AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕಮಾಂಡ್ ಮಾಹಿತಿ ಕೇಳಿದ ಬೆನ್ನಲ್ಲೇ ‘ಕೈ’ ಶಾಸಕರ ವಿದೇಶ ಪ್ರವಾಸದ ಬಗ್ಗೆ ಮತ್ತಷ್ಟು ಗೊಂದಲ: ಸಚಿವ ವೆಂಕಟೇಶ್ ಅಚ್ಚರಿಯ ಹೇಳಿಕೆ

ಕರ್ನಾಟಕ ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸದ ವಿಚಾರದಲ್ಲಿ ಗೊಂದಲ ಮತ್ತಷ್ಟು ಹೆಚ್ಚಾಗಿದೆ. ನಮ್ಮ ಇಲಾಖೆಯಿಂದ ಯಾವುದೇ ಪ್ರವಾಸ ಆಯೋಜಿಸಿಲ್ಲ ಎಂದು ಪಶುಸಂಗೋಪನೆ ಸಚಿವ ಕೆ. ವೆಂಕಟೇಶ್ ಸ್ಪಷ್ಟಪಡಿಸಿದ್ದಾರೆ. ಅಧಿಕಾರ ಹಂಚಿಕೆ ಜಟಾಪಟಿ ತೀವ್ರಗೊಂಡಿರುವ ಮತ್ತು ಹೈಕಮಾಂಡ್ ಮಧ್ಯಪ್ರವೇಶದ ನಡುವೆಯೇ ಈ ಸ್ಪಷ್ಟನೆ ಬಂದಿದೆ.

ಹೈಕಮಾಂಡ್ ಮಾಹಿತಿ ಕೇಳಿದ ಬೆನ್ನಲ್ಲೇ ‘ಕೈ’ ಶಾಸಕರ ವಿದೇಶ ಪ್ರವಾಸದ ಬಗ್ಗೆ ಮತ್ತಷ್ಟು ಗೊಂದಲ: ಸಚಿವ ವೆಂಕಟೇಶ್ ಅಚ್ಚರಿಯ ಹೇಳಿಕೆ
ಸಚಿವ ವೆಂಕಟೇಶ್ ಅಚ್ಚರಿಯ ಹೇಳಿಕೆImage Credit source: TV9 Network
ಪ್ರಸನ್ನ ಗಾಂವ್ಕರ್​
| Edited By: |

Updated on: Feb 12, 2026 | 11:04 AM

Share

ಬೆಂಗಳೂರು, ಫೆಬ್ರವರಿ 12: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಒಂದದೆಡೆ ಅಧಿಕಾರ ಹಂಚಿಕೆ ಕಿತ್ತಾಟ ತಾರಕಕ್ಕೇರಿದ್ದರೆ, ಮತ್ತೊಂದೆಡೆ ಶಾಸಕರ ವಿದೇಶ ಪ್ರವಾಸ ವಿಚಾರ ಚರ್ಚೆಯಲ್ಲಿದೆ. ಪಶುಸಂಗೋಪನೆ ಇಲಾಖೆ ವತಿಯಿಂದ ಕೆಲವು ಮಂದಿ ಕಾಂಗ್ರೆಸ್ ಶಾಸಕರು ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಈ ಹಿಂದೆ ಹೇಳಲಾಗಿತ್ತು. ಆದರೆ ಇದೀಗ, ಹೈಕಮಾಂಡ್ ವರದಿ ಕೇಳಿದ ಬೆನ್ನಲ್ಲೇ ಪಶುಸಂಗೋಪನೆ ಇಲಾಖೆ ಸಚಿವ ಕೆ ವೆಂಕಟೇಶ್ ಅಚ್ಚರಿಯ ಮಾಹಿತಿ ನೀಡಿದ್ದಾರೆ. ನಮ್ಮ ಇಲಾಖೆ ವತಿಯಿಂದ ವಿದೇಶ ಪ್ರವಾಸ ಹೋಗುತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ‘ಟಿವಿ9’ ಜತೆ ಮಾತನಾಡಿದ ಅವರು, ಕಾಂಗ್ರೆಸ್​​​ನ ಕೆಲವು ಶಾಸರ ವಿದೇಶ ಪ್ರವಾಸಕ್ಕೂ ನಮ್ಮ ಇಲಾಖೆಗೂ ಸಂಬಂಧ ಇಲ್ಲ. ನಮ್ಮ ಇಲಾಖೆ ವತಿಯಿಂದ ಪ್ರವಾಸ ಆಯೋಜನೆ ಮಾಡಿಲ್ಲ. ಪ್ರವಾಸಕ್ಕೆ ನನಗೂ ಆಹ್ವಾನ ಇತ್ತು, ಆದರೆ ನಾನು ಹೋಗುತ್ತಿಲ್ಲ. ನಾನೇ ವಿದೇಶ ಪ್ರವಾಸಕ್ಕೆ ಹೋಗುತ್ತಿಲ್ಲ ಎಂದು ಹೇಳಿದ್ದಾರೆ.

ಕೆಲ ಹಿರಿಯ ಶಾಸಕರು ವಿದೇಶ ಪ್ರವಾಸ ಹೋಗುತ್ತಿರುವುದು ನಿಜ. ಆದರೆ, ನನ್ನ ಅದು ಇಲಾಖೆಯಿಂದ ಆಯೋಜನೆಯಾದ ಪ್ರವಾಸವಲ್ಲ. ಪಶುಸಂಗೋಪನೆ ಇಲಾಖೆಗೂ ಈ ಪ್ರವಾಸಕ್ಕೂ ಸಂಬಂಧ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಶಾಸಕರ ವಿದೇಶ ಪ್ರವಾಸದ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

ಬುಧವಾರ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕರು ವಿದೇಶ ಪ್ರವಾಸ ಹೋಗುವ ಬಗ್ಗೆ ಮಾಹಿತಿ ಇಲ್ಲ. ಆದಾಗ್ಯೂ ಅವರ ದುಡ್ಡಿನಲ್ಲಿ ಅವರು ಹೋದರೆ ತಪ್ಪೇನು ಎಂದು ಪ್ರಶ್ನಿಸಿದ್ದರು.

ವರದಿ ಕೇಳಿದ್ದ ಹೈಕಮಾಂಡ್

ಮತ್ತೊಂದೆಡೆ, ಅಧಿಕಾರ ಹಂಚಿಕೆ ಜಟಾಪಟಿ ತೀವ್ರಗೊಳ್ಳುತ್ತಿರುವ ಈ ಹೊತ್ತಿನಲ್ಲೇ ಶಾಸಕರು ವಿದೇಶ ಪ್ರವಾಸ ಹೋಗುವುದಕ್ಕೆ ಕಾಂಗ್ರೆಸ್ ಆಂತರಿಕ ವಲಯದಲ್ಲಿ ಕೂಡ ವಿರೋಧ ವ್ಯಕ್ತವಾಗಿತ್ತು. ಅಧಿಕಾರ ಹಂಚಿಕೆ ಸಂಬಂಧಿಸಿದ ರಾಜಕೀಯ ತೀವ್ರಗೊಂಡಿರುವ ಈ ಹೊತ್ತಿನಲ್ಲಿ ವಿದೇಶ ಪ್ರವಾಸ ಬೇಕಿತ್ತಾ ಎಂಬ ಪ್ರಶ್ನೆ ಕೆಲ ನಾಯಕರಿಂದ ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿದ್ದವು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ, ಹೈಕಮಾಂಡ್ ಮಧ್ಯಪ್ರವೇಶಸಿರುವ ಬಗ್ಗೆ ವರದಿಯಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸಕ್ಕೆ ಪಕ್ಷದಲ್ಲೇ ಅಸಮಾಧಾನ: ವರದಿ ಕೇಳಿದ ಹೈಕಮಾಂಡ್

ಇದೀಗ ಸಚಿವ ವೆಂಕಟೇಶ್ ನೀಡಿರುವ ಸ್ಪಷ್ಟನೆ, ಹೈಕಮಾಂಡ್ ಮಧ್ಯ ಪ್ರವೇಶಿಸುತ್ತಿದ್ದಂತೆಯೇ ವಿದೇಶ ಪ್ರವಾಸ ವಿಚಾರದಲ್ಲಿ ಒಳಗೊಳಗೇ ಬದಲಾವಣೆ ಮಾಡಿಕೊಂಡರೇ ಎಂಬ ಪ್ರಶ್ನೆ ಮೂಡಿಸಿದೆ. ಅಲ್ಲದೆ, ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ ವಿಚಾರದಲ್ಲಿ ಮತ್ತಷ್ಟು ಗೊಂದಲ ಮೂಡಿಸಿದ್ದಂತೂ ನಿಜ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ