ಚಿಕ್ಕಮಗಳೂರು: ವಿರಳ ಸಾವೊಂದು ಸಂಚರಿಸುತ್ತಿದ್ದ ಬಸ್ನಲ್ಲಿ ಬಂದೆರಗಿದೆ. ನಿರ್ವಾಹಕರೊಬ್ಬರು ಬಸ್ಸಿನಲ್ಲಿಯೇ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಲಯಮಾರುತ ಬಳಿ ಘಟನೆ ನಡೆದಿದೆ. ವಿಜಯ್ (43) ಹೃದಯಾಘಾತದಿಂದ ಸಾವನ್ನಪ್ಪಿರುವ ನಿರ್ವಾಹಕ. ವಿಜಯ್ ಚಿಕ್ಕಮಗಳೂರು-ಉಡುಪಿ ಕೆಎಸ್ಆರ್ಟಿಸಿ (KSRTC) ಬಸ್ ನಲ್ಲಿ ಕಂಡಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶನಿವಾರ ಬೆಳಗ್ಗೆ 6.30ಕ್ಕೆ ಚಿಕ್ಕಮಗಳೂರಿನಿಂದ ಉಡುಪಿ ಕಡೆ ಹೊರಟಿದ್ದ ಬಸ್ನಲ್ಲಿ ಈ ಘಟನೆ ನಡೆದಿದೆ.
ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಮೃತಪಟ್ಟ ಆರೋಪ:
ಕಲಬುರಗಿ: ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಮೃತಪಟ್ಟ ಆರೋಪ ಎದುರಾಗಿದೆ. ಕಲಬುರಗಿಯ ಕರುಣೇಶ್ವರ ಬಡಾವಣೆಯಲ್ಲಿರುವ ಡಾ. ಜಂಪಾ ಕ್ಲಿನಿಕ್ ವಿರುದ್ಧ ಮೃತಳ ಕುಟುಂಬಸ್ಥರು ಈ ಆರೋಪ ಮಾಡಿದ್ದಾರೆ. ಕಲಬುರಗಿ ತಾಲೂಕಿನ ಇಟಗಾದ ನಾಗಮ್ಮ ಬಾಗೋಡಿ (45) ಎಂಬುವವರಿಗೆ ಇದೇ ಕ್ಲಿನಿಕ್‌ನಲ್ಲಿ 3 ದಿನದ ಹಿಂದೆ ಗರ್ಭಕೋಶ ಚಿಕಿತ್ಸೆ ಮಾಡಿದ್ದರು. ಶಸ್ತ್ರಚಿಕಿತ್ಸೆ ಬಳಿಕ ನಾಗಮ್ಮ ಬಾಗೋಡಿ ಸ್ಥಿತಿ ಗಂಭೀರವಾಗಿತ್ತು. ಹೀಗಾಗಿ ಕಳೆದ ರಾತ್ರಿ ಬೇರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಾಗಮ್ಮ ಮೃತಪಟ್ಟಿದ್ದಾರೆ.
ಪ್ರಾಥಮಿಕ ಆರೋಗ್ಯ ಕೇಂದ್ರದೆದುರು ನರಳಾಡಿದ ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳು:
ದಾವಣಗೆರೆ: ಅಪಘಾತದಲ್ಲಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಸಿಗದೆ ಆಸ್ಪತ್ರೆಯ ಬಾಗಿಲಲ್ಲೇ ನರಳಾಡಿದ್ದಾರೆ. ಈ ಮನಕಲಕುವ ದೃಶ್ಯವನ್ನು ಸಾರ್ವಜನಿಕರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದು, ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತ್ಯಾವಣಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಈ ಘಟನೆ ನಡೆದಿದೆ. ಬೇರೆ ಆಸ್ಪತ್ರೆಗೆ ಕರೆದೊಯ್ಯುಲು ಆ್ಯಂಬುಲೆನ್ಸ್ ಸಿಗದ ಹಿನ್ನೆಲೆ ಗಾಯಾಳುಗಳು ಒಂದೂವರೆ ಗಂಟೆಗೂ ಹೆಚ್ಚು ಕಾಲ ಆಸ್ಪತ್ರೆಯ ಹೊರಗೆ ಒದ್ದಾಡಿದ್ದಾರೆ.
ನಲ್ಲೂರು ಗ್ರಾಮದ ಹನುಮಂತಪ್ಪ, ಫಯಾಜ್ ಎಂಬುವವರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದಾರೆ. ಚಿಕಿತ್ಸೆಗೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿದೆ. ಆರೋಗ್ಯ ಕೇಂದ್ರ ವೈದ್ಯರು, ಸಿಬ್ಬಂದಿಗಳಿಲ್ಲದ ಹಿನ್ನೆಲೆ ಗಾಯಾಳುಗಳು ನರಳಾಡಿದ್ದಾರೆ. ಬೇರೆ ಆಸ್ಪತ್ರೆಗೆ ಕರೆದೊಯ್ಯುಲು ಅಂಬ್ಯೂಲೆನ್ಸ್ ಕೂಡ ಸಿಕ್ಕಿಲ್ಲ. ಪ್ರಾಥಮಿಕ ಆರೋಗ್ಯ ಕೇಂದ್ರದ ಆ್ಯಂಬುಲೆನ್ಸ್ ಕೆಟ್ಟು ನಿಂತಿದೆ. ಹೀಗಾಗಿ ಇಬ್ಬರು ಪ್ರಾಥಮಿಕ ಆರೋಗ್ಯ ಕೇಂದ್ರ ಎದುರು ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ.
ಇದನ್ನೂ ಓದಿ:
Nagshekar: 50 ಲಕ್ಷ ರೂ ವಂಚನೆಯಾಗಿದೆ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ಖ್ಯಾತ ನಿರ್ದೇಶಕ ನಾಗಶೇಖರ್
Published On - 9:54 am, Sat, 25 December 21