AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘CM ಪುತ್ರ ವಿಜಯೇಂದ್ರ ವಿರುದ್ಧ ಭ್ರಷ್ಟಾಚಾರ ಆರೋಪ, ದೆಹಲಿಯಲ್ಲಿ ದಾಖಲೆ ಬಿಡುಗಡೆ’

ಮೈಸೂರು: ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ವಿರುದ್ಧ 5,000 ಕೋಟಿ ರೂಪಾಯಿ ಭ್ರಷ್ಟಾಚಾರ ಆರೋಪವಿದೆ. ಈ ಬಗ್ಗೆ ಬಿಜೆಪಿಯವರೇ ನನಗೆ ದಾಖಲೆಗಳನ್ನು ಕೊಟ್ಟಿದ್ದಾರೆ. ಆದರೆ ದಾಖಲೆ ಕೊಟ್ಟವರು ಯಾರೆಂದು ನಾನು ಹೇಳುವುದಿಲ್ಲ ಎಂದು ಮೈಸೂರು ನಗರದಲ್ಲಿ ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ ಆರೋಪಿಸಿದ್ದಾರೆ. ಸಿಎಂ ಪುತ್ರನ ವಿರುದ್ಧ ಸಹಿ ಹಾಕಿದ್ದಾರಾ ಬಿಜೆಪಿ ಶಾಸಕರು? ನಾವು ದಾಖಲೆಗಳನ್ನು ಕಂತುಗಳ ಪ್ರಕಾರ ಬಿಡುಗಡೆ ಮಾಡ್ತೇವೆ. ಬಿಜೆಪಿ ಶಾಸಕರು ಸಹಿ ಸುಳ್ಳು ಎಂದು ಅವರು ಹೇಳಬಹುದು. ಆದ್ರೆ ಸಿಎಂ ಪುತ್ರ […]

‘CM ಪುತ್ರ ವಿಜಯೇಂದ್ರ ವಿರುದ್ಧ ಭ್ರಷ್ಟಾಚಾರ ಆರೋಪ, ದೆಹಲಿಯಲ್ಲಿ ದಾಖಲೆ ಬಿಡುಗಡೆ’
ಆಯೇಷಾ ಬಾನು
| Edited By: |

Updated on: Aug 26, 2020 | 1:09 PM

Share

ಮೈಸೂರು: ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ವಿರುದ್ಧ 5,000 ಕೋಟಿ ರೂಪಾಯಿ ಭ್ರಷ್ಟಾಚಾರ ಆರೋಪವಿದೆ. ಈ ಬಗ್ಗೆ ಬಿಜೆಪಿಯವರೇ ನನಗೆ ದಾಖಲೆಗಳನ್ನು ಕೊಟ್ಟಿದ್ದಾರೆ. ಆದರೆ ದಾಖಲೆ ಕೊಟ್ಟವರು ಯಾರೆಂದು ನಾನು ಹೇಳುವುದಿಲ್ಲ ಎಂದು ಮೈಸೂರು ನಗರದಲ್ಲಿ ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ ಆರೋಪಿಸಿದ್ದಾರೆ.

ಸಿಎಂ ಪುತ್ರನ ವಿರುದ್ಧ ಸಹಿ ಹಾಕಿದ್ದಾರಾ ಬಿಜೆಪಿ ಶಾಸಕರು? ನಾವು ದಾಖಲೆಗಳನ್ನು ಕಂತುಗಳ ಪ್ರಕಾರ ಬಿಡುಗಡೆ ಮಾಡ್ತೇವೆ. ಬಿಜೆಪಿ ಶಾಸಕರು ಸಹಿ ಸುಳ್ಳು ಎಂದು ಅವರು ಹೇಳಬಹುದು. ಆದ್ರೆ ಸಿಎಂ ಪುತ್ರ ಬಿ.ವೈ.ವಿಜಯೇಂದ್ರ ಭ್ರಷ್ಟಾಚಾರ ಮಾಡಿದ್ದಾರೆ. ಇದರ ಸಂಪೂರ್ಣ ದಾಖಲೆ ಮುಂದಿನ ದಿನಗಳಲ್ಲಿ‌ ಬಿಡುಗಡೆ ಮಾಡುತ್ತೇವೆ ಎಂದಿದ್ದಾರೆ.

ಇನ್ನು ಈ ಬಗ್ಗೆ 10 ದಿನದೊಳಗೆ ಸಿಬಿಐ ತನಿಖೆಯಾದ್ರೂ ನಡೆಸಬೇಕು. ಇಲ್ಲದಿದ್ದರೆ ಸಾಂವಿಧಾನಿಕ ಪೀಠ ರಚಿಸಿ ವಿಚಾರಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ ಬಿಜೆಪಿಯ 7 ಶಾಸಕರು ಬಿಜೆಪಿ ಉಳಿಸಿ ಎಂದು ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ. ಆದರೆ ಆ ಏಳು ಶಾಸಕರು ಯಾರೆಂಬುದು ನನಗೆ ಗೊತ್ತಿಲ್ಲ.

ದೆಹಲಿಯಲ್ಲಿ ಸಿಡಿಯಲಿದ್ಯಾ ದಾಖಲೆಯ ಸಿಡಿ? ಇನ್ನು ಈ ಆರೋಪದ ಕುರಿತು ಬಿಜೆಪಿ ಶಾಸಕರು ಬರೆದಿದ್ದಾರೆ ಎನ್ನಲಾದ ಪತ್ರವನ್ನು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ‘ಸಿಎಂ, ಸೂಪರ್ ಸಿಎಂ’-‘ಜಿಎಸ್‌ಟಿ v/s ವಿಎಸ್‌ಟಿ. ಸೂಪರ್ ಸಿಎಂ ವಿಜಯೇಂದ್ರ ದರ್ಬಾರ್ ಹೆಸರಿನಲ್ಲಿ ಬೇನಾಮಿ ಸಂಪತ್ತು ಮಾಡಿದ್ದಾರೆಂದು ಗಂಭೀರವಾಗಿ ಆರೋಪ ಮಾಡಲಾಗಿದೆ. ವಿಜಯೇಂದ್ರ ಎಲ್ಲ ಇಲಾಖೆಗಳಲ್ಲೂ ಉಸ್ತುವಾರಿಗಳನ್ನ ಇಟ್ಟುಕೊಂಡಿದ್ದಾರೆ. 32 ಜನರ ಕೂಟವನ್ನು ವಿಜಯೇಂದ್ರ ಮಾಡಿಕೊಂಡಿದ್ದಾರೆ. ಬಿ.ವೈ.ವಿಜಯೇಂದ್ರ ಪರ್ಯಾಯ ಸರ್ಕಾರ ನಡೆಸುತ್ತಿದ್ದಾರೆ ಎಂದು ಬಿಜೆಪಿ ಶಾಸಕರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂದೂ ಲಕ್ಷ್ಮಣ್​ ಆರೋಪಿಸಿದ್ದಾರೆ.

ಜೊತೆಗೆ ಟ್ರಾನ್ಸ್​ಫರ್​ ದಂಧೆಯಲ್ಲಿ ಕೋಟಿಗಟ್ಟಲೆ ಲೂಟಿ ಮಾಡಿದ್ದಾರೆ ಎಂದಿದ್ದಾರೆ. ಸೆಪ್ಟೆಂಬರ್ 2 ಅಥವಾ 3ನೇ ವಾರದಲ್ಲಿ ದಾಖಲೆ ಬಿಡುಗಡೆ ಮಾಡ್ತೇವೆ. ದೆಹಲಿಯಲ್ಲಿ ನಾವು ಸಮಗ್ರ ದಾಖಲೆ ಬಿಡುಗಡೆ ಮಾಡುತ್ತೇವೆ. ಆಡಿಯೋ, ವಿಡಿಯೋ ಕ್ಲಿಪ್‌ಗಳನ್ನ ನಾವು ಕ್ರೋಡೀಕರಿಸಿದ್ದೇವೆ. ಬಿಜೆಪಿಯವರ ಎಲ್ಲ ಅಕ್ರಮಗಳನ್ನು ಬಯಲು ಮಾಡುತ್ತೇವೆ. ನಿಮ್ಮ ಅಕ್ರಮಗಳ ಬಗ್ಗೆ ನಿಮ್ಮವರೇ ಪತ್ರ ಬರೆದಿದ್ದಾರೆ. ರಾಜ್ಯದ 7 ಬಿಜೆಪಿ ಶಾಸಕರು ಸಹಿ ಹಾಕಿರುವ ಪತ್ರವೂ ಇದೆ. ಬಿಜೆಪಿ ಉಳಿಸಿ ಎಂದು ಬಿಜೆಪಿ ಹೈಕಮಾಂಡ್​ಗೆ ಬಿಜೆಪಿ ಶಾಸಕರೇ ಪತ್ರ ಬರೆದಿದ್ದಾರೆ. ಆ ಪತ್ರದ ಬಗ್ಗೆ ನೀವೇ ತನಿಖೆ ನಡೆಸಿ ಎಂದು ಲಕ್ಷ್ಮಣ್​ ಒತ್ತಾಯಿಸಿದ್ದಾರೆ.

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ