AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಿಮ್ಕಾ ದಾಖಲೆ ನಿರ್ಮಿಸಿದ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅಭಿನಂದಿಸಿದ ಸದನ

2022ರಲ್ಲಿ ಲಂಡನ್​ನ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ಬರೆದಿದ್ದ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಪರಿಷತ್ ಪ್ರವೇಶಿಸಿ ಇಂದಿಗೆ 43 ವರ್ಷ 201 ದಿನಗಳು ಪೂರ್ಣಗೊಳಿಸುವ ಮೂಲಕ ಲಿಮ್ಕಾ ದಾಖಲೆ ಬರೆದಿದ್ದಾರೆ. ಹೀಗಾಗಿ ಇಡೀ ಸದನವೇ ಹೊರಟ್ಟಿ ಅವರನ್ನು ಅಭಿನಂದಿಸಿದೆ.

ಲಿಮ್ಕಾ ದಾಖಲೆ ನಿರ್ಮಿಸಿದ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅಭಿನಂದಿಸಿದ ಸದನ
ಲಿಮ್ಕಾ ದಾಖಲೆ ನಿರ್ಮಿಸಿದ ವಿಧಾನ ಪರಿಷತ್ ಸಭಾಪತಿ ಹೊರಟ್ಟಿ ಅವರನ್ನು ಅಭಿನಂದಿಸಿದ ಸದನ
TV9 Web
| Edited By: |

Updated on: Feb 13, 2024 | 10:48 PM

Share

ಬೆಂಗಳೂರು, ಫೆ.13: ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಸತತವಾಗಿ 8ನೇ ಬಾರಿಗೆ ವಿಧಾನ ಪರಿಷತ್​ಗೆ ಆಯ್ಕೆಯಾದ ಬಸವರಾಜ ಹೊರಟ್ಟಿ (Basavaraj Horatti) ಅವರ ಹೆಸರು ಲಿಮ್ಕಾ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್​​ಗೆ (Limca Book of World Records) ಸೇರಿರುವ ಹಿನ್ನೆಲೆ ಹೊರಟ್ಟಿ ಅವರನ್ನು ವಿಧಾನಪರಿಷತ್ ಸದಸ್ಯರು ಅಭಿನಂದನೆ ಸಲ್ಲಿಸಿದರು.

ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್ ಮಾತನಾಡಿ, 1980 ರಿಂದ ಹೊರಟ್ಟಿಯವರು ವಿಧಾನ ಪರಿಷತ್ ಸದಸ್ಯರಾಗಿದ್ದು, ಇವತ್ತಿನ ವರೆಗೆ 43 ವರ್ಷಗಳಿಗೂ ಹೆಚ್ಚಿನ ವರ್ಷಗಳು ಒಂದೇ ಕ್ಷೇತ್ರದ ಪ್ರತಿನಿಧಿಯಾಗಿ ಆಯ್ಕೆಗೊಂಡು ಸೇವೆ ಸಲ್ಲಿಸಿದ್ದಾರೆ. ಹೀಗಾಗಿ ಅವರ ಹೆಸರು ಲಿಮ್ಕಾ ದಾಖಲೆ ಸೇರಿದೆ ಎಂದರು.

ಇದನ್ನೂ ಓದಿ: ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್​​​​ ಪಟ್ಟಿಯಲ್ಲಿ ಬಸವರಾಜ ಹೊರಟ್ಟಿ: 2024ನೇ ಸಾಲಿನ ವಾರ್ಷಿಕ ಪುಸ್ತಕ ಪ್ರಕಟ

ವಿಧಾನ ಪರಿಷತ್ ಸದಸ್ಯರಾದ ಉಮಾಶ್ರೀ, ಛಲವಾದಿ ನಾರಾಯಣಸ್ವಾಮಿ, ಭಾರತಿ ಶೆಟ್ಟಿ, ಸಚಿವ ಚೆಲುವರಾಯಸ್ವಾಮಿ, ಸಭಾನಾಯಕ ಭೋಸರಾಜು, ಸದನದ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇನ್ನಿತರರು ಸಭಾಪತಿ ಹೊರಟ್ಟಿ ಅವರಿಗೆ ಅಭಿನಂದನೆ ಸಲ್ಲಿಸಿ ಇವರ ಸಾರ್ವಜನಿಕ ಮತ್ತು ಶಿಕ್ಷಣ ಕ್ಷೇತ್ರದಲ್ಲಿನ ಅಪ್ರತಿಮ ಸಾಧನೆಯನ್ನು ಶ್ಲಾಘಿಸಿದರು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಸಭಾಪತಿ, ತಮಗೆ ಸಹಕಾರ ನೀಡಿದ ಎಲ್ಲರನ್ನೂ ಸ್ಮರಿಸಿ ಕೃತಜ್ಞತೆ ಸಲ್ಲಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್