳು ತಿಳಿಸಿದರು.
ಗ್ರಾಮೀಣ ಕುಡಿಯುವ ನೀರು ಯೋಜನೆ:
ಗ್ರಾಮೀಣ ಕುಡಿಯುವ ನೀರು ಯೋಜನೆಯಡಿ ವಿಜಯಪುರ 96, ಇಂಡಿ 40 ಬಸವನ ಬಾಗೆವಾಡಿ 85, ಮುದ್ದೇಬಿಹಾಳ 68 ಮತ್ತು ಸಿಂದಗಿ 39 ಒಟ್ಟು 328 ಬಹುಹಳ್ಳಿ ಕುಡಿಯುವ ನೀರಿನ ಯೋಜನೆಗಳು ಮಂಜೂರಾಗಿವೆ. ಇವುಗಳಲ್ಲಿ 235 ಪೂರ್ಣಗೊಂಡಿದ್ದು, 93 ಪ್ರಗತಿಯಲ್ಲಿವೆ ಎಂದು ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆ ಆಧಿಕಾರಿಗಳು ಸಭೆಯಲ್ಲಿ ಸಂಸದ ರಮೇಶ ಜಿಗಜಿಣಗಿಗೆ ಮಾಹಿತಿ ನೀಡಿದರು.
ನಮ್ಮ ಜಿಲ್ಲೆಗೆ ಬೇಕೇ ಬೇಕು ಒಂದು ಫುಡ್ ಪಾರ್ಕ್: ಇದು ವಿಜಯಪುರ ರೈತರ, ಯುವಕರ, ಉದ್ಯಮಿಗಳ ಆಗ್ರಹ