ಎರಡು ತಿಂಗಳಲ್ಲಿ ಸಾಹಿತ್ಯ ಪರಿಷತ್ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ

TV9 Digital Desk

| Edited By: Ghanashyam D M | ಡಿ.ಎಂ.ಘನಶ್ಯಾಮ

Updated on: Sep 15, 2021 | 5:25 PM

ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯನ್ನು ಎರಡು ತಿಂಗಳ ಒಳಗೆ ನಡೆಸಬೇಕು ಎಂದು ಧಾರವಾಡ ಹೈಕೋರ್ಟ್​ ಪೀಠವು ಬುಧವಾರ ಆದೇಶ ನೀಡಿದೆ

ಎರಡು ತಿಂಗಳಲ್ಲಿ ಸಾಹಿತ್ಯ ಪರಿಷತ್ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ
ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ

ಧಾರವಾಡ: ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯನ್ನು ಎರಡು ತಿಂಗಳ ಒಳಗೆ ನಡೆಸಬೇಕು ಎಂದು ಧಾರವಾಡ ಹೈಕೋರ್ಟ್​ ಪೀಠವು ಬುಧವಾರ ಆದೇಶ ನೀಡಿದೆ. ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರುವ ಶೇಖರಗೌಡ ಮಾಲಿಪಾಟೀಲ್ ಈ ಸಂಬಂಧ ಹೈಕೋರ್ಟ್​ ಮೊರೆ ಹೋಗಿದ್ದರು.

ಮೇ 9ಕ್ಕೆ ನಡೆಯಬೇಕಿದ್ದ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯನ್ನು ಕೊರೊನಾ ಹೆಚ್ಚಳವಾದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಚುನಾವಣೆ ನಡೆಸಬೇಕೆಂದು ಒಂದೂವರೆ ತಿಂಗಳ ಹಿಂದೆಯೇ ಸರ್ಕಾರಕ್ಕೆ ಮಾಲಿ ಪಾಟೀಲ್ ಮನವಿ ಸಲ್ಲಿಸಿದ್ದರು. ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಶೇಖರಗೌಡ ಮಾಲಿಪಾಟೀಲ್ ಹೈಕೋರ್ಟ್​ ಮೊರೆ ಹೋಗಿದ್ದರು.

ರಾಜ್ಯದಲ್ಲಿ ಇತ್ತೀಚೆಗಷ್ಟೇ ನಗರ ಪಾಲಿಕೆ ಚುನಾವಣೆಗಳು ನಡೆದಿದ್ದವು. ಇತರ ಚುನಾವಣೆಗಳನ್ನು ನಡೆಸಲು ಸಾಧ್ಯವಿದ್ದರೆ ಸಾಹಿತ್ಯ ಪರಿಷತ್ ಚುನಾವಣೆ ನಡೆಸಲು ಏನು ಸಮಸ್ಯೆ ಎಂದು ಹೈಕೋರ್ಟ್ ಪ್ರಶ್ನಿಸಿತ್ತು. ಮಾಲಿ ಪಾಟೀಲ್ ಅರ್ಜಿಯನ್ನು ಪುರಸ್ಕರಿಸಿದ ಹೈಕೋರ್ಟ್ ಎರಡು ತಿಂಗಳ ಒಳಗೆ ಚುನಾವಣೆ ನಡೆಸುವಂತೆ ಆದೇಶ ನೀಡಿತು.

(Conduct Kannada Sahitya Parishat Election in 2 Months Says Dharwad Highcourt Bench)

ಇದನ್ನೂ ಓದಿ: R. S. Mugali Birthday : ಬಿ. ಎಲ್. ರೈಸ್-ರಂ. ಶ್ರೀ. ಮುಗಳಿ ‘ಕನ್ನಡ ಸಾಹಿತ್ಯ’ ಮುಖಾಮುಖಿ

ಇದನ್ನೂ ಓದಿ: ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರ: ಪ್ರಾಮಾಣಿಕ ಅಭಿವ್ಯಕ್ತಿಯೇ ಸೃಜನಶೀಲತೆ: ಸ್ವಾಮಿ ಪೊನ್ನಾಚಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada