ಬೆಂಗಳೂರು, ಫೆ.13: ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಸತತವಾಗಿ 8ನೇ ಬಾರಿಗೆ ವಿಧಾನ ಪರಿಷತ್ಗೆ ಆಯ್ಕೆಯಾದ ಬಸವರಾಜ ಹೊರಟ್ಟಿ (Basavaraj Horatti) ಅವರ ಹೆಸರು ಲಿಮ್ಕಾ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ಗೆ (Limca Book of World Records) ಸೇರಿರುವ ಹಿನ್ನೆಲೆ ಹೊರಟ್ಟಿ ಅವರನ್ನು ವಿಧಾನಪರಿಷತ್ ಸದಸ್ಯರು ಅಭಿನಂದನೆ ಸಲ್ಲಿಸಿದರು.
ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್ ಮಾತನಾಡಿ, 1980 ರಿಂದ ಹೊರಟ್ಟಿಯವರು ವಿಧಾನ ಪರಿಷತ್ ಸದಸ್ಯರಾಗಿದ್ದು, ಇವತ್ತಿನ ವರೆಗೆ 43 ವರ್ಷಗಳಿಗೂ ಹೆಚ್ಚಿನ ವರ್ಷಗಳು ಒಂದೇ ಕ್ಷೇತ್ರದ ಪ್ರತಿನಿಧಿಯಾಗಿ ಆಯ್ಕೆಗೊಂಡು ಸೇವೆ ಸಲ್ಲಿಸಿದ್ದಾರೆ. ಹೀಗಾಗಿ ಅವರ ಹೆಸರು ಲಿಮ್ಕಾ ದಾಖಲೆ ಸೇರಿದೆ ಎಂದರು.
ಇದನ್ನೂ ಓದಿ: ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ಪಟ್ಟಿಯಲ್ಲಿ ಬಸವರಾಜ ಹೊರಟ್ಟಿ: 2024ನೇ ಸಾಲಿನ ವಾರ್ಷಿಕ ಪುಸ್ತಕ ಪ್ರಕಟ
ವಿಧಾನ ಪರಿಷತ್ ಸದಸ್ಯರಾದ ಉಮಾಶ್ರೀ, ಛಲವಾದಿ ನಾರಾಯಣಸ್ವಾಮಿ, ಭಾರತಿ ಶೆಟ್ಟಿ, ಸಚಿವ ಚೆಲುವರಾಯಸ್ವಾಮಿ, ಸಭಾನಾಯಕ ಭೋಸರಾಜು, ಸದನದ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇನ್ನಿತರರು ಸಭಾಪತಿ ಹೊರಟ್ಟಿ ಅವರಿಗೆ ಅಭಿನಂದನೆ ಸಲ್ಲಿಸಿ ಇವರ ಸಾರ್ವಜನಿಕ ಮತ್ತು ಶಿಕ್ಷಣ ಕ್ಷೇತ್ರದಲ್ಲಿನ ಅಪ್ರತಿಮ ಸಾಧನೆಯನ್ನು ಶ್ಲಾಘಿಸಿದರು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಸಭಾಪತಿ, ತಮಗೆ ಸಹಕಾರ ನೀಡಿದ ಎಲ್ಲರನ್ನೂ ಸ್ಮರಿಸಿ ಕೃತಜ್ಞತೆ ಸಲ್ಲಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ