ಬಾಗಲಕೋಟೆ: ಸರ್ಕಾರಿ ಶಾಲೆಗಳಿಗೆ ಕಂಪ್ಯೂಟರ್ ಹಾಗೂ ಪುಸ್ತಕ ವಿತರಣೆ ಅಂಗವಾಗಿ ಜಮಖಂಡಿ ತಾಲ್ಲೂಕಿನ ಹುಲ್ಯಾಳ ಕ್ರಾಸ್ನಲ್ಲಿರುವ ವಿದ್ಯಾಭವನ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪುಸ್ತಕ ವಿತರಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇನ್ಫೋಸಿಸ್ ಫೌಂಡೇಷನ್ ವತಿಯಿಂದ ಸರ್ಕಾರಿ ಶಾಲೆಗಳಿಗೆ 400 ಕಂಪ್ಯೂಟರ್ಗಳನ್ನು ವಿತರಿಸಲಾಯಿತು. ಹಾಗೆಯೇ 100 ಸರ್ಕಾರಿ ಶಾಲೆಗಳ ಗ್ರಂಥಾಲಯಗಳಿಗೆ ಪುಸ್ತಕ ವಿತರಣೆ ಮಾಡಲಾಯಿತು.
ಮೇ ಎರಡನೇ ವಾರದಲ್ಲಿ ದ್ವಿತೀಯ PUC, ಜೂನ್ ಮೊದಲ ವಾರದಲ್ಲಿ SSLC ಪರೀಕ್ಷೆ- ಸಚಿವ ಸುರೇಶ್ ಕುಮಾರ್ ಘೋಷಣೆ