ಲಸಿಕೆ ಸೇವಾ ಶುಲ್ಕ ಹೆಚ್ಚಿಸಿದ್ದಕ್ಕೆ ಸಿದ್ದರಾಮಯ್ಯ ಆಕ್ರೋಶ; ಸರ್ಕಾರದ ನಡೆಯ ವಿರುದ್ಧ ಖಡಕ್ ಪ್ರಶ್ನೆ

| Updated By: ganapathi bhat

Updated on: Aug 14, 2021 | 1:11 PM

ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯ ಇರುವ ಲಸಿಕೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಯಾಕಿಲ್ಲ ಎಂದು ಹೈಕೋರ್ಟ್‌ ಚಾಟಿ‌ ಬೀಸಿದರೂ ರಾಜ್ಯದ ಬಿಜೆಪಿ ಸರ್ಕಾರ ಖಾಸಗಿ‌ ಆಸ್ಪತ್ರೆಗಳ‌ ಸುಲಿಗೆಯನ್ನು ಬೆಂಬಲಿಸುತ್ತಿರುವುದು ನಿರ್ಲಜ್ಜತನದ ಪರಮಾವಧಿ ಎಂದು ಕಡುನುಡಿಗಳಿಂದ ಟೀಕಿಸಿದ್ಧಾರೆ.

ಲಸಿಕೆ ಸೇವಾ ಶುಲ್ಕ ಹೆಚ್ಚಿಸಿದ್ದಕ್ಕೆ ಸಿದ್ದರಾಮಯ್ಯ ಆಕ್ರೋಶ; ಸರ್ಕಾರದ ನಡೆಯ ವಿರುದ್ಧ ಖಡಕ್ ಪ್ರಶ್ನೆ
ಸಿದ್ದರಾಮಯ್ಯ (ಸಂಗ್ರಹ ಚಿತ್ರ)
Follow us on

ಬೆಂಗಳೂರು: ಲಸಿಕೆ ಸೇವಾ ಶುಲ್ಕ ಹೆಚ್ಚಿಸಿದ್ದಕ್ಕೆ ಕಾಂಗ್ರೆಸ್ ಮುಖಂಡ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ. ಶುಲ್ಕ ಹೆಚ್ಚಿಸಿದ್ದನ್ನು ಖಂಡಿಸಿ ಸಿದ್ದರಾಮಯ್ಯ ಫೇಸ್​​ಬುಕ್​ ಬರಹ ಹಂಚಿಕೊಂಡಿದ್ದಾರೆ. ಸರ್ಕಾರ ಜನರ ಹಿತಾಸಕ್ತಿಯನ್ನು ಕಾಪಾಡುತ್ತಿದೆಯೋ ಅಥವಾ ಖಾಸಗಿ ಆಸ್ಪತ್ರೆಗಳ ಹಿತಾಸಕ್ತಿ ಕಾಪಾಡ್ತಿದೆಯೋ ಎಂದು ಪ್ರಶ್ನಿಸಿದ್ದಾರೆ.

₹100 ಸೇವಾಶುಲ್ಕ ಸ್ವೀಕರಿಸುವಂತೆ ಕೇಂದ್ರದ ಆದೇಶವಿದೆ ಆದರೂ ತೇಜಸ್ವಿ ಸೂರ್ಯ ₹900ಕ್ಕೆ ಲಸಿಕೆ ಮಾರುತ್ತಿದ್ದಾರೆ. ತೇಜಸ್ವಿ ಸೂರ್ಯ ವಿರುದ್ಧ ಕ್ರಮ ಯಾಕಿಲ್ಲ ಮುಖ್ಯಮಂತ್ರಿಗಳೇ? ಎಂದು ಬಿ.ಎಸ್. ಯಡಿಯೂರಪ್ಪರನ್ನು ಪ್ರಶ್ನಿಸಿದ್ದಾರೆ.

ಜನತೆಗೆ‌ ಉಚಿತವಾಗಿ ಲಸಿಕೆ ಸಿಗುವಂತೆ ಮಾಡಬೇಕು. ಹಾಗೆ ಲಸಿಕೆ‌ ಸಿಗುವಂತೆ ಮಾಡಬೇಕಾಗಿರುವ ಆರೋಗ್ಯ ಸಚಿವ ಸುಧಾಕರ್, ಖಾಸಗಿ ಆಸ್ಪತ್ರೆಗಳ ಪರವಾಗಿ ಪ್ರಚಾರಕ್ಕಿಳಿದಿದ್ದಾರೆ. ಇವರು ಸಚಿವರೋ ಖಾಸಗಿ ಆಸ್ಪತ್ರೆಗಳ ಪ್ರಚಾರಕರೋ? ಸರ್ಕಾರ ಸೇವಾ ಶುಲ್ಕ‌ ದುಪ್ಪಟ್ಟುಗೊಳಿಸಿ ಸುಲಿಗೆ ಬೆಂಬಲಿಸಿದೆ ಎಂದು ಸರ್ಕಾರದ ವಿರುದ್ಧ ಸಿದ್ದರಾಮಯ್ಯ ದಾಳಿ ನಡೆಸಿದ್ದಾರೆ.

ಕಳೆದ ಏಪ್ರಿಲ್‌ನಲ್ಲಿ ರಾಜ್ಯ ಸರ್ಕಾರ ಖಾಸಗಿ‌ ಸಂಸ್ಥೆಗಳು ನೀಡುವ ಲಸಿಕೆಗೆ ರೂ.100 ಸೇವಾ ಶುಲ್ಕವನ್ನು‌ ನಿಗದಿಪಡಿಸಿದ್ದರೂ, ಖಾಸಗಿ ಆಸ್ಪತ್ರೆಗಳು ಲಸಿಕೆಗೆ ಹೆಚ್ಚುವರಿ‌ ಶುಲ್ಕ ವಸೂಲಿ‌ ಮಾಡುತ್ತಿದ್ದಾರೆನ್ನುವ ದೂರುಗಳಿವೆ. ಹೀಗಿರುವಾಗಲೇ ಸರ್ಕಾರ ಸೇವಾ ಶುಲ್ಕವನ್ನು ದುಪ್ಪಟ್ಟುಗೊಳಿಸಿ ಸುಲಿಗೆಯನ್ನು ಬೆಂಬಲಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯ ಇರುವ ಲಸಿಕೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಯಾಕಿಲ್ಲ ಎಂದು ಹೈಕೋರ್ಟ್‌ ಚಾಟಿ‌ ಬೀಸಿದರೂ ರಾಜ್ಯದ ಬಿಜೆಪಿ ಸರ್ಕಾರ ಖಾಸಗಿ‌ ಆಸ್ಪತ್ರೆಗಳ‌ ಸುಲಿಗೆಯನ್ನು ಬೆಂಬಲಿಸುತ್ತಿರುವುದು ನಿರ್ಲಜ್ಜತನದ ಪರಮಾವಧಿ ಎಂದು ಕಡುನುಡಿಗಳಿಂದ ಟೀಕಿಸಿದ್ಧಾರೆ.

ರಾಜ್ಯದ ಜನತೆಗೆ‌ ಉಚಿತವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಕೊರೊನಾ ಲಸಿಕೆ‌ ಸಿಗುವಂತೆ ಮಾಡಬೇಕಾಗಿರುವ ಆರೋಗ್ಯ ಸಚಿವ ಡಾ.ಕೆ ಸುಧಾಕರ್, ಖಾಸಗಿ ಆಸ್ಪತ್ರೆಗಳ ಪರವಾಗಿ ಪ್ರಚಾರಕ್ಕಿಳಿದಿದ್ದಾರೆ. ಇವರು ಸಚಿವರೋ? ಖಾಸಗಿ ಆಸ್ಪತ್ರೆಗಳ ಪ್ರಚಾರಕರೋ? ಖಾಸಗಿ ಆಸ್ಪತ್ರೆಗಳು ಲಸಿಕಾ ತಯಾರಿಕ ಸಂಸ್ಥೆ ನಿಗದಿಪಡಿಸಿದ ದರದ ಜೊತೆಗೆ ರೂ.100 ಸೇವಾಶುಲ್ಕ ಮಾತ್ರ ವಸೂಲಿ ಮಾಡಬೇಕೆಂದು ಕೇಂದ್ರ ಸರ್ಕಾರದ ಸುತ್ತೋಲೆ ಇದ್ದರೂ, ಲಸಿಕೆಯನ್ನು 900ರೂ.ಗೆ‌ ಮಾರಾಟ‌ ಮಾಡುತ್ತಿರುವ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕ್ರಮ ಯಾಕಿಲ್ಲ ಮುಖ್ಯಮಂತ್ರಿಗಳೇ? ಎಂದು ಬರೆದುಕೊಂಡಿದ್ದು ವ್ಯಾಕ್ಸಿನ್ ಫಾರ್ ಆಲ್ ಎಂಬ ಹ್ಯಾಷ್​ಟ್ಯಾಗ್​ನ್ನು ಬಳಸಿಕೊಂಡಿದ್ದಾರೆ.

ಇದನ್ನೂ ಓದಿ: Lockdown Extension: ಜೂನ್ 30ರ ವರೆಗೆ ಲಾಕ್​ಡೌನ್ ಮುಂದುವರಿಸಲು ರಾಜ್ಯಗಳಿಗೆ ಕೇಂದ್ರ ಗೃಹ ಇಲಾಖೆ ಸೂಚನೆ

ಕೇಂದ್ರ ಸರ್ಕಾರ ಕೊರೊನಾ ಬಗ್ಗೆ ಅರ್ಥಮಾಡಿಕೊಂಡಿಲ್ಲ; ಲಸಿಕಾ ಅಭಿಯಾನ ಸಮರ್ಪಕವಾಗಿಲ್ಲ: ರಾಹುಲ್ ಗಾಂಧಿ ವಾಗ್ದಾಳಿ

Published On - 11:14 pm, Fri, 28 May 21