ಮೈ ಶುಗರ್ ಕಾರ್ಖಾನೆ ಗೇಟ್ ಬಳಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ, ಕೈ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ

ಮಂಡ್ಯ ಶುಗರ್ ಕಾರ್ಖಾನೆ ಗೇಟ್ ಬಳಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮತಿನ ಚಕಮಕಿ ನಡೆದಿದ್ದು, ಕಾರ್ಖಾನೆ ಮುಂದೆ ಹೈ ಡ್ರಾಮ ಸೃಷ್ಟಿಯಾಗಿದೆ.

ಮೈ ಶುಗರ್ ಕಾರ್ಖಾನೆ ಗೇಟ್ ಬಳಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ, ಕೈ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ
ಮೊಹ್ಮದ್ ನಲಪಾಡ್
Follow us
TV9 Web
| Updated By: ವಿವೇಕ ಬಿರಾದಾರ

Updated on: May 15, 2022 | 12:10 PM

ಮಂಡ್ಯ: (Mandya)ಮೈ ಶುಗರ್ ಕಾರ್ಖಾನೆ (My Sugar Factory) ಗೇಟ್ ಬಳಿ ಕಾಂಗ್ರೆಸ್ (Congress) ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕಾರ್ಖಾನೆ ಮುಂದೆ ಹೈ ಡ್ರಾಮ ಸೃಷ್ಟಿಯಾಗಿದೆ. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ಕಾರ್ಖಾನೆ ಸ್ವಚ್ಛತೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರು ಬಂದಿದ್ದರು. ಈ ವೇಳೆ ಕಾರ್ಖಾನೆ ಪ್ರವೇಶಕ್ಕೆ ಅನುಮತಿ ನೀಡದ ಪೊಲೀಸರು ಕಾರ್ಖಾನೆ ಗೇಟ್ ಬಳೆ ತಡೆದಿದ್ದರು. ಇದರಿಂದ ಫ್ಯಾಕ್ಟರಿ ಮುಂದೆ ಪೊಲೀಸರು ಹಾಗೂ ಯೂಥ್ ಕಾಂಗ್ರೆಸ್ ಮುಖಂಡರ ನಡುವೆ ಮತಿನ ಚಕಮಕಿ ನಡೆದಿದೆ. ಕಾರ್ಖಾನೆ ಪ್ರವೇಶಕ್ಕೆ ಅನುಮತಿ ನೀಡಿದರು ಕಾರ್ಖಾನೆ ಪ್ರವೇಶಕ್ಕೆ ಪೊಲೀಸರು ಬಿಡುತ್ತಿಲ್ಲ ಎಂದು ನಲಪಾಡ್ ಆರೋಪ ಮಾಡಿದ್ದಾರೆ.

ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ಕಾರ್ಖಾನೆ ಮುಂದೆ ಯುವ ಕಾಂಗ್ರೆಸ್ ಕಾರ್ಯಕರ್ತರ ಧರಣಿ ಕೂತಿದ್ದಾರೆ. ಈ ವೇಳೆ ಪೊಲೀಸರು ಕೈ ಕಾರ್ಯಕರ್ತರ ಮನವೊಲಿಸಲು ಯತ್ನಿಸಿದ್ದಾರೆ. ಬ್ಯಾರಿಕೇಡ್ ತಳ್ಳಿ ಒಳ ಪ್ರವೇಶಿಸಲು ಕಾಂಗ್ರೆಸ್ ಮುಖಂಡರು ಯತ್ನಿಸಿದ್ದಾರೆ. ಕಾರ್ಖಾನೆ ಪ್ರವೇಶಕ್ಕೆ ಅನುಮತಿ ನೀಡದ ಪೊಲೀಸರ ನಡೆಗೆ ಆಕ್ರೋಶಗೊಂಡ ಮೊಹಮ್ಮದ್ ನಲಪಾಡ್ ಮೊದಲೇ ಅನುಮತಿ ಪಡೆದಿದ್ದೇವೆ ನಮಗೆ ಕಾರ್ಖಾನೆ ಪ್ರವೇಶಿಸಲು ಬಿಡಿ. ಸ್ವಚ್ಛತೆ ಮಾಡಿದ್ರೆ 10 ಲಕ್ಷ ಫ್ಯಾಕ್ಟರಿಗೆ ಹಣ ಉಳಿಯುತ್ತೆ ಅಂತ ಅಧಿಕಾರಿಗಳೇ ಹೇಳಿದ್ರು. 40% ಕಮಿಷನ್ ಹಣ ಸಿಗಲ್ಲ ಅಂತ ನಮ್ಮನ್ನು ತಡೆಯುತ್ತಿದ್ದೀರಾ? 4ಲಕ್ಷ ಕಮಿಷನ್ ಹಣವನ್ನು ನಾನೇ ಕೊಡ್ತೀನಿ. ಸ್ವಚ್ಛತೆಗೆ ಬಿಡಿ ಎಂದು ಹೇಳಿ ಚೆಕ್ ಬುಕ್ ನಲಪಾಡ್ ತರಲುಹೇಳಿದರು.

ಆದರೆ ಪೊಲೀಸರು ಅನುಮತಿ ನೀಡಿದ ಬಳಿಕ ನೀತಿ ಸಂಹಿತೆ ಜಾರಿಗೆ ಬಂದಿದೆ. ಯಾವುದೇ ಕಾರಣಕ್ಕೂ ಕಾರ್ಖಾನೆ ಒಳಗೆ ಬಿಡುವುದಿಲ್ಲ ಎಂದು ಮನವೊಲಿಸಲು ಯತ್ನಿಸಿದ್ದಾರೆ. ಹೀಗಾಗಿ ರಸ್ತೆಯಲ್ಲೇ ಕುಳಿತು ಯೂತ್ ಕಾಂಗ್ರೆಸ್ ಪ್ರತಿಭಟನೆ ಆರಂಭಿಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ